Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ*

ಏಪ್ರಿಲ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DESK : ಕೊಡಗು ಮತ್ತು ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರು ಇಂದು ನಗರದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.
ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೈಸೂರು-ಕೊಡಗು ರೈಲು ಸಂಪರ್ಕ, ಐಟಿ-ಬಿಟಿ ಕಂಪೆನಿಗಳಲ್ಲಿ ಕೊಡಗಿನವರಿಗೆ ಆದ್ಯತೆ, ಸಮಗ್ರ ನೀರು ಸರಬರಾಜು ವ್ಯವಸ್ಥೆ, ಪಿರಿಯಾಪಟ್ಟಣದಲ್ಲಿ ಕೃಷಿ ಸಂಶೋಧನಾ ಕೇಂದ್ರ, ಮಡಿಕೇರಿಯಲ್ಲಿ ವೈದ್ಯಕೀಯ ಟ್ರಾಮಾ ಕೇಂದ್ರ ಸ್ಥಾಪನೆ, ಸೋಮವಾರಪೇಟೆಯಲ್ಲಿ ಟೆಕ್ನಾಲಜಿ ಪಾರ್ಕ್, ಕಾಫಿ ಮತ್ತು ಕರಿಮೆಣಸು ಬೆಳೆಗಾರರ ಸಮಸ್ಯೆಗೆ ಪರಿಹಾರ, ಮಡಿಕೇರಿಯಲ್ಲಿ ಮಿನಿ ಏರ್‍ಪೋರ್ಟ್, ಯೋಗ ಶಾಲೆಗಳ ಸ್ಫಾಪನೆ, ಕ್ರೀಡಾಭಿವೃದ್ಧಿ ಪ್ರಾಧಿಕಾರ ಪ್ರಾರಂಭ, ಹುಣಸೂರಿನಲ್ಲಿ ಸೆಂಟ್ರಲ್ ಯೂನಿವರ್ಸಿಟಿ ಸ್ಥಾಪನೆ, ವಿರಾಜಪೇಟೆಯಲ್ಲಿ ಕಂಪ್ಯೂಟರ್ ಹಾರ್ಡ್‍ವೇರ್ ಕೇಂದ್ರ ಆರಂಭ, ಗೋಣಿಕೊಪ್ಪಲುವಿನಲ್ಲಿ ಕಾಫಿ ರಫ್ತು ಕೇಂದ್ರ ಸೇರಿದಂತೆ ವಿವಿಧ ಯೋಜನೆಗಳ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ ಎಂದು ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಹೇಳಿದರು. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಇಂದು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಲಕ್ಷ್ಮಣ್ ಗೌಡ ಹೇಳಿದರು.
ಈ ಬಾರಿ ಕಾಂಗ್ರೆಸ್ 25 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದು, ಕಾಂಗ್ರೆಸ್ ನುಡಿದಂತೆ ನಡೆಯುವ ಮೂಲಕ ಬದ್ದತೆ ಮೆರೆಯಲಿದೆ ಎಂದರಲ್ಲದೇ, ಕಳೆದ ಅವಧಿಯಲ್ಲಿ ಸಂಸದರಾಗಿದ್ದ ಪ್ರತಾಪಸಿಂಹ ಈ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನೆಂದು ಬಹಿರಂಗಪಡಿಸಲಿ. ಪ್ರತಾಪ್ ಸಿಂಹ ಅವರಿಗೆ ಮತ್ತೊಮ್ಮೆ ಸ್ಪರ್ಧಿಸಲು ಟಿಕೆಟ್ ಸಿಗದಿರುವುದಕ್ಕೆ ಕಾರಣವೇನು ಎಂದೂ ಲಕ್ಷ್ಮಣ್ ಪ್ರಶ್ನಿಸಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಕೊಡಗಿಗೆ ಯಾವ ಯೋಜನೆ ಕೊಡುತ್ತೀರಿ ಎಂಬ ಪ್ರಶ್ನೆಗೆ ಬಿಜೆಪಿಯವರಲ್ಲಿ ಉತ್ತರವಿಲ್ಲ. ಜನ ಸಾಮಾನ್ಯರೊಂದಿಗೆ ಬೆರೆಯುವ ಗುಣವಿರುವ ಲಕ್ಷ್ಮಣ್ ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿದ್ದು, ಈ ಬಾರಿಯೂ ಕಾಂಗ್ರೆಸ್ ಅಧಿಕ ಮತಗಳಿಂದ ಗೆಲವು ಸಾಧಿಸಲಿದೆ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ದೂರದೃಷ್ಟಿಯುಳ್ಳ ಉತ್ತಮ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮತದಾರರು ಯೋಗ್ಯರನ್ನು ಸಂಸತ್ತಿಗೆ ಕಳುಹಿಸಬೇಕೆಂದು ಕೋರಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಪ್ರಚಾರ ಸಮಿತಿ ಪ್ರಮುಖರಾದ ಟಿ.ಪಿ.ರಮೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.26: ಕಿರುಂದಾಡು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 36 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ…

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.