Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ

ಏಪ್ರಿಲ್ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.18 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ  ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ  ಬಿರುಸಿನ ಚುನಾವಣಾ ಪ್ರಚಾರ ನಡೆಯಿತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾಂತರ ಘಟಕದ ರಾಜ್ಯಾಧ್ಯಕ್ಷ  ಅಬ್ದುಲ್ ಜಬ್ಬಾರ್ ಮಾತನಾಡಿ ನಮಗೆಲ್ಲ ಈ ಚುನಾವಣೆ ಪರೀಕ್ಷೆ ಇದ್ದಂತೆ. ಬಿಜೆಪಿ ಕಳೆದ ಹತ್ತು ವರ್ಷದಿಂದ ಜನರ ದಿಕ್ಕು ತಪ್ಪಿಸುತ್ತಿದ್ದು, ದೇಶಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಮನುಷ್ಯನಿಗೆ ಊಟ ಇಲ್ಲ ಎಂದರು ನೆಮ್ಮದಿ ಇರಬೇಕು. ಆದ್ದರಿಂದ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದರು.

ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ಸಾವಿರ ನೀಡುತ್ತಿದ್ದಾರೆ.  ಅಲ್ಲದೇ 5 ಗ್ಯಾರಂಟಿ ಯೋಜನೆಗಳ ಮೂಲಕ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿಗರು ಜಾತಿ ವ್ಯವಸ್ಥೆಯನ್ನು ತಂದು ಜಾತಿ, ಜಾತಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ  ಸರ್ಕಾರ ಬೀಳಬೇಕು, ರಾಹುಲ್ ಗಾಂಧಿಯವರು ಪ್ರಧಾನಿ ಯಾಗಬೇಕು. ಅದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್  ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ನಂತರ ಚೆಟ್ಟಳ್ಳಿ, ನೆಲ್ಲಿಹುದಿಕೇರಿ ಗೆ ಭೇಟಿ ನೀಡಿ  ಮತ ಪ್ರಚಾರ ಮಾಡಿದರು.  ಹೂವಿನ ಹಾರ ಎಂ.ಲಕ್ಷ್ಮಣ್ ಅವರನ್ನು ಬರಮಾಡಿಕೊಂಡ ಕಾರ್ಯಕರ್ತರು, ಪ್ರತಿ ಮನೆ, ಮನೆಗಳಿಗೆ ತೆರಳಿ ಲಕ್ಷ್ಮಣ್ ಪರ ಮತಯಾಚಿಸಿದರು.

ಈ ಸಂದರ್ಭ ಮಾತನಾಡಿದ ಲಕ್ಷ್ಮಣ್ ಅವರು,  ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರು ಜನಪರವಾದ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ದೇಶದ ಅಭಿವೃದ್ಧಿ ದೃಷ್ಠಿಯಿಂದ ಈ ಬಾರಿ ಬದಲಾವಣೆ ಖಚಿತ ಎಂದು ವಿಶ್ವಾಸ ವ್ಯಕ್ತಪಡಿದರು.

ಗಿಡ ನೆಟ್ಟಿದ್ದು ನಮ್ಮವರು ಅದು ಫಲ ಕೊಟ್ಟ ಬಳಿಕ ನಾವು ಬೆಳೆದಿದ್ದು ಎಂದು ಹೇಳುತ್ತಾರಲ್ಲ. ಮಾತು ಬಿಟ್ಟರೆ ಸುಳ್ಳು. ಅದಕ್ಕೆ ಉತ್ತರ ಕೊಡ್ಬೇಕು ಅಂದರೆ ಈ ಬಾರಿ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಬೇಕು.  ಕೊಡಗಿನಲ್ಲಿ ಎರಡು ಕಣ್ಮಣಿಗಳಿಗೆ ಅವಕಾಶ ಕೊಟ್ಟಿದ್ದೀರಾ, ನನಗೊಂದು ಅವಕಾಶ ಕೊಡಿ. ತಪ್ಪದೇ ಮತದಾನ ಮಾಡಿ ನನಗೆ ಸಹಕರಿಸಿ. ಬಣ್ಣ ಬಣ್ಣದ ಮಾತಿಗೆ ಮರುಳಾಗ ಬೇಡಿ ಎಂದು ಹೇಳಿದರು.

ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಧರ್ಮ ಮತ್ತು ಅಧರ್ಮವನ್ನು ಅಳತೆ ಮಾಡಿ ಮತ ನೀಡುವ ಚುನಾವಣೆ ಬಂದಿದೆ. ಸೂಕ್ತ ಅಭ್ಯರ್ಥಿಗೆ ದೇಶದಲ್ಲಿ ಮತ ನೀಡಿ ಗೆಲ್ಲಿಸಿ, ನಿಮ್ಮ ಸೇವೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಈ ಸಂದರ್ಭ  ಶಾಸಕ ಎ.ಎಸ್.ಪೊನ್ನಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ದರ್ಮಜ ಉತ್ತಪ್ಪ, ಪಕ್ಷದ ಹಿರಿಯ ನಾಯಕರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು , ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕ, ಸೆಲ್ ಅಧ್ಯಕ್ಷರುಗಳು ಮತ್ತು ಪ್ರಮುಖರು ಭಾಗವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.27 NEWS DESK  : ಮುಂಬರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲೋಕೇಶ್…

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.