Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟದ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟದ ಉದ್ಘಾಟನೆ*

ಏಪ್ರಿಲ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಏ.21 NEWS DESK : ಜಿಲ್ಲೆಯಲ್ಲಿ ಕೊಡವ ಹಾಕಿ ಉತ್ಸವದಂತೆ ಹಗ್ಗಜಗ್ಗಾಟ ಕ್ರೀಡೆಯೂ ಪ್ರಸಿದ್ಧಿ ಹೊಂದಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಬಾಂಡ್ ಗಣಪತಿ ಹೇಳಿದರು.
ಕೆಪಿಎಸ್ ಶಾಲೆಯ ಆಟದ ಮೈದಾನದಲ್ಲಿ ಬೊಟ್ಟೋಳಂಡ ಕುಟುಂಬಸ್ಥರು ಆಯೋಜಿಸಿದ್ದ ಮೂರನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮೊಟ್ಟ ಮೊದಲ ಬಾರಿ ಪೊನ್ನೋಲತಂಡ ಕುಟುಂಬಸ್ಥರು ಕೊಡವ ಹಗ್ಗಜಗ್ಗಾಟ ಕ್ರೀಡಾಕೂಟವನ್ನು ಆರಂಭಿಸಿದ್ದರು. ನಂತರದ ದಿನಗಳಲ್ಲಿ ಇದು ಹಾಕಿ ನಮ್ಮೆಯಂತೆ ಉನ್ನತ ಮಟ್ಟಕ್ಕೆ ಬೆಳೆಯುತ್ತಿದೆ,. ಈ ಬಾರಿ 9 ಮಹಿಳಾ ತಂಡಗಳು ಕೂಡ ಪಾಲ್ಗೊಂಡಿರುವುದು ವಿಶೇಷ ಎಂದರು.
ಕೊಡವ ಜನಾಂಗದಲ್ಲಿ ಹಬ್ಬದ ರೂಪದಲ್ಲಿ ಕ್ರೀಡೆಯನ್ನು ಆಚರಿಸಲಾಗುತ್ತಿದೆ. ಮುಂದಿನ ವರ್ಷ ಐದು ತಂಡಗಳು ಸ್ಪರ್ಧೆ ಆಯೋಜಿಸಲು ಮುಂದೆ ಬಂದಿರುವುದು ಹೆಮ್ಮೆಯ ವಿಷಯ ಎಂದರು.
ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಮಾತನಾಡಿ, ಕಕ್ಕಬ್ಬೆಯಲ್ಲಿ ಮೊದಲ ಬಾರಿಗೆ ಪೊನ್ನೋಲತಂಡ ಕುಟುಂಬಸ್ಥರು ಕೌಟುಂಬಿಕ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಿದರು. ಕೊಡವ ಕುಟುಂಬಗಳ ನಡುವಿನ ಬಲಾಬಲಗಳನ್ನು ಪ್ರದರ್ಶಿಸಲು ಈ ಕ್ರೀಡಾಕೂಟ ಸಹಕಾರಿಯಾಗಲಿದೆ. ಅದರೊಂದಿಗೆ ಕುಟುಂಬಗಳ ನಡುವಿನ ಪರಸ್ಪರ ಸ್ನೇಹ, ಸಾಮರಸ್ಯಕ್ಕೂ ನಾಂದಿಯಾಗಲಿದೆ ಎಂದ ಅವರು ಯಾವುದೇ ತೊಂದರೆ ಇಲ್ಲದೆ ಸುಸೂತರವಾಗಿ ಜರುಗಲಿ ಎಂದು ಶುಭ ಹಾರೈಸಿದರು.
ಕೊಡಗು ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಮಾತನಾಡಿ, ಕ್ರೀಡೆಯಿಂದ ಸಮಾಜದಲ್ಲಿ ಪರಸ್ಪರ ಸಮರಸ್ಯ ಮೂಡಲು ಸಹಕಾರಿ ಎಂದ ಅವರು ಜೊತೆಯಲ್ಲಿ ಆರೋಗ್ಯ ಹಾಗೂ ಶಿಸ್ತಿಗೆ ಪೂರಕವಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ ಕುಶಾಲಪ್ಪ ಮಾತನಾಡಿ, ಪೊನ್ನೋಲತಂಡ ಕುಟುಂಬಸ್ಥರು ಕೊಡವ ಜನಾಂಗದ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಲು ಆರಂಭಿಸಿದ ಹಗ್ಗಜಗ್ಗಾಟ ಸ್ಪರ್ಧೆ ವರ್ಷದಿಂದ ವರ್ಷಕ್ಕೆ ಜನಪ್ರಿಯ ವಾಗುತ್ತಿದೆ.ಕುಟುಂಬಗಳ ನಡುವೆ ಬಾಂಧವ್ಯ ವೃದ್ಧಿಸಲು ಕ್ರೀಡೆ ಸಹಕಾರಿಯಾಗಿದೆಎಂದರು.
ಆಶಿಕಾ ಬೋಪಣ್ಣ ಪ್ರಾರ್ಥಿಸಿದರು. ಬೊಟ್ಟೋಳಂಡ ಗಣೇಶ್ ಗಣಪತಿ ಸ್ವಾಗತಿಸಿ. ಮಾಳೆಟಿರ ಶ್ರೀ ನಿವಾಸ್ ಮತ್ತು ಬಾಳೆಯಡ ದಿವ್ಯ ಮಂದಪ್ಪ ಕಾರ್ಯಕ್ರಮ ನಿರೂಪಿಸಿದರು. ಭವಾನಿ ಜಗದೀಶ್ ವಂದಿಸಿದರು.
ಪ್ರದರ್ಶನ ಪಂದ್ಯಾಟ: ಮಡಿಕೇರಿ ಕೊಡ ಸಮಾಜ ಮತ್ತು ನಾಪೋಕ್ಲು ಕೊಡ ಸಮಾಜ ಮಹಿಳಾ ತಂಡಗಳ ನಡುವೆ ನಡೆದ ಪ್ರದರ್ಶನ ಪಂದ್ಯದಲ್ಲಿ ನಾಪೋಕ್ಲು ತಂಡ ಗೆಲುವು ಸಾಧಿಸಿದರೆ
ನಾಪೋಕ್ಲು ಮತ್ತು ಅಮ್ಮತಿ ಕೊಡವ ಸಮಾಜದ ಪುರುಷರ ತಂಡ ಪಂದ್ಯಾಟದಲ್ಲಿ ನಾಪೋಕ್ಲು ತಂಡ ಗೆಲುವು ಸಾಧಿಸಿತು.
ರ್ಯಕ್ರಮದ ಅಧ್ಯಕ್ಷತೆಯನ್ನು ಬೊಟ್ಟೋಳಂಡ ಕುಟುಂಬದ ಕ್ರೀಡಾ ಸಮಿತಿ ಅಧ್ಯಕ್ಷ ಬೊಟ್ಟೋಳಂಡ ಬಿ.ಗಣೇಶ್ ಗಣಪತಿ ವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಪೇರೂರು ಗ್ರಾಮದ ಕುಟುಂಬದ ಪಟ್ಟೆದಾರ ಬೊಟ್ಟೋಳಂಡ ಪೂಣಚ್ಚ, ಟೂರ್ನಮೆಂಟ್ ಡೈರೆಕ್ಟರ್ ಪೊನ್ನೋಲತಂಡ ಕಿರಣ್ ಪೊನ್ನಪ್ಪ, ಪೊನ್ನೋಲತಂಡ ಕುಟುಂಬದ ಅಧ್ಯಕ್ಷ ಪೊನ್ನೋಲತಂಡ ಬಿದ್ದಯ್ಯ, ಚೆಟ್ಟಂಗಡ ಕುಟುಂಬದ ಕಾರ್ಯದರ್ಶಿ ಚೆಟ್ಟಂಗಡ ರವಿ ಸುಬ್ಬಯ್ಯ, ಬೊಟ್ಟೋಳಂಡ ಕಾಫಿ ಹಿರಿಯರಾದ ಬಿ.ಡಿ.ಬಿದ್ದಯ್ಯ ,ಬೊಟ್ಟೋಳಂಡ ವಾಸು ಮುತ್ತಪ್ಪ, ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.,
ಆಕರ್ಷಕ ಮೆರವಣಿಗೆ : ಹಗ್ಗ ಜಗ್ಗಾಟ ಸ್ಪರ್ಧಾ ಕಾರ್ಯಕ್ರಮದಂದು ಬೆಳಿಗ್ಗೆ ನಾಪೋಕ್ಲು ರಾಮಮಮದಿರದಲ್ಲಿ ಪೂಜೆ ಸಲ್ಲಿಸಿ ಪಟ್ಟಣದಿಂದ ಆಟದ ಮೈದಾನದವರೆಗೆ ಅಬಾಲವೃದ್ಧರಾದಿಯಾಗಿ ಕೊಡವ ಸಾಂಪ್ರದಾಯಿಕ ದಿರಿಸಿನಲ್ಲಿ ದುಡಿಕೊಟ್ ಪಾಟ್ ನೊಂದಿಗೆ ಆಕರ್ಷಕ ಮೆರವಣಿಗೆ ನಡೆಯಿತು. ಮೈದಾನದಲ್ಲಿ ಕ್ರೀಡಾ ಧ್ವಜಾರೋಹಣವನ್ನು ಅತಿಥಿಗಳು ನೆರವೇರಿಸಿದರು.ವೇದಿಕೆ ಉದ್ಘಾಟನೆಯನ್ನು ಕುಟುಂಬದ ಪಟ್ಟೆದಾರ ಬೊಟ್ಟೋಳಂಡ ಪೂಣಚ್ಚ ವೇದಿಕೆಯಲ್ಲಿದ್ದ ಗಣ್ಯರು ನೆರವೇರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಮೇದುರ ವಿಶಾಲ ಕುಶಾಲಪ್ಪ ಬೊಟ್ಟೋಳಂಡ ಕಪ್ ಟ್ರೋಫಿಯನ್ನು ಅನಾವರಣಗೊಳಿಸಿದರು.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.