Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡರಿಗೆ ವಿವಿಧ ಪಕ್ಷಗಳ ಬೆಂಬಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡರಿಗೆ ವಿವಿಧ ಪಕ್ಷಗಳ ಬೆಂಬಲ*

ಏಪ್ರಿಲ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.19 : NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಗೆ 4 ಪಕ್ಷಗಳು ಬೆಂಬಲ ಘೋಷಿಸಿವೆ. ಇಂಡಿಯಾ ಒಕ್ಕೂಟದ ಭಾಗವಾಗಿ ಜಿಲ್ಲೆಯಲ್ಲೂ ಪಂಚ ಪಕ್ಷಗಳ ಸಮಿತಿಯೊಂದನ್ನು ರಚಿಸಿಕೊಂಡಿದ್ದು, ಒಗ್ಗಟ್ಟಾಗಿ ಕಾಂಗ್ರೆಸ್ ನ್ನು ಗೆಲ್ಲಿಸಲು ಶ್ರಮಿಸುವುದಾಗಿ ಮುಖಂಡರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಬಿಜೆಪಿಯನ್ನು ಸೋಲಿಸಲೇಬೇಕೆಂದು ಪಣತೊಟ್ಟು ರಾಷ್ಟ್ರಮಟ್ಟದಲ್ಲಿ ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ. ಇದರ ಭಾಗವಾಗಿ ಕೊಡಗು ಜಿಲ್ಲೆಯಲ್ಲೂ ಕಾಂಗ್ರೆಸ್ ನೊಂದಿಗೆ ಆಮ್ ಆದ್ಮಿ ಪಾರ್ಟಿ, ಸಿಪಿಎಂ, ಸಿಪಿಐ ಮತ್ತು ಸಿಪಿಐಎಂಎಲ್ ಸೇರಿಕೊಂಡು ಪಂಚ ಪಕ್ಷಗಳ ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.
ದೇಶದಲ್ಲಿ ಬಿಜೆಪಿಯ ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸಬೇಕಾಗಿದೆ. ಬಡವರು, ಕಾರ್ಮಿಕರು, ಪರಿಶಿಷ್ಟರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ವಸತಿಹೀನರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಮಾಡಬೇಕಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮತ್ತು ಸಮಸ್ಯೆಗಳಿಗೆ ಸ್ಪಂದಿಸುವ ಸಿದ್ದಾಂತವನ್ನು ಹೊದಿರುವ ಕಾಂಗ್ರೆಸ್ ಪಕ್ಷಕ್ಕೆ ನಾಲ್ಕು ಪಕ್ಷಗಳು ಬೆಂಬಲ ಸೂಚಿಸಿವೆ. ಈ ಪಕ್ಷಗಳ ಪ್ರಮುಖರು ಜಿಲ್ಲೆಯಲ್ಲಿ ಎಂ.ಲಕ್ಷ್ಮಣ್ ಗೌಡರ ಪರ ಮತಯಾಚಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ನಗರದಲ್ಲಿ ಕಾಂಗ್ರೆಸ್ ಸೇರಿದಂತೆ ಐದು ಪಕ್ಷಗಳ ಮುಖಂಡರುಗಳ ಸಭೆ ನಡೆಸಿ ಇಂಡಿಯಾ ಒಕ್ಕೂಟದ ಮಾದರಿಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದೆ. ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಸಂಚಾಲಕರಾಗಿ ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ವಿ.ಸುನಿಲ್, ಸದಸ್ಯರುಗಳಾಗಿ ಭೋಜಣ್ಣ ಸೋಮಯ್ಯ, ಡಿ.ಎಸ್.ನಿರ್ವಾಣಪ್ಪ, ಹೆಚ್.ಬಿ.ರಮೇಶ್ ಹಾಗೂ ಕೆ.ವಿ.ರಾಜು ಕಾರ್ಯನಿರ್ವಹಿಸಲಿದ್ದಾರೆ. ಇಂದಿನಿಂದಲೇ ಎಂ.ಲಕ್ಷ್ಮಣ್ ಗೌಡರ ಪರ ಮತಯಾಚಿಸಲಿದ್ದಾರೆ ಎಂದರು.
ಸರ್ವಾಧಿಕಾರ ಮತ್ತು ಭ್ರಷ್ಟಾಚಾರದಿಂದ ಕೂಡಿದ ಆಡಳಿತವನ್ನು ನೀಡಿದ ಬಿಜೆಪಿಯನ್ನು ಸೋಲಿಸುವ ಹಾಗೂ ಬಡವರಿಗೆ ನ್ಯಾಯ ಒದಗಿಸುವ ಏಕೈಕ ಉದ್ದೇಶದಿಂದ ವಿವಿಧ ಪಕ್ಷಗಳು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತಿದ್ದು, ಎಲ್ಲೂ ಸಂಘರ್ಷಕ್ಕೆ ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದರು.
ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರು ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಕಾಂಗ್ರೆಸ್ ನ ನ್ಯಾಯಸಮ್ಮತ ಭರವಸೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು. ಪರಿಶಿಷ್ಟರು, ಬುಡಕಟ್ಟು ಜನರು, ಅಲ್ಪಸಂಖ್ಯಾತರು ಹಾಗೂ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕೊಡಗು ಜಿಲ್ಲೆಯಲ್ಲಿ ಎಡ ಪಕ್ಷ ಮತ್ತು ಪ್ರಗತಿಪರ ಪಕ್ಷಗಳು ಒಂದೇ ವೇದಿಕೆಯಡಿ ಕಾಂಗ್ರೆಸ್ ಗೆಲುವಿಗಾಗಿ ಶ್ರಮಿಸುತ್ತಿವೆ ಎಂದು ಟಿ.ಪಿ.ರಮೇಶ್ ಹೇಳಿದರು.
ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಮಾತನಾಡಿ ಬಡವರು, ಕೂಲಿ ಕಾರ್ಮಿಕರು ಹಾಗೂ ನೊಂದವರಿಗೆ ನ್ಯಾಯ ಒದಗಿಸುವುದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಗೆ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.
ಸಿಪಿಐಎಂಎಲ್ ರಾಜ್ಯ ಸಂಘಟಕ ಡಿ.ಎಸ್.ನಿರ್ವಾಣಪ್ಪ ಮಾತನಾಡಿ ಕಳೆದ 10 ವರ್ಷಗಳ ಕಾಲ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಜನವಿರೋಧಿ ನೀತಿಗಳನ್ನು ಅನುಸರಿಸಿದೆ. ಅಭಿವೃದ್ಧಿಯನ್ನು ಮರೆತು ಭಾವನಾತ್ಮಕ ವಿಚಾರಗಳನ್ನಷ್ಟೇ ಮುಂದಿಟ್ಟುಕೊಂಡು ಸರ್ವಾಧಿಕಾರ ಮೆರೆದಿದೆ. ಆದಿವಾಸಿಗಳಿಗೆ, ಪರಿಶಿಷ್ಟರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ನ್ಯಾಯ ನೀಡಿಲ್ಲ, ಸಂವಿಧಾನ ಅಪಾಯದಲ್ಲಿದೆ ಎಂದು ಆರೋಪಿಸಿದರು.
ಎನ್‍ಡಿಎ ಮೈತ್ರಿ ಕೂಟವನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿರುವುದಾಗಿ ತಿಳಿಸಿದರು.
ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಮಾತನಾಡಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಸರ್ವಾಧಿಕಾರದಿಂದ ಬಂಧಿಸಲಾಗಿದೆ. ಬಿಜೆಪಿ ಆಡಳಿತದ ದಬ್ಬಾಳಿಕೆಯನ್ನು ತಡೆಯಬೇಕಾಗಿದೆ. ಕಳೆದ 10 ವರ್ಷಗಳಿಂದ ಸುಳ್ಳುಗಳ ಮೂಲಕವೇ ಅಧಿಕಾರ ನಡೆಸಿರುವ ಎನ್‍ಡಿಎ ಮೈತ್ರಿಕೂಟ ಇದೀಗ ಮತ್ತೆ ಮೋದಿ ಅವರ ಹೆಸರು ಹೇಳಿಕೊಂಡು ಮತಯಾಚಿಸುತ್ತಿದೆ ಎಂದು ಟೀಕಿಸಿದರು.
ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಮಿತಿ ಮೀರಿದ ಸಾಲ, ರೈತರ ಕಡೆಗಣನೆ ಸೇರಿದಂತೆ ಆಡಳಿತ ವೈಫಲ್ಯ ವಿರುದ್ಧ ಜನ ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಸಿಪಿಐ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ವಿ.ಸುನಿಲ್ ಮಾತನಾಡಿ ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.