
ಮಡಿಕೇರಿ ಏ.19 NEWS DESK : ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಏ.20 ರಂದು ಜಿಲ್ಲಾ ಸಮಾವೇಶ ಮತ್ತು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಎಂ.ಅಬ್ದುಲ್ ರಶೀದ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಒಕ್ಕೂಟದ ಉಪಾಧ್ಯಕ್ಷ ರಫೀಕ್ ಅಲಿ, ಜಿಲ್ಲಾ ಉಸ್ತುವಾರಿಗಳಾದ ಲೋಕೇಶ್, ಭಾರತೀಶ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಒಕ್ಕೂಟವು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಲಿದೆ. ಕಾಲೇಜಿನಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಒಕ್ಕೂಟದ ಗಮನಕ್ಕೆ ತಂದರೆ ಶಾಸಕರ ಮೂಲಕ ಪರಿಹರಿಸುವ ಕೆಲಸವನ್ನು ಒಕ್ಕೂಟ ಮಾಡಲಿದೆ. ಏ.20 ರಂದು ನಡೆಯುವ ಸಮಾವೇಶ ಮತ್ತು ಪದಗ್ರಹಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಖಲೀಲ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಟಿ.ಆರ್.ಅರ್ಜುನ್ ಹಾಗೂ ಶರಣ್ ಉಪಸ್ಥಿತರಿದ್ದರು.








