
ಮಡಿಕೇರಿ ಏ.20 NEWS DESK : ಸಿದ್ದಾಪುರ ಗ್ರಾ.ಪಂ ಅಧ್ಯಕ್ಷರಾದ ಪ್ರೇಮಾ ಗೋಪಾಲ, ಸದಸ್ಯರಾದ ಅಭಿತಾ, ಮೀನಾ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮೂವರಿಗೆ ಸಾಲು ಹೊದಿಸಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

















