
ಮಡಿಕೇರಿ ಏ.20 NEWS DESK : ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿರಾಜಪೇಟೆ-ಗೋಣಿಕೊಪ್ಪ ರಸ್ತೆಯ ಬಿಟ್ಟಂಗಾಲದಲ್ಲಿ ನಡೆದಿದೆ. ಗಿರೀಶ್ (25) ಮೃತ ದುರ್ದೈವಿಯಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಹನ್ನೊಂದು ವರ್ಷದ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.








