Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಯದ ವಾತಾವರಣ ಸೃಷ್ಟಿ : ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಯದ ವಾತಾವರಣ ಸೃಷ್ಟಿ : ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ*

ಏಪ್ರಿಲ್ 20, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.20 NEWS DESK : ಬಿಜೆಪಿ ಕಾರ್ಯಕರ್ತರಲ್ಲಿ ಭಯದ ವಾತಾವರಣ ಸೃಷ್ಟಿಸಿ ಮನೋಸ್ಥೈರ್ಯವನ್ನು ಕುಗ್ಗಿಸುವ ಯತ್ನ ರಾಜ್ಯಾವ್ಯಾಪಿ ನಡೆಯುತ್ತಿದ್ದು, ವಾಲ್ನೂರಿನಲ್ಲಿ ನಡೆದ ಅಪಘಾತ ಪ್ರಕರಣ ಇದರ ಒಂದು ಭಾಗವಾಗಿದೆ. ಇದಕ್ಕೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಗಂಭೀರ ಆರೋಪ ಮಾಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ವಾಲ್ನೂರಿನಲ್ಲಿ ನಡೆದಿರುವುದು ಆಕಸ್ಮಿಕ ಘಟನೆಯಲ್ಲ, ಉದ್ದೇಶಪೂರ್ವಕ ಅಪಘಾತವಾಗಿದ್ದು, ಬಿಜೆಪಿ ಕಾರ್ಯಕರ್ತ ರಾಮಪ್ಪ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು.
ಈ ಘಟನೆ ಆಕಸ್ಮಿಕವೇ ಆಗಿದ್ದರೆ ಅಪಘಾತ ಮಾಡಿದವರು ಪರಾರಿಯಾಗದೆ ಗಾಯಾಳುಗಳಿಗೆ ನೆರವಾಗುತ್ತಿದ್ದರು. ಬಿಜೆಪಿ ಅಪಘಾತ ಪ್ರಕರಣದ ಲಾಭ ಪಡೆಯುತ್ತಿದೆ ಎನ್ನುವ ಮೂಲಕ ಕಾಂಗ್ರೆಸ್ ಈ ರೀತಿಯ ದಾಳಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಭಯದ ವಾತಾವರಣ ಸೃಷ್ಟಿಯಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಕೊಡಗು ಜಿಲ್ಲೆಯಲ್ಲಿ ಗಾಂಜಾ ದಂಧೆ ಮಿತಿ ಮೀರಿದೆ ಎಂದು ಟೀಕಿಸಿದರು.
::: ಬಿಜೆಪಿಯಿಂದ ರೂ.10 ಲಕ್ಷ :::
ಅಪಘಾತದಲ್ಲಿ ಮೃತಪಟ್ಟ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ ಬಿಜೆಪಿ ವತಿಯಿಂದ ರೂ.10 ಲಕ್ಷ ಮತ್ತು ಇಬ್ಬರು ಗಾಯಾಳುಗಳಿಗೆ ತಲಾ 2ಲಕ್ಷ ರೂ. ನೀಡಲಾಗುವುದು ಎಂದು ಕಿಶೋರ್ ಕುಮಾರ್ ಇದೇ ಸಂದರ್ಭ ತಿಳಿಸಿದರು.
::: ಎಲ್ಲಾ ಗೌಡರಿಗೆ ಯಾಕೆ ಆಹ್ವಾನವಿಲ್ಲ :::
ಉಪಮುಖ್ಯಮಂತ್ರಿಗಳಿಗೆ ಗೌರವ ಸೂಚಿಸಿ ಒಕ್ಕಲಿಗ ಮತ್ತು ಅರೆಭಾಷೆ ಗೌಡರ ಸಭೆಯಲ್ಲಿ ಪಾಲ್ಗೊಂಡಿರುವುದಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಸಮಜಾಯಿಷಿಕೆ ನೀಡಿದ್ದಾರೆ. ಆ ಸಭೆಗೆ ಬಿಜೆಪಿಯಲ್ಲಿದ್ದ ಗೌಡರನ್ನು, ಸುಳ್ಯ, ಕರಿಕೆ ಭಾಗದ ಗೌಡರನ್ನು ಯಾಕೆ ಆಹ್ವಾನಿಸಿಲ್ಲ, ಆಹ್ವಾನಿಸಿದ್ದರೆ ಉಪಮುಖ್ಯಮಂತ್ರಿಗಳಿಗೆ ಗೌರವ ಸೂಚಿಸಿ ನಾವು ಕೂಡ ಹಾಜರಾಗುತ್ತಿದ್ದೆವು ಎಂದರು.
ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ ಪ್ರತಿ ಚುನಾವಣೆಯಲ್ಲಿ ಬಿಜೆಪಿ ಪರ ವಾತಾವರಣವಿರುವಾಗ ಜನರ ದೃಷ್ಟಿಯನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಈ ರೀತಿಯ ಅಶಾಂತಿಯ ವಾತಾವರಣವನ್ನು ಸೃಷ್ಟಿಸುತ್ತದೆ. ಬಿಜೆಪಿ ಕಾರ್ಯಕರ್ತರ ಮನೋಸ್ಥೈರ್ಯ ಕುಗ್ಗಿಸಲು ಷಡ್ಯಂತ್ರ ನಡೆಸುತ್ತದೆ. ರಾಜ್ಯದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರಕಾರದ ಓಲೈಕೆ ರಾಜಕಾರಣಕ್ಕೆ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಮಾತನಾಡಿ ರಾಜ್ಯ ಸರಕಾರ ಬಿಟ್ಟಿ ಭಾಗ್ಯಗಳ ಹಿಂದೆ ಬಿದ್ದಿರುವ ಪರಿಣಾಮ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಗೃಹ ಸಚಿವರು ತನಿಖೆ ನಡೆಯುವ ಮೊದಲೇ ತಮ್ಮ ಮೂಗಿನ ನೇರಕ್ಕೆ ಹೇಳಿಕೆ ನೀಡುತ್ತಿದ್ದಾರೆ. ವಾಲ್ನೂರಿನಲ್ಲಿ ಉದ್ದೇಶಪೂರ್ವಕ ಅಪಘಾತದಿಂದ ರಾಮಪ್ಪ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ ಅವರ ಮೇಲೆ ದೌರ್ಜನ್ಯ ನಡೆದಿದೆ. ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರ ಪರ ಹಾಡು ಮಾಡಿದ ಯುವಕನ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿಯೇ ಕೊಲೆಯಾಗಿದ್ದಾರೆ. ನಾವೇನು ಪಾಕಿಸ್ತಾನದಲ್ಲಿದ್ದೇವೆಯೇ ಎಂದು ಪ್ರಶ್ನಿಸಿದರು.
ಎಲ್ಲಾ ಘಟನೆಗಳ ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮತ್ತೊಬ್ಬ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ಮಾತನಾಡಿ ಅಪಘಾತದಲ್ಲಿ ಮೃತಪಟ್ಟ ರಾಮಪ್ಪ ಅವರ ಕುಟುಂಬಕ್ಕೆ ರಾಜ್ಯ ಸರಕಾರ ರೂ.25 ಲಕ್ಷ ಪರಿಹಾರ ನೀಡಬೇಕು. ಅಪಘಾತ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರನ್ನೂ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಈ ರೀತಿಯ ಘಟನೆಗಳು ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯ ವ್ಯಾಪಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಉನ್ನತ ಮಟ್ಟದ ತನಿಖೆ ನಡೆಸುವ ಅಗತ್ಯವಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಭಯ ಮೂಡಿಸಿ ಮನೋಸ್ಥೈರ್ಯವನ್ನು ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆಲ್ಲ ಬಿಜೆಪಿ ಜಗ್ಗುವುದಿಲ್ಲ, ದೌರ್ಜನ್ಯ ಪ್ರಕರಣಗಳ ವಿರುದ್ಧ ರಾಜ್ಯವ್ಯಾಪಿ ಹೋರಾಟವನ್ನು ತೀವ್ರಗೊಳಿಸುವುದಾಗಿ ತಿಳಿಸಿದರು.
ಕಾರ್ಯಕರ್ತರಿಗೆ ತೊಂದರೆಯಾದಾಗ ಮುಖಂಡರು ಹಾಜರಿದ್ದು, ಪ್ರತಿಭಟನೆ ನಡೆಸುವುದು, ಧೈರ್ಯ ತುಂಬುವುದು ಮತ್ತು ಸಾಂತ್ವನ ಹೇಳುವುದು ಬಿಜೆಪಿ ಪಕ್ಷದ ಸಿದ್ಧಾಂತವಾಗಿದೆ. ಇದನ್ನು ಕೀಳು ಮಟ್ಟದ ರಾಜಕೀಯ ಎಂದು ಕಾಂಗ್ರೆಸ್ಸಿಗರು ಟೀಕಿಸುವುದನ್ನು ಖಂಡಿಸುವುದಾಗಿ ಸುಬ್ರಮಣ್ಯ ಉಪಾಧ್ಯಾಯ ಹೇಳಿದರು.
ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಹಾಗೂ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ರಾಜ್ಯ ಸರಕಾರ ಮಹಿಳೆಯರಿಗೆ ಭದ್ರತೆ ನೀಡಬೇಕು, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಮತ್ತು ಜಿಲ್ಲೆಯಲ್ಲಿ ಉದ್ದೇಶಪೂರ್ವಕವಾಗಿ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದೆ ಎಂದು ಆರೋಪಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.