
ಮಡಿಕೇರಿ. ಏ.21 NEWS DESK : ಅಹಿಂಸೆಯನ್ನು ಶ್ರೇಷ್ಠ ಧರ್ಮವೆಂದು ಸಾರಿದ ಭಗವಾನ್ ಮಹಾವೀರ ಜಯಂತಿಯನ್ನು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿಕೇರಿಯ ಜಿಲ್ಲಾಡಳಿತ ಭವನದಲ್ಲಿ ರವಿವಾರ ಆಚರಿಸಲಾಯಿತು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ನಾಗರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಅವರು ಭಗವಾನ್ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.








