Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಪರ ಸಿಐಟಿಯು ಪ್ರಚಾರ ಸಭೆ : ಲಕ್ಷ್ಮಣ್ ಗೌಡರಿಗೆ ಮತ ನೀಡಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಪರ ಸಿಐಟಿಯು ಪ್ರಚಾರ ಸಭೆ : ಲಕ್ಷ್ಮಣ್ ಗೌಡರಿಗೆ ಮತ ನೀಡಲು ಮನವಿ*

ಏಪ್ರಿಲ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.21 NEWS DESK : ಕಳೆದ 10 ವರ್ಷಗಳ ಕಾಲ ಜನವಿರೋಧಿ ನೀತಿಗಳನ್ನು ಅನುಸರಿಸಿ ಬಡ ವರ್ಗವನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ಸಿಐಟಿಯು ಕಾರ್ಮಿಕ ಸಂಘಟನೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಗೆ ಮತ ನೀಡುವಂತೆ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮನವಿ ಮಾಡಿದರು. ಸಿದ್ದಾಪುರ ಪಟ್ಟಣದಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ವತಿಯಿಂದ ನಡೆದ ಕಾಂಗ್ರೆಸ್ ಪರ ಬಹಿರಂಗ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.  ಬಡವರು, ಕಾರ್ಮಿಕರು, ಕೃಷಿ ಕಾರ್ಮಿಕರು, ರೈತಾಪಿ ವರ್ಗ ಹಾಗೂ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಾರ್ಮಿಕರಿಗೆ ನೀಡಲಾಗುತ್ತಿರುವ ಕನಿಷ್ಠ ವೇತನವನ್ನು ಏರಿಕೆ ಮಾಡಿ ಎಂದು ನಾವುಗಳು ಹೋರಾಟ ನಡೆಸುತ್ತಿದ್ದರೆ, ಕೇಂದ್ರ ಸರಕಾರ ಈಗ ಇರುವ ಅಲ್ಪ ಮೊತ್ತದ ವೇತನವನ್ನೇ ಕಡಿಮೆ ಮಾಡುವ ಚಿಂತನೆ ನಡೆಸಿದೆ. ಕಾರ್ಮಿಕ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರಿಗೆ ಅನ್ಯಾಯ ಮಾಡಲಾಗಿದೆ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಕಾಡುತ್ತಿದೆ. ಕಡು ಬಡವರ ಹಸಿವಿನ ಪ್ರಶ್ನೆ, ಒಕ್ಕೂಟ ವ್ಯವಸ್ಥೆಯ ರಕ್ಷಣೆೆ, ರೈತರ ಆತ್ಮಹತ್ಯೆ, ವನ್ಯಜೀವಿಗಳ ದಾಳಿ ಈ ಸಮಸ್ಯೆಗಳಿಗೆ ಇದುವರೆಗೆ ಪರಿಹಾರ ದೊರೆತ್ತಿಲ್ಲ. ರಾಷ್ಟçದ ಆರ್ಥಿಕ ಶಕ್ತಿಗೆ ಪೂರಕವಾಗಿದ್ದ ಸರಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಬಂಡವಾಳಶಾಹಿಗಳನ್ನು ರಕ್ಷಿಸುವ ಪ್ರಯತ್ನಗಳನ್ನಷ್ಟೆ ಬಿಜೆಪಿ ನೇತೃತ್ವದ ಸರಕಾರ ಮಾಡಿದೆ ಎಂದು ಆರೋಪಿಸಿದರು. ಕಳೆದ 10 ವರ್ಷಗಳ ಕಾಲ ಮೈಸೂರು- ಕೊಡಗು ಲೋಕಸಭಾ ಕೇತ್ರದ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಕೊಡಗಿನ ಬಗ್ಗೆ ಯಾವುದೇ ಕಾಳಜಿ ತೋರಿಲ್ಲ. ವನ್ಯಜೀವಿಗಳ ದಾಳಿಯನ್ನು ನಿಯಂತ್ರಿಸಿಲ್ಲ, ಡಾ.ಕಸ್ತೂರಿ ರಂಗನ್ ವರದಿಯ ಗೊಂದಲವನ್ನು ನಿವಾರಿಸಿಲ್ಲ, ರೈಲು ಮಾರ್ಗ ತರಲಿಲ್ಲ ಮತ್ತು ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸಿಲ್ಲವೆAದು ಟೀಕಿಸಿದರು. ಕೇಂದ್ರ ಸರಕಾರದ ಆಡಳಿತ ವೈಫಲ್ಯಕ್ಕೆ ತಕ್ಕ ಉತ್ತರ ನೀಡಲು ಈ ಲೋಕಸಭಾ ಚುನಾವಣೆ ಸಕಾಲವಾಗಿದ್ದು, ಎಲ್ಲರೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಪಿ.ಆರ್.ಭರತ್ ಕರೆ ನೀಡಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಮೊದಲು ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು. ಆದರೆ ವಾಸ್ತವವಾಗಿ ವಾರ್ಷಿಕ 2 ಲಕ್ಷ ಉದ್ಯೋಗ ಕೂಡ ಸೃಷ್ಟಿಯಾಗಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು ಹಾಗೂ ಕಾರ್ಮಿಕರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಕೊಡಗು ಜಿಲ್ಲೆಯ ಯಾವುದೇ ಸಮಸ್ಯೆಗಳಿಗೆ ಸಂಸದ ಪ್ರತಾಪ್ ಸಿಂಹ ಅವರು ಸ್ಪಂದಿಸಿಲ್ಲ ಎಂದು ಆರೋಪಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರಾಡಳಿತವನ್ನು ವಿರೋಧಿಸಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಗೆ ಬೆಂಬಲ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದರು. ಜಿಲ್ಲಾ ಖಜಾಂಚಿ ಎನ್.ಡಿ.ಕುಟ್ಟಪ್ಪನ್ ಮಾತನಾಡಿ ಕೇಂದ್ರ ಸರಕಾರದ ದ್ವಂದ್ವ ಆರ್ಥಿಕ ನೀತಿಗಳಿಂದಾಗಿ ತೆರಿಗೆ ಹೊರೆ ಮಿತಿ ಮೀರಿ ಬಡವರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದು ಅನಿವಾರ್ಯವಾಗಿದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು. ಉಪ ಕಾರ್ಯದರ್ಶಿಗಳಾದ ಶಾಜಿ ರಮೇಶ್, ಕೆ.ಕೆ.ಹರಿದಾಸ್, ಪ್ರಾಂತ ರೈತ ಸಂಘದ ರಾಜ್ಯ ಕಾರ್ಯದರ್ಶಿ ಎನ್.ಎಲ್.ಭರತ್ ರಾಜ್ ಮಂಡ್ಯ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.