Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತದಾರ ಕಾಂಗ್ರೆಸ್ ಗೆ ಚೊಂಬು ನೀಡುವುದು ಗ್ಯಾರಂಟಿ : ಕೊಡಗು ಬಿಜೆಪಿ ತಿರುಗೇಟು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತದಾರ ಕಾಂಗ್ರೆಸ್ ಗೆ ಚೊಂಬು ನೀಡುವುದು ಗ್ಯಾರಂಟಿ : ಕೊಡಗು ಬಿಜೆಪಿ ತಿರುಗೇಟು*

ಏಪ್ರಿಲ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.21 NEWS DESK : ಕೇಂದ್ರ ಸರಕಾರವನ್ನು ವಿನಾಕಾರಣ ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಜಾಹೀರಾತು ಅತ್ಯಂತ ಕೀಳುಮಟ್ಟದಿಂದ ಕೂಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ದೇಶದ ಜನರೇ ಚೊಂಬು ನೀಡಲಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಸುಬ್ರಮಣ್ಯ ಉಪಾಧ್ಯಾಯ ತಿರುಗೇಟು ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜಕೀಯ ಯಾವಾಗಲೂ ಆರೋಗ್ಯಕರವಾಗಿರಬೇಕು, ಆದರೆ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಅತ್ಯಂತ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಹಲವು ಹಗರಣಗಳ ಮೂಲಕ ಬೊಕ್ಕಸವನ್ನು ಬರಿದು ಮಾಡಿ ದೇಶದ ಜನರಿಗೆ ಖಾಲಿ ಚೊಂಬು ನೀಡಿತ್ತು. ಅದನ್ನು ತುಂಬಲು ಪ್ರಧಾನಮಂತ್ರಿ ನರೇಂದ್ರಮೋದಿ ಅವರೇ ಬರಬೇಕಾಯಿತು. ಈ ದೇಶದ ಜನರಿಗೆ ಕಾಂಗ್ರೆಸ್ ನೀಡಿದ ಖಾಲಿ ಚೊಂಬನ್ನು ಮೋದಿಯವರು ಭರ್ತಿ ಮಾಡಿದರು ಎಂದು ಖುದ್ದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರೇ ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಹಗರಣಗಳನ್ನು ಜನರೆದುರು ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ಸಿಗರು ಮೊದಲು ತಮ್ಮ ಹೆಗಲನ್ನು ತಾವು ನೋಡಿಕೊಳ್ಳಲಿ ಎಂದು ಸುಬ್ರಮಣ್ಯ ಉಪಾಧ್ಯಾಯ ತಿಳಿಸಿದ್ದಾರೆ. ಇಡೀ ವಿಶ್ವವೇ ತಿರುಗಿ ನೋಡುವಂತೆ ಪ್ರಧಾನಿ ನರೇಂದ್ರಮೋದಿ ಅವರು 10 ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ. ದೇಶವನ್ನು ಸುರಕ್ಷಿತವಾಗಿಟ್ಟು ಶ್ರೀಮಂತಗೊಳಿಸಿದ್ದಾರೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ಲಸಿಕೆಯನ್ನು ಪರಿಚಯಿಸಿ ಕೋಟ್ಯಾಂತರ ಜನರ ಜೀವ ಉಳಿಸಿದ್ದಾರೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ್ದಾರೆ. ಕಳೆದ 60 ವರ್ಷಗಳ ಕಾಲ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಮೋದಿ ಅವರ ನೇತೃತ್ವದ ಸರಕಾರ 10 ವರ್ಷಗಳಲ್ಲಿ ಮಾಡಿದೆ. 40 ಕ್ಕೂ ಹೆಚ್ಚು ನೀತಿಗಳನ್ನು ರೂಪಿಸಿ ದೇಶದ ಆರ್ಥಿಕತೆಯನ್ನು ಬಲ ಪಡಿಸಿದ್ದಾರೆ.  ಭ್ರಷ್ಟಾಚಾರ ಮತ್ತು ನಕಲಿ ನೋಟುಗಳನ್ನು ತಡೆಯಲು ನೋಟು ಅಮಾನ್ಯೀಕರಣ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನುಷ್ಠಾನ, ಜನ್ ಧನ್, ಆಧಾರ್ ಯೋಜನೆ ಜಾರಿಗೆ ತಂದಿದೆ. ತ್ರಿವಳಿ ತಲಾಖ್ ಪದ್ಧತಿಯನ್ನು ಕೊನೆಗೊಳಿಸಿ, ಲಕ್ಷಾಂತರ ಮುಸ್ಲಿಂ ತಾಯಂದಿರು ಹಾಗೂ ಸಹೋದರಿಯರಿಗೆ ನ್ಯಾಯ ಒದಗಿಸಿದ್ದಾರೆ. ಇದನ್ನು ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಯಾಕೆ ಮಾಡಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. 2013-14ರಲ್ಲಿ ದೇಶದಲ್ಲಿ 91 ಸಾವಿರ ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಗಳಿದ್ದವು, ಇದು 2023ರಲ್ಲಿ 1.45ಲಕ್ಷ ಕಿಲೋಮೀಟರ್ ಗೆ ಏರಿಕೆಯಾಗಿದೆ. ಹೆದ್ದಾರಿಗಳ ನಿರ್ಮಾಣದ ವೇಗವು ದಿನಕ್ಕೆ 11.6 ಕಿ.ಮೀ ನಿಂದ 28 ಕಿ.ಮೀ. ಗೆ ಏರಿಕೆಯಾಗಿದೆ. ನಾಲ್ಕು ಸಾವಿರವಿದ್ದ ಮೇಲು ಸೇತುವೆಗಳು ಪ್ರಸ್ತುತ 11 ಸಾವಿರಕ್ಕೆ ಏರಿಕೆಯಾಗಿದೆ. ಮೊದಲು ಕೇವಲ ಐದು ಮೆಟ್ರೋ ಸಿಟಿಗಳಿದ್ದವು, ಈಗ ಈ ಸಂಖ್ಯೆ 20 ಕ್ಕೆ ತಲುಪಿದೆ, ಇಂದು ದೇಶದಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ 74 ರಿಂದ 150 ಕ್ಕೆ ಏರಿದೆ. ಇದೆಲ್ಲವೂ ಅಭಿವೃದ್ಧಿಯಲ್ಲವೇ, ಈ ಬಗ್ಗೆ ಕಾಂಗ್ರೆಸ್ಸಿಗರಿಗೆ ಅರಿವಿಲ್ಲವೇ ಅಥವಾ ಅಸೂಯೆಯೇ ಎಂದು ಸುಬ್ರಮಣ್ಯ ಉಪಾಧ್ಯಾಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ ನೀಡಬೇಕಾದ ತೆರಿಗೆ ಪಾಲಿನ ಹಣವನ್ನು ಕಾಲಕಾಲಕ್ಕೆ ಕೇಂದ್ರ ಬಿಡುಗಡೆ ಮಾಡುತ್ತಲೇ ಬಂದಿದೆ. ರೈತಾಪಿ ವರ್ಗಕ್ಕೆ, ಅವರ ಮಕ್ಕಳಿಗೆ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶವ್ಯಾಪಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ನಮ್ಮ ರಾಜ್ಯದಲ್ಲೂ ಆಗಿದೆ. ಮೈಸೂರು- ಬೆಂಗಳೂರು ದಶಪಥ ರಸ್ತೆಯಲ್ಲಿ ಕಾಂಗ್ರೆಸ್ಸಿಗರು ಕೂಡ ಸಂಚರಿಸುತ್ತಾರಲ್ಲವೇ ಎಂದು ಪ್ರಶ್ನಿಸಿರುವ ಅವರು, ಮೊದಲು ಕಾಂಗ್ರೆಸ್ಸಿಗರು ಕೀಳು ಮಟ್ಟದ ರಾಜಕಾರಣವನ್ನು ಮಾಡುವುದನ್ನು ಬಿಟ್ಟು ದೇಶದ ಭದ್ರತೆ, ಅಭಿವೃದ್ಧಿ ಮತ್ತು ಪ್ರಜೆಗಳ ಸುರಕ್ಷತೆ ಬಗ್ಗೆ ಚಿಂತಿಸಲಿ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.