Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಸರಕಾರದಿಂದ ಪರಿಶಿಷ್ಟರಿಗೆ ಅನ್ಯಾಯ : ಕೊಡಗು ಬಿಜೆಪಿ ಎಸ್‍ಟಿ ಮೋರ್ಚಾ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಸರಕಾರದಿಂದ ಪರಿಶಿಷ್ಟರಿಗೆ ಅನ್ಯಾಯ : ಕೊಡಗು ಬಿಜೆಪಿ ಎಸ್‍ಟಿ ಮೋರ್ಚಾ ಆರೋಪ*

ಏಪ್ರಿಲ್ 22, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಏ.22 NEWS DESK : ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‍ಟಿ ಮೋರ್ಚಾ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಪರಿಶಿಷ್ಟರ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಕೆ ಮಾಡುವುದನ್ನು ಖಂಡಿಸುವುದಾಗಿ ತಿಳಿಸಿದರು.
ಈ ರೀತಿ ಅನುದಾನವನ್ನು ನಿಯಮಬಾಹಿರವಾಗಿ ಬಳಕೆ ಮಾಡುವ ಮೂಲಕ ಪರಿಶಿಷ್ಟರಿಗೆ ಸರಕಾರ ವಂಚನೆ ಮಾಡುತ್ತಿದೆ. ದುರ್ಬಲ ವರ್ಗವನ್ನು ಹಸಿವಿನಲ್ಲಿಟ್ಟು ಇತರರ ಹೊಟ್ಟೆ ತುಂಬಿಸುವ ಕಾರ್ಯ ಯಾಕೆ ಮಾಡಬೇಕು, ಪರಿಶಿಷ್ಟರ ಅನುದಾನವನ್ನು ಬಳಸಿಕೊಂಡಂತೆ ಅಲ್ಪಸಂಖ್ಯಾತರ ಅನುದಾನವನ್ನು ಯಾಕೆ ಬಳಸಿಕೊಳ್ಳುತ್ತಿಲ್ಲವೆಂದು ಪ್ರಶ್ನಿಸಿದರು.
ಇಂದು ಪರಿಶಿಷ್ಟರ ಅಭಿವೃದ್ಧಿಗೆ ಹಣ ಇಲ್ಲದಾಗಿದೆ, ಅಧಿಕಾರಿಗಳ ಬಳಿ ವಿಚಾರಿಸಿದರೆ ಸರಕಾರದಿಂದ ಹಣ ಬಂದಿಲ್ಲ ಎಂದು ಹೇಳುತ್ತಾರೆ. ಪರಿಶಿಷ್ಟ ವಿದ್ಯಾರ್ಥಿಗಳು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ, ವಿದ್ಯಾರ್ಥಿ ವೇತನಕ್ಕೆ ಕಷ್ಟವಾಗಿದೆ. ಹಾಸ್ಟೆಲ್ ಗಳಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲದಾಗಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಟಿತವಾಗುತ್ತಿದೆ. ಪರಿಶಿಷ್ಟ ಕಾಲೋನಿಗಳು ಅಭಿವೃದ್ಧಿ ವಂಚಿತವಾಗುತ್ತಿವೆ. ಸಂವಿಧಾನದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಮೀಸಲಾತಿಯ ಹಕ್ಕುಗಳು ದುರುಪಯೋಗವಾಗುತ್ತಿದೆ. ಕಾಂಗ್ರೆಸ್ ಸರಕಾರ ಒಂದು ವರ್ಗವನ್ನು ಮಾತ್ರ ಓಲೈಸಿಕೊಳ್ಳಲು ಪರಿಶಿಷ್ಟರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರಕಾರದ ವಿರುದ್ಧ “ಚೊಂಬು” ಜಾಹೀರಾತು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಕೀಳು ಮಟ್ಟದ ರಾಜಕಾರಣ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ ನೀಡಿದ ಕೊಡುಗೆ ಏನು ಎನ್ನುವುದನ್ನು ಮೊದಲು ಸಾಬೀತುಪಡಿಸಲಿ ಎಂದರು.
ರಾಜ್ಯ ಸರಕಾರ ಕೇಂದ್ರದ ಬಳಿ ಗೌರವಯುತವಾಗಿ ಬರಪರಿಹಾರ ಕೇಳಿದ್ದರೆ ಸಿಗುತ್ತಿತ್ತು. ಆದರೆ ಈಗ ಖಜಾನೆ ಖಾಲಿ ಮಾಡಿ ಭಿಕ್ಷೆ ಬೇಡುವ ಮಟ್ಟಕ್ಕೆ ಬಂದು ತಲುಪಿದ್ದು, ತಾನು ಮಾಡಿದ ತಪ್ಪಿಗೆ ಕೇಂದ್ರವನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರಮೋದಿಯವರನ್ನು ಇಡೀ ವಿಶ್ವವೇ ಅತ್ಯುತ್ತಮ ನಾಯಕ ಎಂದು ಒಪ್ಪಿಕೊಂಡಿದೆ. ಇದನ್ನು ಸಹಿಸದ ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿದೆ. ದೇಶದ ಸುರಕ್ಷತೆಗಾಗಿ ಜಾರಿಗೆ ತರುವ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸುತ್ತಿದೆ. ಮತಾಂತರ ನಿಷೇಧ ಕಾಯ್ದೆಗೂ ಅಡ್ಡಿಪಡಿಸಿದ ಪರಿಣಾಮ ಇಂದು ಆದಿವಾಸಿಗಳು ಮತಾಂತರದ ಪಿಡುಗಿಗೆ ಸಿಲುಕಿದ್ದಾರೆ. ಮೂಲ ಸಂಸ್ಕøತಿಯನ್ನು ಮರೆಯುತ್ತಿದ್ದು, ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಭಯದ ವಾತಾವರಣ ಮತ್ತು ದೌರ್ಜನ್ಯ ಪ್ರಕರಣಗಳು ಮಿತಿ ಮೀರಿದೆ ಎಂದು ಎಂ.ಎಂ.ಪರಮೇಶ್ವರ ಆರೋಪಿಸಿದರು.
ಅತ್ಯಂತ ಉನ್ನತ ಹುದ್ದೆಯಲ್ಲಿದ್ದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ವೊಬ್ಬರು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಅವಹೇಳನ ಮಾಡಿದ್ದಾರೆ. ಇದನ್ನು ಎಸ್‍ಟಿ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ, ಭ್ರಷ್ಟ ಕಾಂಗ್ರೆಸ್ಸಿಗರ ವಿರುದ್ಧ ಸಮರ ಸಾರಿದ ಕಾರಣಕ್ಕಾಗಿ ಮೋದಿಯವರನ್ನು ಕಾಂಗ್ರೆಸ್ ಗುರಿ ಮಾಡುತ್ತಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸುರಕ್ಷತೆ ಇಲ್ಲದಾಗಿದೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲೂ ಇದೇ ಪರಿಸ್ಥಿತಿ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ ಪರಮೇಶ್ವರ, ಈ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು ಮತ್ತು ಸಮರ್ಥ ನಾಯಕ ನರೇಂದ್ರಮೋದಿ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ, ಯುವ ನಾಯಕ ಯದುವೀರ್ ಅವರು ಎಲ್ಲಾ ವರ್ಗದ ಜನರ ಸಂಕಷ್ಟವನ್ನು ಬಲ್ಲವರಾಗಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟರ ಮತಗಳು ಅಧಿಕ ಸಂಖ್ಯೆಯಲ್ಲಿದ್ದು, ಯದುವೀರ್ ಅವರ ಪರ ಒಲವು ವ್ಯಕ್ತವಾಗಿದೆ. ಇವರ ಗೆಲುವು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಸ್‍ಟಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಿ.ಆರ್.ಪ್ರಭಾಕರ್ ಮಾತನಾಡಿ ಬಿಜೆಪಿ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರಮೋದಿ ಅವರಿಗೆ ಮೂರನೇ ಬಾರಿಗೆ ಪ್ರಧಾನಿಯಾಗಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಹುದ್ದೆಗಳನ್ನು ನೀಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇಂದು ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಗಳಾಗಿದ್ದಾರೆ. ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶಗಳನ್ನು ನೀಡಿ ಸಂವಿಧಾನದ ಆಶಯಕ್ಕೆ ಪೂರಕವಾಗಿ ನಡೆದುಕೊಂಡಿರುವುದನ್ನು ಬಿಜೆಪಿ ಸಾಬೀತು ಪಡಿಸಿದೆ. ಕಾಂಗ್ರೆಸ್ಸಿಗರ ಯಾವುದೇ ಅಪಪ್ರಚಾರ ಅಥವಾ ಆಮಿಷಗಳಿಗೆ ಯಾರೂ ಬೆಲೆ ನೀಡಬಾರದು. ದೇಶದ ಸುಭದ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ಅವರನ್ನು ಬೆಂಬಲಿಸಿ ಎಂದು ಕರೆ ನೀಡಿದರು.
ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಮಾತನಾಡಿ ಇಂದು ಅವಿದ್ಯಾವಂತರು ಕೂಡ ದೇಶದ ಸುರಕ್ಷತೆಯ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ನರೇಂದ್ರಮೋದಿಯವರಿಂದ ಮಾತ್ರ ರಾಷ್ಟ್ರದ ರಕ್ಷಣೆ ಸಾಧ್ಯ ಎನ್ನುವ ಜಾಗೃತಿ ಮೂಡಿದೆ. ಆದ್ದರಿಂದ ಮೈಸೂರು- ಕೊಡಗು ಕ್ಷೇತ್ರ ಸೇರಿದಂತೆ ಅತ್ಯಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನ ಈ ದೇಶದ ಆಸ್ತಿಯಾಗಿದ್ದಾರೆ. ಈ ವರ್ಗವನ್ನು ಬಿಜೆಪಿ ಅತ್ಯಂತ ಗೌರವದಿಂದ ನೋಡಿಕೊಂಡಿದೆ, ಎಲ್ಲಾ ಸ್ಥಾನಮಾನಗಳನ್ನು ನೀಡಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸಿಗರಿಗಿಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಎರಡು ಬಾರಿ ಸೋಲಿಸಿದವರು ಮತ್ತು ಸಂವಿಧಾನವನ್ನು ತಿದ್ದುಪಡಿ ಮಾಡಿದವರು ಕಾಂಗ್ರೆಸಿಗರೇ ಎಂದು ರವಿ ಟೀಕಿಸಿದರು.
ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಯದುವೀರ್ ಅವರಿಗೆ ಅತ್ಯಧಿಕ ಮತಗಳು ಲಭಿಸಲಿದೆ ಎಂದರು.
ಎಸ್‍ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಯಣ್ಣ ವಿ.ಕೆ ಹಾಗೂ ವಿರಾಜಪೇಟೆ ಅಧ್ಯಕ್ಷ ಪಿ.ಎ.ಮುತ್ತುರಾಜ್ ಮಾತನಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಎನ್‍ಡಿಎ ಮೈತ್ರಿ ಕೂಟ ಹಾಗೂ ಪ್ರಧಾನಿ ನರೇಂದ್ರಮೋದಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಸರಕಾರದಿಂದ ಪರಿಶಿಷ್ಟರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಬಿಜೆಪಿ ನೇತೃತ್ವದ ಸರಕಾರ ನೀಡಿದ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.