
ಮಡಿಕೇರಿ ಏ.22 NEWS DESK : ಸೋಮವಾರಪೇಟೆಯ ಕಿರಗಂದೂರು ಗ್ರಾಮದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಿರಂಗದೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಂ.ಚಂಗಪ್ಪ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಕೆ.ಎಂ.ರಿತಿನ್, ಕೆ.ಟಿ.ರವಿಚಂದ್ರ, ಬಿ.ಎನ್.ರವಿ, ಎ.ಕೆ.ಬೊಪಯ್ಯ, ಎ.ಎಸ್.ಬೋಪಯ್ಯ, ಕೆ.ಪಿ.ಬೊಪಯ್ಯ ಹಾಗೂ ಕೆ.ಈ.ಸುರೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ, ನಟೇಶ್ ಗೌಡ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಬ್ಲಾಕ್ ಅಧ್ಯಕ್ಷ ಸತೀಶ್ ಮತ್ತಿತರ ಪ್ರಮುಖರು ಹಾಜರಿದ್ದರು.








