
ಮಡಿಕೇರಿ ಏ.22 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಸೆಲ್ಫಿ contest ನಡೆಸಲು ತೀರ್ಮಾನಿಸಲಾಗಿರುತ್ತದೆ. ಈ ಸೆಲ್ಫಿ contest ನಲ್ಲಿ #Lets Vote Kodagu! ಶೀರ್ಷಿಕೆಯಲ್ಲಿ ಸ್ಪರ್ಧೆ ನಡೆಯಲಿದೆ.
ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿ, ನಗರದ ರಾಜಾಸೀಟು, ಸೋಮವಾರಪೇಟೆ ತಾಲೂಕು ಪಂಚಾಯತ್ ಕಚೇರಿ, ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಕಚೇರಿ, ವಿರಾಜಪೇಟೆ ತಹಸೀಲ್ದಾರ್ ಕಚೇರಿ, ಕುಶಾಲನಗರ ಕಾವೇರಿ ನಿಸರ್ಗಧಾಮ ಈ 6 ಸ್ಥಳಗಳಲ್ಲಿ ಮತದಾನ ಜಾಗೃತಿಗಾಗಿ ಸೆಲ್ಫಿ ಪಾಯಿಂಟ್‍ಗಳನ್ನು ನಿರ್ಮಿಸಲಾಗಿರುತ್ತದೆ. ಸಾರ್ವಜನಿಕರು ಮತ್ತು ಯುವ ಮತದಾರರು ಪೋಟೊವನ್ನು ಕಳುಹಿಸಬಹುದಾಗಿದೆ.
ಅಲ್ಲದೆ ಏ.26 ರಂದು ಮತದಾನ ನಡೆಯಲಿರುವ ಆಯ್ದ ವಿಶೇಷ ಮತಗಟ್ಟೆಗಳಲ್ಲಿಯೂ ಸೆಲ್ಪಿ ಪಾಯಿಂಟ್ ಗಳನ್ನು ಸ್ಥಾಪಿಸಲಿದ್ದು, ಈ ಮತಗಟ್ಟೆಗಳಲ್ಲಿ ಮತದಾನ ಮಾಡಿದ ನಂತರ ಸೆಲ್ಪಿ ಪಾಯಿಂಟ್‍ನಲ್ಲಿ ಪೋಟೋಗಳನ್ನು ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಾದ್ಯಂತ ಎಲ್ಲಾ ಸಾರ್ವಜನಿಕರು, ಮತದಾರರು ಮತದಾನದ ಪೂರ್ವದಲ್ಲಿ ನಾನು ಮತ ಚಲಾಯಿಸುತ್ತೇನೆ ಎಂಬ ಪರಿಕಲ್ಪನೆಯೊಂದಿಗೆ ತಾವಿರುವ ಸ್ಥಳದಲ್ಲಿಯೇ ವೈಯಕ್ತಿಕವಾಗಿ ಮತ್ತು ಗುಂಪಾಗಿ ಮತದಾನದಲ್ಲಿ ಪೂರ್ವದಲ್ಲಿ ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ವ್ಯಾಟ್ಸಪ್ ಮೊಬೈಲ್ ಸಂಖ್ಯೆ : 9741224300 ಗೆ ಕಳುಹಿಸಿ ಸ್ಪರ್ದೆಯಲ್ಲಿ ಭಾಗವಹಿಸಬಹುದಾಗಿದೆ. ಅಲ್ಲದೆ ಮತದಾನದ ದಿನದಂದು ಮತ ಚಲಾಯಿಸಿದ ನಂತರ “I VOTED’’ ಎಂಬ ಶೀರ್ಷಿಕೆಯೊಂದಿಗೆ ಸೆಲ್ಪಿ ಕ್ಲಿಕ್ಕಿಸಿ 9741224300 ವಾಟ್ಸಪ್ ಸಂಖ್ಯೆಗೆ ಕಳಹಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಇಂದಿನಿಂದ ಮತದಾನ ಪೂರ್ಣಗೊಳ್ಳುವವರೆವಿಗೂ ಈ ಸೆಲ್ಫಿ ಛಿoಟಿಣesಣ ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಮತದಾರರು/ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರಿಯಾತ್ಮಕವಾಗಿ ಸೆಲ್ಪಿ ಕ್ಲಿಕ್ಕಿಸಿ ಕಳುಹಿಸುವ ಆಯ್ದ ಪೋಟೊಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು.
ಕೊಡಗು ಜಿಲ್ಲಾ ಸ್ವೀಪ್ ಸಮಿತಿಯ ವ್ಯಾಟ್ಸಪ್ ಸಂಖ್ಯೆಗೆ ಉತ್ತಮವಾಗಿ ಕ್ಲಿಕ್ಕಿಸಿದ ಒಂದು ಪೋಟೊವನ್ನು ಕಳುಹಿಸಲು ಅವಕಾಶ ನೀಡಲಾಗಿದೆ. #Lets Vote Kodagu! ಸೆಲ್ಫಿ ಸ್ಪರ್ಧೆಯಲ್ಲಿ ಭಾಗವಹಿಸಿ ಆಕರ್ಷಕ ಬಹುಮಾನ ಗೆಲ್ಲಿರಿ.
ನಿಬಂಧನೆಗಳು: ಒಬ್ಬ ವ್ಯಕ್ತಿ ಒಂದು ಪೋಟೊವನ್ನು ಮಾತ್ರವೇ ಕಳುಹಿಸತಕ್ಕದ್ದು. ಪೋಟೊ ಜೊತೆಯಲ್ಲಿ ತಮ್ಮ ಹೆಸರು, ಊರಿನ ಹೆಸರನ್ನು ಕಡ್ಡಾಯವಾಗಿ ಕಳುಹಿಸತಕ್ಕದ್ದು. ವಿಜೇತರನ್ನು ಆಯ್ಕೆ ಮಾಡುವಲ್ಲಿ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ನಿರ್ಣಯವೇ ಅಂತಿಮವಾಗಿರುತ್ತದೆ. ಯಾವುದೇ ಧರ್ಮ, ಜಾತಿ, ವ್ಯಕ್ತಿ, ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿ ಪರವಾಗಿ ಅಥವಾ ಪಕ್ಷದ ಗುರುತಿನೊಂದಿಗೆ ಕಳುಹಿಸುವ ಪೋಟೊವನ್ನು ಸ್ಫರ್ಧೆಗೆ ಪರಿಗಣಿಸಲಾಗುವುದಿಲ್ಲ. ವ್ಯಾಟ್ಸಪ್ ಮುಖಾಂತರವಾಗಿ ಮಾತ್ರವೇ ಪೋಟೊ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.







