
ಮಡಿಕೇರಿ ಏ.23 NEWS DESK : ಮೈಸೂರು- ಕೊಡಗು ಲೋಕಸಭಾ ಚುನಾವಣೆಯ ಮತದಾನದ ದಿನವಾದ ಏ.26 ಸಮೀಪಿಸುತ್ತಿದೆ. ಕೊಡಗು ಜಿಲ್ಲೆಯಾದ್ಯಂತ ಕಾಂಗ್ರೆಸ್ ಬಿರುಸಿನ ಪ್ರಚಾರ ನಡೆಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ದಕ್ಷಿಣ ಕೊಡಗಿನ ಹಲವು ಭಾಗಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಮತಯಾಚಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವೈಫಲ್ಯಗಳನ್ನು ಮತದಾರರೆದುರು ವಿವರಿಸಿದರು. ತೋರ ಗ್ರಾಮ, ಕೆದಮಳ್ಳೂರು ಪಂಚಾಯತಿ ವ್ಯಾಪ್ತಿಯ ಬಾರಿಕಾಡು ಪೈಸಾರಿ ಸೇರಿದಂತೆ ಅನೇಕ ಭಾಗಗಳಿಗೆ ಭೇಟಿ ನೀಡಿ ಎಂ.ಲಕ್ಷ್ಮಣ ಅವರ ಪರ ಮತಯಾಚಿಸಿದರು. ಈ ಸಂದರ್ಭ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.










