
ಸುಂಟಿಕೊಪ್ಪ ಏ.24 NEWS DESK : ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮಾತ್ರ ಗುರುತಿಸದೇ ಪ್ರಾದೇಶಿಕ ಪಕ್ಷವಾದ ಕೆ.ಆರ್ ಪಕ್ಷದ ಕಡೆಗೂ ಒಲವು ತೋರಿಸಿದರೆ ಜನ ಸೇವೆ, ದೇಶ ಸೇವೆಗೂ ನಾವು ಕಟ್ಟಿಬದ್ಧರಾಗಿ ಸಿದ್ದರಿದ್ದೇವೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಎಸ್.ಪ್ರವೀಣ್ ಹೇಳಿದರು.
ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು. ನಮ್ಮ ಪಕ್ಷ ಕಳೆದ ಹಲವು ವರ್ಷಗಳಿಂದಲೂ ಜನ ಪರವಾದ ಸೇವೆಗಳು ಸೂಕ್ತ ರೀತಿಯಲ್ಲಿ ದೊರಯಬೇಕೆಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಬಡವರ ಸೇವೆ, ಜನಪರ ಕಾಳಜಿಯೊಂದಿಗೆ ನಿರಂತರವಾಗಿ ಕೆಲಸ ಮಾಡುವ ಮೂಲಕ ಬಡವರ ಪರವಾಗಿ ನಿಂತಿದ್ದೇವೆ. ಭ್ರಷ್ಟಚಾರದಿಂದ ಕೂಡಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷವನ್ನು ತೊಡೆದು ಹಾಕಿ ಪ್ರಾದೇಶಿಕ ಪಕ್ಷವಾದ ಕೆಆರ್‍ಎಸ್ ಪಕ್ಷವನ್ನು ಗೆಲ್ಲಿಸಿ ಅರ್ಹ, ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು.
ನಂತರ ಪಟ್ಟಣದ ಅಂಗಡಿ, ಮನೆ ಮನೆಗೆ ತೆರಳಿ ಭಿತ್ತಿಪತ್ರ ನೀಡಿ ಮತಯಾಚನೆ ಮಾಡಿದರು. ಪಕ್ಷದ ಕಾರ್ಯಕರ್ತರು ಇದ್ದರು.







