

ನಾಪೋಕ್ಲು ಏ.24 NEWS DESK : ಬೇಂಗೂರು ಗ್ರಾಮದ ಶ್ರೀ ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.
ದೇವಾಲಯದ ಅರ್ಚಕ ರಾಧಾಕೃಷ್ಣ ಭಟ್ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಕಳತೂರು ವೇದಮೂರ್ತಿ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ರಂಜಾಳ ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಯಿತು.
ಪ್ರತಿಷ್ಠಾಪನೆಯ ಬಳಿಕ ಮಧ್ಯಾಹ್ನ ಹೂವಿನಿಂದ ಅಲಂಕೃತ ದೇವರ ಬಿಂಬಕ್ಕೆ ವಿಶೇಷ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.
ಈ ಸಂದರ್ಭ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ತೇಲಪಂಡ ನಂದ ಮಂದಣ್ಣ, ಉಪಾಧ್ಯಕ್ಷ ಕುಂಚೆಟ್ಟಿರ ಸುಬ್ಬಯ್ಯ, ಕಾರ್ಯದರ್ಶಿ ಕುಂಚೆಟ್ಟಿರ ಗೋಪಾಲ,ಖಜಾಂಚಿ ಪಟ್ಟಮಾಡ ಅಶೋಕ್, ಸದಸ್ಯರಾದ ಕಲ್ಲು ಮಾಡಂಡ ವಾಸು, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕಲ್ಲು ಮಾಡಂಡ ಅಶೋಕ್, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕೀಪಾಡಂಡ ವಾಸು, ಬೊಳ್ಳಾರ್ಪಂಡ ಚಂಗಪ್ಪ, ತಕ್ಕಮುಖ್ಯಸ್ಥರು, ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.
ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಏ.25 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದೆ.
ವರದಿ : ದುಗ್ಗಳ ಸದಾನಂದ








