
ಮಡಿಕೇರಿ ಏ.24 NEWS DESK : ಜಾತ್ಯತೀತ ಜನತಾದಳದ ರಾಜ್ಯ ಉಪಾಧ್ಯಕ್ಷ ಹಾಗೂ ಖ್ಯಾತ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ಅವರು ಇಂದು ತಮ್ಮ ಬೆಂಬಲಗರೊAದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವಿರಾಜಪೇಟೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಮ್ಮುಖದಲ್ಲಿ ಮನೋಜ್ ಬೋಪಯ್ಯ ಅವರು ತಮ್ಮ ಪುತ್ರ ಅನೀಶ್ ಹಾಗೂ ವಕೀಲ ಸ್ನೇಹಿತರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರಿದರು.
ಕಾಂಗ್ರೆಸ್ ಶಲ್ಯವನ್ನು ನೀಡಿ ಬರಮಾಡಿಕೊಂಡ ಪೊನ್ನಣ್ಣ ಅವರು ಮನೋಜ್ ಬೋಪಯ್ಯರಿಗೆ ಶುಭ ಕೋರಿದರು.
ಈ ಸಂದರ್ಭ ಮಾತನಾಡಿದ ಡಾ.ಯಾಲದಾಳು ಮನೋಜ್ ಬೋಪಯ್ಯ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳು ಸಿಗಲಿದೆ, ಪೊನ್ನಣ್ಣ ಅವರು ಸಚಿವರಾಗಬೇಕು ಮತ್ತು ರಾಜಕೀಯವಾಗಿ ಬೆಳೆಯಬೇಕು ಎನ್ನುವ ಉದ್ದೇಶದಿಂದ ಅವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು.
ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡಿರ ಪವನ್ ಪೆಮ್ಮಯ್ಯ ಸೇರಿದಂತೆ ವಿರಾಜಪೇಟೆ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.









