
ಮಡಿಕೇರಿ ಏ.25 NEWS DESK : ಭಾರತ ಚುನಾವಣಾ ಆಯೋಗವು ಏ.26 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಕೊಡಗು ಜಿಲ್ಲೆಯಲ್ಲಿ ಮತದಾನ ದಿನವಾಗಿದ್ದು, ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ಸಂಸ್ಥೆಯವರು ಅನುವು ಮಾಡಿಕೊಡಬೇಕಾಗಿದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಈ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಮಾಲೀಕರು, ಸಂಸ್ಥೆಯವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಡಗು ಉಪವಿಭಾಗದ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಎಸ್.ಎಲ್. ತಿಳಿಸಿದ್ದಾರೆ.








