Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ‘ಮಸ್ಟರಿಂಗ್’ : ಚುನಾವಣೆ ಒಂದು ಹಬ್ಬವಿದ್ದಂತೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಮತ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ‘ಮಸ್ಟರಿಂಗ್’ : ಚುನಾವಣೆ ಒಂದು ಹಬ್ಬವಿದ್ದಂತೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಮತ

ಏಪ್ರಿಲ್ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.25 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತಗಟ್ಟೆಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸುವ ‘ಮಸ್ಟರಿಂಗ್’ ಕಾರ್ಯ ಸಕಲ ಪೊಲೀಸ್ ಬಂದೋಬಸ್ತ್ ನೊಂದಿ  ಸುಸೂತ್ರವಾಗಿ ನಡೆಯಿತು.
ಜಿಲ್ಲಾ ಕೇಂದ್ರ ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್‌ನಲ್ಲಿ ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ 273 ಮತಗಟ್ಟೆಗಳಿಗೆ 1208 ಸಿಬ್ಬಂದಿಗಳನ್ನು ನಿಯೋಜಿಸಲಾಯಿತು. ಇಷ್ಟೇ ಸಂಖ್ಯೆಯ ಸಿಬ್ಬಂದಿಗಳನ್ನು ವಿರಾಜಪೇಟೆಯಲ್ಲಿ ನಡೆದ ಮಸ್ಟರಿಂಗ್ ಕಾರ್ಯದ ಮೂಲಕ ಆ ಕ್ಷೇತ್ರ ವ್ಯಾಪ್ತಿಯ 273 ಮತಗಟ್ಟೆಗಳಿಗೆ ನಿಯೋಜಿಸಲಾಯಿತು.
ಚುನಾವಣೆ ಪ್ರಜಾಪ್ರಭುತ್ವದ ಹಬ್ಬ- ಮಡಿಕೇರಿಯ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿಯನ್ನಿತ್ತು, ಅಲ್ಲಿನ ಸಿಬ್ಬಂದಿ ನಿಯೋಜನೆ ಕಾರ್ಯಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮತ್ತು ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ ವೀಕ್ಷಿಸಿದರು. ಮತಗಟ್ಟೆಗಳಿಗೆ ನಿಯುಕ್ತರಾದ ಸಿಬ್ಬಂದಿಗಳಿಗೆ ಕೊನೆಯ ಹಂತದ ಮಾಹಿತಿ ಮತ್ತು ತರಬೇತಿಯನ್ನು ಈ ಸಂದರ್ಭ ನೀಡಲಾಯಿತು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಎನ್ನುವುದು ಒಂದು ಹಬ್ಬವಾಗಿದೆ. ಇದನ್ನು ಅತ್ಯಂತ ಶಾಂತಿಯುತವಾಗಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಚುನಾವಣಾ ಕಾರ್ಯವನ್ನು ಅತ್ಯಂತ ಕ್ರಮಬದ್ಧವಾಗಿ ನಡೆಸಲು ಮತಗಟ್ಟೆಗಳಿಗೆ ನಿಯುಕ್ತರಾದ ಸಿಬ್ಬಂದಿಗಳು ಉತ್ಸುಕರಾಗಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.
ಮತದಾರರನ್ನು ಸೆಳೆಯಲಿರುವ ವಿಶೇಷ ಮತಗಟ್ಟೆಗಳು- ಲೋಕಸಭಾ ಚುನಾವಣೆಯ ಮತದಾನಕ್ಕೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ವಿಶೇಷ ಮತಗಟ್ಟೆಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಸಜ್ಜುಗೊಳಿಸಲಾಗಿದೆ. ಒಟ್ಟು 10 ಸಖಿ ಮತಗಟ್ಟೆಗಳು, 6 ಸಾಂಪ್ರದಾಯಿಕ ಮತಗಟ್ಟೆಗಳು, 2 ವಿಶೇಷಚೇತನ ಮತಗಟ್ಟೆಗಳು, 2 ಯುವ ಮತದಾರರ ಮತಗಟ್ಟೆಗಳು ಮತ್ತು 3 ವಿಷಯ ಆಧಾರಿತ (ಥೀಮ್ ಬೇಸ್ಡ್) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಥೀಮ್ ಬೇಸ್ಡ್ ಮತಗಟ್ಟೆಯಲ್ಲಿ ‘ಕೊಡಗಿನ ಕಾಫಿ’ ವಿಷಯವನ್ನು ಆಯ್ಕೆಮಾಡಿಕೊಳ್ಳಲಾಗಿದ್ದು, ಕಾಫಿಗೆ ಸಂಬಂಧ ಪಟ್ಟ ಒಂದಷ್ಟು ಮಾಹಿತಿ ಮತಗಟ್ಟೆಗಳಲ್ಲಿ ಪ್ರದರ್ಶಿಸಲ್ಪಡುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಚಾರ ನಿಷೇಧ-ಪ್ರತಿ ಮತಗಟ್ಟೆ ವ್ಯಾಪ್ತಿಯ 200 ಮೀಟರ್ ಸುತ್ತಲೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ, ಅಭ್ಯರ್ಥಿಗಳಿಗೆ ಹಾಗೂ ಏಜೆಂಟರ್‌ಗಳು ಸೇರಿದಂತೆ ಎಲ್ಲರಿಗೂ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್, 01…

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.