Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲೆಯಲ್ಲಿ ಶಾಂತಿಯುತ ಮತದಾನ : ಶೇ.74.29ರಷ್ಟು ಮತ ಚಲಾವಣೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಕೊಡಗು ಜಿಲ್ಲೆಯಲ್ಲಿ ಶಾಂತಿಯುತ ಮತದಾನ : ಶೇ.74.29ರಷ್ಟು ಮತ ಚಲಾವಣೆ

ಏಪ್ರಿಲ್ 26, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.26 NEWS DESK  : ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಗು ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆ ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆದಿದ್ದು, ಸಂಜೆ 5ರ ವೇಳೆಗೆ ಅಂದಾಜು ಶೇ.74.29ರಷ್ಟು ಮತದಾನವಾಗಿದೆ. ಸುಮಾರು 349743 ಮಂದಿ ಮತದಾನ ಮಾಡಿದ್ದಾರೆ.
ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಶಾಂತಿಯುತ ಹಾಗೂ ಸುಗಮವಾಗಿ ಆರಂಭವಾಗುತ್ತಿದ್ದಂತೆ, ಮಹಿಳೆಯರು, ಪುರುಷರು, ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ಇದೇ ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ಉತ್ಸಾಹದಿಂದ ಬೆಳಗಿನ ತಂಪಾದ ವಾತಾವರಣದಲ್ಲಿ ಮತಗಟ್ಟೆಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದ್ದು ವಿಶೇಷ ಎನ್ನಿಸಿತು.
ಮತಗಟ್ಟೆಯಲ್ಲಿ ಬಿಸಿಲಿನಿಂದ ರಕ್ಷಣೆಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು, ಬಿರು ಬಿಸಿಲಿನಿಂದ ರಕ್ಷಣೆಗಾಗಿ ಶಾಮಿಯಾನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ವ್ಹೀಲ್ ಚೇರ್ ಹಾಗೂ ರ್ಯಾಂಪ್ ಸೌಲಭ್ಯ ಕಲ್ಪಿಸಲಾಗಿತ್ತು. ಮತಗಟ್ಟೆ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.
ಬೆಳಿಗ್ಗೆ 9 ಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮತದಾನ ಶೇ.12.56 ಮತದಾನ ದಾಖಲಾಯಿತು. ವಿಧಾನಸಭಾ ಕ್ಷೇತ್ರವಾರು ಮಡಿಕೇರಿ ಶೇ.12.33, ವಿರಾಜಪೇಟೆ ಶೇ.12.80 ಮತದಾನ ದಾಖಲಾಯಿತು.
ಬೆಳಿಗ್ಗೆ 11ರವರೆಗೆ ಬಿರುಸಿನ ಮತದಾನ ದಾಖಲಾಯಿತು. ಸರಾಸರಿ ಮತದಾನ ಶೇ.29.90 ಏರಿಕೆಯಾಯಿತು. ವಿಧಾನ ಸಭಾ ಕ್ಷೇತ್ರವಾರು ಮಡಿಕೇರಿ ಶೇ.28.94, ವಿರಾಜಪೇಟೆ ಶೇ. 30.87 ಮತದಾನವಾಗಿದ್ದು, ಬಿರು ಬಿಸಿಲಿನ ನಡೆವೆಯೂ ಮತದಾರರು ಮತಗಟ್ಟೆಗೆ ಆಗಮಿಸಿ ಉತ್ಸಾಹಹದಿಂದ ಮತ ಚಲಾಯಿಸಿದರು.
ಮಧ್ಯಾಹ್ನ 1ಕ್ಕೆ ಜಿಲ್ಲೆಯಲ್ಲಿ ಸರಾಸರಿ ಮತದಾನ ಶೇ.47.96 ರಷ್ಟು ಮತದಾನ ನಡೆಯಿತು. ಬಿಸಿಲ ನಡುವೆಯೂ ಮತದಾರರು ಕುಗ್ಗದೆ ಮತಗಟ್ಟೆಗೆ ಧಾವಿಸಿ, ತಮ್ಮ ಹಕ್ಕು ಚಲಾಯಿಸಿದರು. ಈ ವೇಳೆ ಮಡಿಕೇರಿ ಕ್ಷೇತ್ರದಲ್ಲಿ ಶೇ.48.28, ವಿರಾಜಪೇಟೆ ಶೇ. 47.65 ಮತದಾನ ದಾಖಲಾಯಿತು.
ಮಧ್ಯಾಹ್ನ 3ರ ವೇಳೆಗೆ ಜಿಲ್ಲೆಯಲ್ಲಿ ಸರಾಸರಿ ಮತದಾನ ಶೇ. 57.62 ರಷ್ಟು ಮತದಾನವಾಯಿತು. ಮಡಿಕೇರಿ ಶೇ.57.07, ವಿರಾಜಪೇಟೆ ಶೇ.57.62 ಮತದಾನವಾಯಿತು.
ಸಂಜೆ 5 ಗಂಟೆ ವೇಳೆಗೆ ಶೇ.70.40 ರಷ್ಟು ಮತದಾನ ದಾಖಲಾಯಿತು. ಮಡಿಕೇರಿ ಶೇ.70.58, ವಿರಾಜಪೇಟೆ ಶೇ.70.22 ಮತದಾನವಾಯಿತು.
::: ಸಂಭ್ರಮದಲ್ಲಿ ಯುವ ಜನತೆ :::
ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಮೊದಲ ಬಾರಿ ಮತ ಚಲಾಯಿಸಿ ಯುವ ಜನರು ಸಂಭ್ರಮಪಟ್ಟರು. ದುಬಾರೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿದ್ದೇನೆಂಬ ಖುಷಿ ಇದೆ. ದೇಶದ ಪ್ರಜಾಪ್ರಭುತ್ವದಲ್ಲಿ ಭಾಗಿಯಾಗಿರುವುದು ಸಂತಸ ತಂದಿದೆ ಎಂದು ಕುಮಾರಿ ಸಂಗೀತಾ ಅವರು ತನ್ನ ಅಭಿಪ್ರಾಯ ವ್ಯಕ್ತ ಪಡಿಸಿದಳು.
ಮಡಿಕೇರಿ ನಗರದ ತಾಲ್ಲೂಕು ಪಂಚಾಯತ ಚುನಾವಣಾ ಮತಗಟ್ಟೆಯಲ್ಲಿ ಬೆಳಿಗ್ಗೆ ಮತದಾನ ಮಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಇಂದು ಪ್ರಜಾಪ್ರಭುತ್ವ ಹಬ್ಬ ನಡೆಯುತ್ತಿದೆ, ಎಲ್ಲ ಅರ್ಹ ಮತದಾರರು ತಪ್ಪದೇ ಈ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಂಡು ನಿಮಗೆ ಸಂವಿಧಾನ ನೀಡಿದ ಮತದಾನ ಹಕ್ಕನ್ನು ಚಲಾಯಿಸಬೇಕು ಎಂದರು.
ನAತರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ್ ನೇಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಉಪ ವಿಭಾಗಾಧಿಕಾರಿ ವಿನಾಯಕ ನಾರ್ವಾಡೆ ಅವರುಗಳು ನಗರದ ರಾಜಾಸೀಟ್ ಉದ್ಯಾನವಕ್ಕೆ ತೆರಳಿ ಅಲ್ಲಿ ಸೇಲ್ಪಿ ಕ್ಲಿಕ್ಕಿಸಿಕೊಂಡು ಮತದಾನ ಮಹತ್ವ ಸಾರಿದರು.
ಜಿಲ್ಲಾ ಕೇಂದ್ರ ಮಡಿಕೇರಿ, ತಾಲ್ಲೂಕು ಕೇಂದ್ರಗಳಾದ ಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ ಮತ್ತು ಪೊನ್ನಂಪೇಟೆ ವಿಭಾಗಗಳಲ್ಲಿ ಬೆಳಗ್ಗಿನ ಅವಧಿಯಲ್ಲಿ ಸರದಿಯ ಸಾಲಿನಲ್ಲಿ ನಿಂತು ಮತದಾರರು ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಿದರು. ಬಿಸಿಲೇರುತ್ತಿರುವಂತೆಯೇ ಮತದಾನ ನಿಧಾನವಾಯಿತಾದರೆ, ಮಧ್ಯಾಹ್ನದ ಬಳಿಕ ಮತ್ತೆ ಚುರುಕಿನ ಮತದಾನ ಕಂಡು ಬಂದಿತು.
ಮತದಾನ ಮಾಡಿ ಹಸೆಮಣೆಗೆ-ಕಡಗದಾಳು ಮತಗಟ್ಟೆಯಲ್ಲಿ ವಿವಾಹಕ್ಕೆ ಅಣಿಯಾಗಿದ್ದ ವರ ತೀರ್ಥೇಶ್, ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿ ಮದುವೆ ಮಂಟಪಕ್ಕೆ ತೆರಳಿದ್ದು ವಿಶೇಷವಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನ ಹೆರೂರು ಗ್ರಾಮದ ಮತಗಟ್ಟೆಯಲ್ಲಿ ಆದಿವಾಸಿಗಳಿಂದ ಉತ್ಸಾಹದ ಮತದಾನ ನಡೆಯಿತಾದರೆ, ನಾಗರಹೊಳೆಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ಮತಗಟ್ಟೆಯಲ್ಲಿ ಅರಣ್ಯವಾಸಿ ಗಿರಿಜನರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡುದು ಕಂಡು ಬಂದಿತು.
ಬಿಟ್ಟAಗಾಲದಲ್ಲಿ ಮತಯಂತ್ರದಲ್ಲಿ ದೋಷ- ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾಮದ ಮತಗಟ್ಟೆಯೊಂದರಲ್ಲಿ ಬೆಳಗ್ಗೆ 8ಗಂಟೆಯ ಸುಮಾರಿಗೆ ಮತ ಯಂತ್ರದ ಬ್ಯಾಟರಿ ಲೋ ಆದ್ದರಿಂದ ಮತದಾನ ಪ್ರಕ್ರಿಯೆ ಕೆಲ ಕಾಲ ಸ್ಥಗಿತಗೊಂಡಿತ್ತು.ಬಳಿಕ ಅಗತ್ಯ ಕ್ರಮಗಳನ್ನು ಕೈಗೊಂಡು ಸುಗಮ ಮತದಾನಕ್ಕೆ ಅನುವು ಮಾಡಿಕೊಡಲಾಯಿತು.
ಮತದಾರರ ಪಟ್ಟಿಯಿಂದ ಹೆಸರು ಮಾಯ- ಮತದಾನಕ್ಕೆಂದು ಬಂದು, ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದೆ ನಿರಾಸೆಯಿಂದ ಹಿಂದಕ್ಕೆ ತೆರಳಿದ ಘಟನೆಗಳು ಕೆಲವೆಡೆ ನಡೆದಿದೆ.ವಿರಾಜಪೇಟೆಯ ತೆಲುಗರ ಬಿದಿಯ ಅಯ್ಯಪ್ಪ ಎಂಬವರ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ಈ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯ ಎಫ್‌ಎಂಕೆಎAಸಿ ಕಾಲೇಜಿನ ಮತಗಟ್ಟೆಗೆ ಆಗಮಿಸಿದ ಮಹಿಳೆಯೊಬ್ಬರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.
ಬಿಗಿ ಭದ್ರತೆ- ಮಡಿಕೇರಿ ತಾಲೂಕಿನ ಅರಣ್ಯದ ಅಂಚಿನ ವಣಚಲುವಿನ ಮತಗಟ್ಟೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳ ನಿಯೋಜನೆಯ ಮೂಲಕ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಮತಗಟ್ಟೆಯ ಭದ್ರತೆಗಾಗಿ ಒಟ್ಟು 11 ಪೊಲೀಸರನ್ನು ನಿಯೋಜಿಸಲಾಗಿತ್ತು. ಸಿವಿಲ್, ಕೆಎಸ್‌ಆರ್‌ಪಿ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.
ಈ ಮತಗಟ್ಟೆಯ ಸಿಬ್ಬಂದಿಗಳಿಗೆ ಅಗತ್ಯ ಸೌಲಭ್ಯ ಒದಗಿಸಿಲ್ಲ ಎಂದು ಮತದಾರರೇ ಆರೋಪಿಸಿದ್ದು, ನಾವೇ ಸ್ವತಃ ಕುಡಿಯುವ ನೀರನ್ನು ಒದಗಿಸಿದ್ದೇವೆ. ರಾತ್ರಿ ವಿದ್ಯುತ್ ಇಲ್ಲದೆ, ಚುನಾವಣಾ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಸಹಿತ ಮತಗಟ್ಟೆ ಸಿಬ್ಬಂದಿಗಳು ಪರದಾಡಿದ್ದರು. ಮಾತ್ರವಲ್ಲದೇ ಬೆಳಗಿನ ಉಪಾಹಾರವೂ ತಡವಾಗಿ ಬಂದಿದೆ ಎಂದು ಸ್ಥಳೀಯರು ಆರೋಪಿಸಿದರು.
ಪ್ರಚಾರಕರನ್ನು ಹೊರ ಕಳುಹಿಸಿದ ಪೊಲೀಸರು- ಮಡಿಕೇರಿಯ ಹಿಂದೂಸ್ಥಾನಿ ಶಾಲೆಯ ಮತಗಟ್ಟೆಯ ಇನ್ನೂರು ಮೀಟರ್ ವ್ಯಾಪ್ತಿಯ ಒಳಗಿನ ರಸ್ತೆಯಲ್ಲಿ ಚುನಾವಣಾ ಸಂಬಂಧ ರಾಜಕೀಯ ಪಕ್ಷವೊಂದು ಪ್ರಚಾರದಲ್ಲಿ ತೊಡಗಿತ್ತು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಚಾರಕರನ್ನು ಹೊರ ಕಳುಹಿಸಿದ ಘಟನೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.