Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಮಹಿಳಾ ಮಿಲನ ಕಾರ್ಯಕ್ರಮ : ಮಕ್ಕಳನ್ನು ಸುಸಂಸ್ಕೃತರಾಗಿ ರೂಪಿಸುವ ಹೊಣೆಗಾರಿಕೆ ಪೋಷಕರದು : ರಾಣಿ ಮಾಚಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಮಹಿಳಾ ಮಿಲನ ಕಾರ್ಯಕ್ರಮ : ಮಕ್ಕಳನ್ನು ಸುಸಂಸ್ಕೃತರಾಗಿ ರೂಪಿಸುವ ಹೊಣೆಗಾರಿಕೆ ಪೋಷಕರದು : ರಾಣಿ ಮಾಚಯ್ಯ*

ಏಪ್ರಿಲ್ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ  ಏ.29  NEWS DESK : ಹೆಣ್ಣು-ಗಂಡು ಎಂಬ ತಾರತಮ್ಯ ತೋರದೆ ಮಕ್ಕಳನ್ನು ಸುಸಂಸ್ಕೃತರಾಗಿ ರೂಪಿಸುವ ಹೊಣೆಗಾರಿಕೆ ತಂದೆ-ತಾಯಿಯರದಾಗಿದ್ದು ಅವರ ಮೇಲೆ ಸಂಪೂರ್ಣ ಕಾಳಜಿ ಮುಖ್ಯ ಎಂದು ಜಾನಪದ ಕಲಾವಿದೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಅಭಿಪ್ರಾಯಪಟ್ಟರು.

ಅಂಕನಹಳ್ಳಿ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀಗುರುಸಿದ್ಧ ವೀರೇಶ್ವರಸ್ವಾಮಿ ಜಾತ್ರಾಮಹೋತ್ಸವದ ಪ್ರಯುಕ್ತ ನಡೆದ `ಮಹಿಳಾ ಮಿಲನ” ಕಾರ್ಯಕ್ರಮದ “ಧರ್ಮ-ಸಂಸ್ಕೃತಿ-ಮಹಿಳೆ’ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಮೊಬೈಲ್-ಕಂಪ್ಯೂಟರ್ ಗೀಳಿನಿಂದ ಹೊರಬರುವ ಹಾಗೇ ಪೋಷಕರು ನೀತಿಕಥೆಗಳನ್ನು ಹೇಳಬೇಕು. ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ನಾಯಕತ್ವದ ಗುಣ ಬೆಳೆಸಬೇಕು.ಸಮಾಜದಲ್ಲಿ ಧರ್ಮ, ಸಂಸ್ಕೃತಿ ಉಳಿಸಬೇಕು.ಬೆಳೆಸಬೇಕು ಎಂದರು.
ಮುಖ್ಯ ಅತಿಥಿ ಸಾಹಿತಿ ಶ.ಗ.ನಯನತಾರಾ ಪ್ರಾಸ್ತಾವಿಕ ನುಡಿಗಳನ್ನಾಡಿ, ಧರ್ಮ ಮತ್ತು ಸಂಸ್ಕೃತಿ ನಮ್ಮ ದೇಶದ ಜೀವಾಳವಾಗಿದ್ದುಇವುಗಳಲ್ಲಿ ಮಹಿಳೆ ಮಹತ್ತರ ಪಾತ್ರ ವಹಿಸುತ್ತಾಳೆ.ಮಠಮಾನ್ಯಗಳಿಂದಾಗಿ ಇಂದು ಸಮಾಜದಲ್ಲಿ ಧರ್ಮ ಮತ್ತು ಸಂಸ್ಕೃತಿ ಉಳಿದಿದೆ.ಧರ್ಮವೆಂದರೆ ಜಾತಿಯಲ್ಲ; ಮೂಲ ಸ್ವಭಾವ.ಸಂಸ್ಕೃತಿ ಎಂದರೆ ನಂಬಿಕೆ, ನಡವಳಿಕೆ, ರೂಢಿಗಳು.ಮಠದಲ್ಲಿ ಆಯೋಜಿಸಿರುವ ಮಹಿಳಾ ಮಿಲನ ಕಾರ್ಯಕ್ರಮ ಮಹಿಳಾ ಸಮಾನತೆಯನ್ನು ಪ್ರತಿಪಾದಿಸುವಂತಿದ್ದು ಆಚಾರ-ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವಂತಿದೆ.ಮಹಿಳೆ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದಾಳೆ ಎಂದರು.
ನಿವೃತ್ತ ರಾಷ್ಟ್ರೀಯ ಮಹಿಳಾ ಹಾಕಿ ತರಬೇತುಗಾರ್ತಿ ದೇವರಾಜಮ್ಮ ಮಾತನಾಡಿ, ಆಚಾರ-ವಿಚಾರ, ಪೂಜೆ – ಪುರಸ್ಕಾರಗಳಿಗೆ ಸ್ತ್ರೀ ಮಾದರಿಯಾಗಿದ್ದಾಳೆ. ಮನೆಯಲ್ಲಿ ಮಹಿಳೆ ದಿನನಿತ್ಯಾ ಆಚರಿಸುವ ನಡವಳಿಕೆಯಲ್ಲಿ ಸಂಸ್ಕೃತಿ ಅಭಿವ್ಯಕ್ತಗೊಳ್ಳುತ್ತವೆ.ಸಮಾಜದಲ್ಲಿ ಬುನಾದಿ ಆಗಿರುವುದು ಸಂಸ್ಕೃತಿ.ತಾಯಿಯಾದವಳು ಮಕ್ಕಳಿಗೆ ಸಂಸ್ಕೃತಿಯ ಅರಿವು ಮೂಡಿಸುತ್ತಾಳೆ ಎಂದರು.
ಸಾಹಿತಿ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, ಪ್ರತಿ ಹೆಣ್ಣಿನ ಸಾಧನೆಯ ಹಿಂದೆ ಮನೆಯ ಸದಸ್ಯರ ಸಹಕಾರವಿರುತ್ತದೆ. ಹೆಣ್ಣಿಗೆ ಸೀಮಾರೇಖೆ ದಾಟಿ ಯಾವ ಸ್ವಾತಂತ್ರ್ಯವೂ ಬೇಡ.ಸಾಧನೆಗೆ ಗೌರವ ತೋರಬೇಕು.ಅಹಂಭಾವ ತೋರಲಾಗದು ಎಂದರು.
ಮತ್ತೋರ್ವ ಸಾಹಿತಿ ಜಲಾ ಕಾಳಪ್ಪ ಮಾತನಾಡಿ, ಮನೇಹಳ್ಳಿಮಠದ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಿಳಾ ಮಿಲನ ಕಾರ್ಯಕ್ರಮ ಹಮ್ಮಿಕೊಂಡು ಸಾಧಕ ಮಹಿಳೆಯರನ್ನು ಸನ್ಮಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿ, ಶುಭ ಕೋರಿದರು.
ಆಯುರ್ವೇದ ವೈದ್ಯೆ ಡಾ.ವಿನ್ಯಾಸ ಮಾತನಾಡಿ, ಆಯುರ್ವೇದ ಪದ್ಧತಿ, ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಲಾವಿದೆ ರಾಣಿ ಮಾಚಯ್ಯ, ಹಾಕಿ ತರಬೇತುಗಾರ್ತಿ ದೇವರಾಜಮ್ಮ, ಸಾಹಿತಿಗಳಾದ ಶ.ಗ.ನಯನತಾರಾ, ಫ್ಯಾನ್ಸಿಮುತ್ತಣ್ಣ, ಜಲಾ ಕಾಳಪ್ಪ, ಶರ್ಮಿಳಾ ರಮೇಶ್, ಗೀತಾಂಜಲಿ, ಮುಖ್ಯಶಿಕ್ಷಕಿ ಪ್ರೇಮಾ, ಬಸ್ ನಿರ್ವಾಹಕಿ ಮಾಯಾಗಿರೀಶ್, ಸಮಾಜ ಸೇವಕಿ ಅನಿತಾತೋಟಪ್ಪಶೆಟ್ಟಿ ಇತರ ಸಾಧಕರ ತಲೆ ಮೇಲೆ ಮಠಾಧೀಶರು ಪುಷ್ಪವೃಷ್ಠಿ ಕರೆದು ಆಶೀರ್ವಧಿಸಿ, ಸನ್ಮಾನಿಸಿ ಗೌರವಿಸಲಾಯಿತು..
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ನ್ಯಾಯಾಧೀಶೆ ಜಯಶ್ರೀ ಮಾತನಾಡಿ, ದೇವರ ಕೃಪೆಯೊಂದಿಗೆ ಜ್ಞಾನ ದಾಸೋಹ ನಡೆಸುವ ಉದ್ದೇಶದಿಂದ ಮಠಾಧೀಶರು ಜಾತ್ರಾಮಹೋತ್ಸವದಲ್ಲಿ ನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಭಕ್ತರ ಮನೋಭಾವ ಬದಲಾಯಿಸುವ ಪ್ರಯತ್ನ ನಡೆದಿದೆ.ಪ್ರೀತಿ ತೋರಿಸುವ ಮೂಲಕ ಪೋಷಕರು ಮಕ್ಕಳನ್ನು ಮಾದಕ ದ್ರವ್ಯ ಸೇವನೆಯಿಂದ ದೂರವಿಡಬೇಕು.ಚಿಕ್ಕಂದಿನಿಂದಲೇ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಬೇಕು ಎಂದು ಹೇಳಿದರು.
ತಪೋಕ್ಷೇತ್ರ ಕ್ಷೇತ್ರ ಮನೆಹಳ್ಳಿ ಮಠಾಧೀಶ ಮಹಾಂತ ಶಿವಲಿಂಗ ಸ್ವಾಮೀಜಿ, ಮುದ್ದಿನಕಟ್ಟೆ ಮಠಾಧೀಶ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಬಸವಪಟ್ಟಣ ತೋಂಟದಾರ್ಯ ಮಠಾಧೀಶ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ, ಚಂಗಡಹಳ್ಳಿ ಮಠಾಧೀಶ ಬಸವ ಮಹಾಂತ ಸ್ವಾಮೀಜಿ, ತೊರೆನೂರು ವಿರಕ್ತ ಮಠಾಧೀಶ ಮಲ್ಲೇಶ ಸ್ವಾಮೀಜಿ, ಮಠದ ಕಾರ್ಯಕ್ರಮ ಆಯೋಜಕ ಎಸ್.ಮಹೇಶ್ ಹಾಗೂ ಕ್ಷೇತ್ರದ ಸ್ವಯಂ ಸೇವಕರು ಉಪಸ್ಥಿತರಿದ್ದರು.
.ಸಾಹಿತಿಗಳಾದ ಶರ್ಮಿಳಾ ರಮೇಶ್, ಗೀತಾಂಜಲಿ, ಮುಖ್ಯಶಿಕ್ಷಕಿ ಪ್ರೇಮಾ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ವರದಿ  : ಶ.ಗ.ನಯನತಾರಾ, ಪತ್ರಕರ್ತೆ, ಶನಿವಾರಸಂತೆ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.