Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಂಕ್ರಾಮಿಕ ರೋಗ : ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಂಕ್ರಾಮಿಕ ರೋಗ : ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಏಪ್ರಿಲ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಏ.30 NEWS DESK : ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಲ್ಲಿದ್ದು, ಬೇಸಿಗೆ ಕಾಲವಾಗಿರುವುದರಿಂದ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮವಹಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ.
ಮದುವೆ ಸಮಾರಂಭಗಳು, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು.
ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ ಮಾಹಿತಿ ಕಲೆ ಹಾಕಿ, ಎಲ್ಲಾ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸುವುದು ಮತ್ತು ಸಾರ್ವಜನಿಕರಿಗೆ ಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮವಹಿಸುವುದು.
ಎಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪರೀಕ್ಷೆ ನಡೆಸಿದ ನೀರಿನ ಮೂಲಗಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರಯೋಗಶಾಲೆಯಲ್ಲಿ ನಿರ್ವಹಣೆ ಮಾಡುವುದು. ಕುಡಿಯಲು ಯೋಗ್ಯವಲ್ಲವೆಂದು ಧೃಢಪಟ್ಟ ನೀರಿನ ಮೂಲಗಳನ್ನು ಕೂಡಲೇ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರದೊಂದಿಗೆ ಸ್ವಚ್ಚಗೊಳಿಸಿ ಕ್ಲೋರಿನೇಷನ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕ್ರಮವಹಿಸುವುದು.
ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಹೋಗಿದ್ದರೆ ತಕ್ಷಣ ಸಂಬಂಧಪಟ್ಟ ನಗರ ಪಾಲಿಕೆ, ಪಟ್ಟಣ ಪಂಚಾಯತ್, ಪುರಸಭೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳುವುದು ಮತ್ತು ವಾಟರ್ ಮ್ಯಾನ್‍ರವರಿಗೆ ಕ್ಲೋರಿನೇಷನ್ ಮಾರ್ಗಸೂಚಿಯನ್ನು ಆರೋಗ್ಯ ಇಲಾಖಾ ವತಿಯಿಂದ ನೀಡುವುದು.
ಸ್ಥಳೀಯ ಆಹಾರ ಸುರಕ್ಷತಾ ಅಧಿಕಾರಿಗಳು ಹೋಟೆಲ್ ಮತ್ತು ಅಂಗಡಿಗಳ ತಪಾಸಣೆ ನಡೆಸಿ ಆಹಾರ ಮತ್ತು ನೀರಿನ ಗುಣಮಟ್ಟದ ಸುರಕ್ಷತೆಯ ಬಗ್ಗೆ ಕ್ರಮವಹಿಸುವುದು. ಮನೆ ಭೇಟಿ ಸಮೀಕ್ಷೆಯಲ್ಲಿ ವೈಯಕ್ತಿಕ ಶುಚಿತ್ವ, ಪರಿಸರ ನೈರ್ಮಲ್ಯ, ಶುದ್ಧ ಕುಡಿಯುವ ನೀರು, ಬಿಸಿಯಾದ ಆಹಾರ ಸೇವನೆ, ರಸ್ತೆ/ಬೀದಿ ಬದಿಯಲ್ಲಿ ಕತ್ತರಿಸಿ ಮಾರಾಟ ಮಾಡುವ ಹಣ್ಣು-ಹಂಪಲುಗಳನ್ನು ತೆರೆದ ಆಹಾರ ಪದಾರ್ಥಗಳನ್ನು ಸೇವಿಸದಂತೆ ಸಾರ್ವಜನಿಕರು ಎಚ್ಚರ ವಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಕೆಮ್ಮುವಾಗ ಮತ್ತು ಸೀನುವಾಗ ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಸೂಕ್ತ ಚಿಕಿತ್ಸೆಗಾಗಿ ಅಗತ್ಯವಾದ ಜೀವರಕ್ಷಕ ಔಷಧಿಗಳು ಹಾಗೂ ಕ್ರಿಮಿ-ಕೀಟನಾಶಕಗಳನ್ನು ಎಲ್ಲಾ ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಲಭ್ಯವಿರುವಂತೆ ಕ್ರಮ ಕೈಗೊಳ್ಳುವುದು.
ಜಾತ್ರೆ, ಉರೂಸ್ ಹಾಗೂ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಆರೋಗ್ಯ ಇಲಾಖೆಯಿಂದ ಆರೋಗ್ಯ ಮಾಹಿತಿ, ವಸ್ತು ಮಾಹಿತಿ, ಶಿಕ್ಷಣ ಸಂವಹನ ಪ್ರದರ್ಶನ ಏರ್ಪಡಿಸಿ ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಶಿಕ್ಷಣ ನೀಡುವುದು. ನಿರ್ಧಿಷ್ಟವಾದ ರೋಗ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗದಂತೆ ಜಾಗ್ರತೆವಹಿಸಿ, ಸಾರ್ವಜನಿಕರು ಇದಕ್ಕೆ ಸಂಬಂಧಪಟ್ಟ ಇಲಾಖೆಯವರಿಗೆ ಸೂಕ್ತ ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.