

ವಿರಾಜಪೇಟೆ ಮೇ 1 NEWS DESK : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎ ಸಿ ಘಟಕ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಕಾಲೇಜಿನಲ್ಲಿ ಪಿಸಿಓಡಿ ಮತ್ತು ಸರ್ವಿಕಲ್ ಕ್ಯಾನ್ಸರ್ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕ್ರೆಡೋ ಮೆಡಿಕಲ್ ಸೆಂಟರ್ ನ ವೈದ್ಯರಾದ ಡಾ. ಮೇಜರ್ ಅಲ್ಲಂ ಪ್ರಭು ವಿದ್ಯಾರ್ಥಿನಿಯರಿಗೆ ವಿಶೇಷ ಉಪನ್ಯಾಸವನ್ನು ನೀಡಿದರು.
ಪ್ರಸ್ತುತ ಯುಗದಲ್ಲಿ ಆಹಾರ ಕ್ರಮಗಳು ಬದಲಾಗಿದ್ದು, ನಿಯಮಿತ ಆಹಾರ ಸೇವನೆ, ಯೋಗದಿಂದ ಮತ್ತು ಶುಚಿತ್ವದಿಂದ ಮಾತ್ರ ಆರೋಗ್ಯ ರಕ್ಷಣೆ ಸಾಧ್ಯ ಎಂದರು.
ಸರ್ವಿಕಲ್ ಕ್ಯಾನ್ಸರ್ ಬಗ್ಗೆ, ಅದರ ನಿಯಂತ್ರಣ ಕ್ರಮಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.
ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ನಾವು ಶುಚಿಯಾಗಿಡಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ, ಮಹಿಳಾ ಘಟಕದ ಸಂಚಾಲಕರಾದ ಮುತ್ತಮ್ಮ, ಸುನೀತಾ ಮತ್ತು ವಿದ್ಯಾರ್ಥಿನಿಯರು ಹಾಜರಿದ್ದರು.








