Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನೆರವು : ಎ.ಎನ್.ಮಹೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನೆರವು : ಎ.ಎನ್.ಮಹೇಶ್

ಮೇ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಮಡಿಕೇರಿ ಮೇ 1 NEWS DESK  : ವಿಶ್ವವ್ಯಾಪಿಯಾಗಿರುವ ಸ್ಕೌಟ್, ಗೈಡ್ಸ್ ಸಂಸ್ಥೆಯ ಚಳುವಳಿ ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ, ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದರೊಂದಿಗೆ ಯುವ ಸಮೂಹದಲ್ಲಿ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆ ವೃದ್ಧಿಗೆ ಸಹಕಾರಿಯಾಗಿದೆ ಎಂದು ಸ್ಕೌಟ್ಸ್, ಗೈಡ್ಸ್ ನ ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.
ಮಡಿಕೇರಿ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಕಚೇರು ಆವರಣದಲ್ಲಿ ನಿರ್ಮಿಸಲುದ್ದೇಶಿಸಿರುವ ಶತಮಾನೋತ್ಸವ ಭವನ ನಿರ್ಮಾಣಕ್ಕೆ ರಾಜ್ಯ ಸಂಸ್ಥೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಸೂಕ್ತ ಅನುದಾನ ಪಡೆದು ಸ್ಕೌಟ್ಸ್ ಮತ್ತು ಗೈಡ್ಸ್ ನ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಸ್ಥೆಯ ವತಿಯಿಂದ ಸಹಕರಿಸಲಾಗುವುದು ಎಂದರು.
ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಂಸ್ಥೆಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಅವರ ನೇತೃತ್ವದಲ್ಲಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಡಳಿತದ ಸಹಕಾರ ಪಡೆಯಲು ಮುಂದಿನ ದಿನಗಳಲ್ಲಿ ಸಭೆ ನಡೆಸಿ ಕಟ್ಟಡ ನಿರ್ಮಾಣಕ್ಕೆ ಯೋಜನೆ ಸಿದ್ಧತೆ ನಡೆಸಲಾಗುವುದು ಎಂದು ಮಹೇಶ್ ತಿಳಿಸಿದರು.
ಕೊಡಗಿನ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಾಗೂ ಕೋವಿಡ ಸಂದರ್ಭದಲ್ಲಿ ಸಂಸ್ಥೆಯ ಸ್ವಯಂ ಸೇವಕರು ಕೈಗೊಂಡ ಸಾಮಾಜಿಕ ಸೇವಾ ಕಾರ್ಯಗಳು ಅನುಕರಣೀಯವಾದುದು ಎಂದು ಮಹೇಶ್ ತಿಳಿಸಿದರು.
ಜಿಲ್ಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ವಾರ್ಷಿಕವಾಗಿ ಕೈಗೊಳ್ಳುತ್ತಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಸ್ಕೌಟ್ಸ್ , ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಕೆ..ಟಿ.ಬೇಬಿ ಮ್ಯಾಥ್ಯೂ, ಕೊಡಗಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿ ಬೆಳೆದು ಬಂದ ಬಗ್ಗೆ ವಿವರಿಸಿದ ಅವರು, ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಸಂಸ್ಥೆಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದರು.
ಗೈಡ್ಸ್ ನ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ.ಪ್ರೇಮಕುಮಾರ್ ಮಾತನಾಡಿದರು.
ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜೀರ ಅಯ್ಯಪ್ಪ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಗೈಡ್ಸ್ ನ ಸಹಾಯಕ ಆಯುಕ್ತ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಸಂಸ್ಥೆಯ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ, ಬುಲ್ ಬುಲ್ ಘಟಕದ ಮುಖ್ಯಸ್ಥೆ ಡೈಸಿ, ಗೈಡ್ಸ್ ಕ್ಯಾಪ್ಟನ್ ಗಹನ ಇತರರು ಇದ್ದರು.
ಸನ್ಮಾನ: ಇದೇ ವೇಳೆ ಸರ್ಕಾರದ ವತಿಯಿಂದ ರಾಜ್ಯಮಟ್ಟದ ಪರಿಸರ ತಜ್ಞರ ಮೌಲ್ಯಮಾಪನ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಕೌಟ್ಸ್, ಗೈಡ್ಸ್ ನ ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಎ.ಎನ್.ಮಹೇಶ್ ಅವರನ್ನು ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಇದಕ್ಕೂ ಮೊದಲು ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಾಗದಲ್ಲಿ ನಿರ್ಮಿಸಲುದ್ದೇಶಿರುವ ಸ್ಕೌಟ್ಸ್ ನ ಶತಮಾನೋತ್ಸವ ಭವನದ ಸ್ಥಳವನ್ನು ಎ.ಎನ್.ಮಹೇಶ್ ಪರಿಶೀಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.2ರಂದು ಪೊನ್ನಂಪೇಟೆಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 29, 2026

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : “ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಶ್ರೀಮಂಗಲ ಆಯುಷ್…

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.