

ಮಡಿಕೇರಿ ಮೇ 1 NEWS DESK : ಸ್ಕೌಟ್ಸ್, ಗೈಡ್ಸ್ ರಾಜ್ಯ ಸಂಸ್ಥೆಯ ಉಪಾಧ್ಯಕ್ಷರಾದ ಎ.ಎನ್.ಮಹೇಶ್ ಅವರು ಮಡಿಕೇರಿಯ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನಕ್ಕೆ ಭೇಟಿ ನೀಡಿದರು. ಸಂಸ್ಥೆಯ ಶತಮಾನೋತ್ಸವ ಭವನದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಾಗವನ್ನು ಪರಿಶೀಲಿಸಿದರು. ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.









