
ಮಡಿಕೇರಿ ಮೇ 2 NEWS DESK : ಸೋಮವಾರಪೇಟೆ ಲಯನ್ಸ್ ಕ್ಲಬ್ ವತಿಯಿಂದ ಗರಗಂದೂರು ಬಿ ಗ್ರಾಮದ ಕೆ.ಸಿ.ಪೂರ್ವಿಕ ಅವರನ್ನು ಸನ್ಮಾನಿಸಲಾಯಿತು.
ಗರಗಂದೂರು ಬಿ ಗ್ರಾಮದ ಚಿದಾನಂದ ಮತ್ತು ಲತಾ ದಂಪತಿಗಳ ಪುತ್ರಿ ಕೆ.ಸಿ.ಪೂರ್ವಿಕ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆಯುವುದರ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ. ಇವರ ಈ ಸಾಧನೆಯನ್ನು ಗುರುತಿಸಿ ಸೋಮವಾರಪೇಟೆ ಲಯನ್ಸ್ ಕ್ಲಬ್ ವತಿಯಿಂದ ನಡೆದ ಸಮಾರಂಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂತೀಯ ಅಧ್ಯಕ್ಷ ಅಂಬೆಕಲ್ಲು ನವೀನ್, ವಲಯ ಅಧ್ಯಕ್ಷ ಚಿಟ್ಟಿಮಾಡ ರೋಹಿತ್, ಬೆಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಜಯಪ್ರಕಾಶ್, ಕಾರ್ಯದರ್ಶಿ ಜಿತೇಂದ್ರ ಸಿಂಗ್, ಸೋಮವಾರಪೇಟೆ ಲಯನ್ಸ್ ಕ್ಲಬ್ ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ವಿರಪ್ಪ ಹಾಜರಿದ್ದರು. ಲಾವಣ್ಯ ಅವರ ಪರಿಚಯವನ್ನು ಶಿಕ್ಷಕಿ ರಾಗಿಣಿ ಮಂಡಿಸಿದರು.









