Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ನೈರುತ್ಯ ಪದವೀಧರರ, ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ : ಮೇ 9 ರಂದು ಅಧಿಸೂಚನೆ ಪ್ರಕಟ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನೈರುತ್ಯ ಪದವೀಧರರ, ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ : ಮೇ 9 ರಂದು ಅಧಿಸೂಚನೆ ಪ್ರಕಟ

ಮೇ 3, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 3 NEWS DESK : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಚುನಾವಣಾ ಕಾರ್ಯಸೂಚಿಯನ್ನು ಹೊರಡಿಸಿದೆ.
ಮೇ 9 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ.
ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30 ವರ್ಷಗಳಿಗೆ ಕಡಿಮೆ ಇರಕೂಡದು. ಮತ್ತು ಅವರು ಕರ್ನಾಟಕದ ಯಾವುದಾದರು ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಮತ್ತು ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು.
ನೈರುತ್ಯ ಪದವೀಧರರ ಕ್ಷೇತ್ರದ, ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.
ಈ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ಹಾಗೂ ಕ್ಷೇತ್ರ ವ್ಯಾಪ್ತಿಯು ಇಂತಿದೆ. ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು (ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕು ಕ್ಷೇತ್ರ ವ್ಯಾಪ್ತಿಗೆ).
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು(ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಗೆ).
ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ಮೇ 9 ರಿಂದ ಮೇ 16 ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಮೈಸೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಮೇ 10 ರಿಂದ ಮೇ, 12 ರವರೆಗೆ ನೆಗೋಷಿಯೇಬಲ್ ಇನ್ಸ್‍ಟ್ಟುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಆ ದಿನಗಳಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ.
ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರ ಕಚೇರಿಯಿಂದ ಪಡೆಯಬಹುದು. ಈ ಚುನಾವಣೆಯ ಸಂಬಂಧದಲ್ಲಿ ಸ್ಪರ್ಧಿಸಲಿಚ್ಛಿಸುವವರು 1951 ರ ಪ್ರಜಾ ಪ್ರಾತಿನಿಧ್ಯ ಅಧಿನಿಯಮದ 33 ನೇ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿಯ ನಾಮಪತ್ರದಲ್ಲಿ ಸಂಬಂಧಿಸಿದ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಕನಿಷ್ಠ 10 ಮತದಾರರು ಪ್ರಸ್ತಾಪಕರಾಗಿ (ಪ್ರೊಪೋಸರ್) ಸಹಿ ಮಾಡಿರಬೇಕು. ಪ್ರತಿ ಅಭ್ಯರ್ಥಿ ರೂ.10 ಸಾವಿರ ಠೇವಣಿ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ರೂ. 5 ಸಾವಿರ ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.
ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಅವರುಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.
ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಅವರುಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.
ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ರವರಿಗೆ ಮಾತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ನಮೂನೆಯಲ್ಲಿ ನಾಮಪತ್ರ ಮತ್ತು ನಿಗಧಿಪಡಿಸಿದ ನಮೂನೆಗಳಲ್ಲಿ ನೋಟರಿಯವರಿಂದ ಪ್ರಮಾಣೀಕರಿಸಿದ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ನಾಮಪತ್ರಗಳನ್ನು ಸಲ್ಲಿಸುವ ಅಭ್ಯರ್ಥಿಗಳು ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಲು ಇಚ್ಛಿಸುವ ಸಂಬಂಧದಲ್ಲಿ ಆಯೋಗ ನಿಗಧಿಪಡಿಸಿರುವ ಪತ್ರ ಎಎ, ಬಿಬಿ ಗಳನ್ನು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾದ ಮೇ, 16 ರ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ಇತರೆ 4 ಜನ, ಅಂದರೆ ಅವರ ಸೂಚಕರು ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.