Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮರಗಳ ಸರ್ವೆ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಕೊಡಗು ಬಿಜೆಪಿ
ಇತ್ತೀಚಿನ ಸುದ್ದಿಗಳು

ಮರಗಳ ಸರ್ವೆ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಕೊಡಗು ಬಿಜೆಪಿ

May 4, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲೆಯ ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಸರ್ವೆ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸದಿದ್ದಲ್ಲಿ ಬೆಳೆಗಾರರ ಬೆಂಬಲದೊಂದಿಗೆ ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ವ್ಯಾಪಿ ಬೃಹತ್ ಹೋರಾಟವನ್ನು ರೂಪಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಎಚ್ಚರಿಕೆ ನೀಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಅರಣ್ಯ ಅಧಿಕಾರಿಗಳು ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಪಟ್ಟಿ ಮಾಡಿ ಕಂದಾಯ ಇಲಾಖೆಗೆ ವರದಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ. ಜಿಲ್ಲೆಯ ಬೆಳೆಗಾರರಲ್ಲಿ ಗೊಂದಲ ಸೃಷ್ಟಿಸಿರುವ ಆದೇಶವನ್ನು ಸರಕಾರ ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.
ಜಿಲ್ಲೆಯ ಬೆಳೆಗಾರರು ಪರಿಸರಕ್ಕೆ ಪೂರಕವಾಗಿ ಮರಗಳನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ. ಯಾವುದೇ ದುರುದ್ದೇಶಕ್ಕೆ ಮರಗಳ ಹನನ ಮಾಡಿಲ್ಲ. ಕೊಡಗಿನ ಜನರ ಪರಿಸರ ಕಾಳಜಿಯಿಂದ ಅರಣ್ಯ ಪ್ರದೇಶ ಮತ್ತು ದೇವರಕಾಡುಗಳು ಸಂರಕ್ಷಿಸಲ್ಪಟ್ಟಿವೆ. ತೋಟ ಮಾಡುವಾಗಲೂ ಮರಗಳನ್ನು ಕಡಿಯುತ್ತಿಲ್ಲ, ಬದಲಿಗೆ ಹಸಿರನ್ನು ಕಾಪಾಡಿಕೊಂಡು ಬರಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರಕಾರ ಏಕಾಏಕಿ ಖಾಸಗಿ ಜಮೀನಿನಲ್ಲಿರುವ ಮರಗಳ ಸರ್ವೆ ಕಾರ್ಯಕ್ಕೆ ಆದೇಶ ಮಾಡುವ ಮೂಲಕ ಬೆಳೆಗಾರರಲ್ಲಿ ಆತಂಕವನ್ನು ಸೃಷ್ಟಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯ ಜನರಿಗೆ ಅರಣ್ಯ ಸಂಪತ್ತನ್ನು ಹೇಗೆ ಸಂರಕ್ಷಿಸಬೇಕು ಎನ್ನುವುದು ತಿಳಿದಿದೆ, ಸರಕಾರ ಹೊಸ ಕಾನೂನನ್ನು ಸೃಷ್ಟಿ ಮಾಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಭೂಮಾಫಿಯಗಳಿಂದ ಭೂಪರಿವರ್ತನೆ ಮತ್ತು ಪ್ರಕೃತಿ ನಾಶವಾಗುತ್ತಿದೆಯೇ ಹೊರತು ಬೆಳೆಗಾರರಿಂದ ಪರಿಸರಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ. ಸಿಸಿಎಫ್ ಹಾಗೂ ಡಿಸಿಎಫ್ ಅವರನ್ನು ಭೇಟಿ ಮಾಡಿದ ನಾವುಗಳು ಸರಕಾರದ ಆದೇಶದ ಕುರಿತು ಸ್ಪಷ್ಟನೆ ಕೇಳಿದೆವು. ಈ ಸಂದರ್ಭ ಅಧಿಕಾರಿಗಳು ತೋಟಗಳಲ್ಲಿರುವ ಸರಕಾರಿ ಮರಗಳನ್ನು ಗುರುತು ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ. ಈ ಬೆಳವಣಿಗೆ ಬೆಳೆಗಾರರಿಗೆ ವ್ಯತಿರಿಕ್ತವಾಗಿದ್ದು, ಗುರುತು ಮಾಡಿದ ಮರ ಪ್ರಾಕೃತಿಕ ವಿಕೋಪದಿಂದ ನೆಲಕಚ್ಚಿದರೆ ಅಥವಾ ಮರಗಳ್ಳರು ಕಳ್ಳತನ ಮಾಡಿದರೆ ಮರ ನಾಪತ್ತೆ ಪ್ರಕರಣ ತೋಟದ ಮಾಲೀಕರ ವಿರುದ್ಧ ದಾಖಲಾಗುವ ಆತಂಕವಿದೆ ಎಂದು ರವಿ ಕಾಳಪ್ಪ ಗಮನ ಸೆಳೆದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಸರಕಾರಕ್ಕೆ ಸಲಹೆ ನೀಡಿ ತಕ್ಷಣ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ತಪ್ಪಿದಲ್ಲಿ ಜಿಲ್ಲೆಯ ಎಲ್ಲಾ ಬೆಳೆಗಾರರನ್ನು ಸೇರಿಸಿ ಅರಣ್ಯ ಇಲಾಖೆ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ ಮುಂದಿನ 24 ಗಂಟೆಯೊಳಗೆ ಸರಕಾರ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜಿಲ್ಲೆಯ ಜನರು ಪರಿಸರ ಪ್ರೇಮಿಗಳು, ಹಿರಿಯರು ಮರಗಿಡಗಳನ್ನು ಸಂರಕ್ಷಿಸಿಕೊಂಡು ಬಂದಿದ್ದಾರೆ, ಅರಣ್ಯ ಇಲಾಖೆಯಿಂದ ಪರಿಸರ ಸಂರಕ್ಷಣೆಯ ಪಾಠ ಕಲಿಯುವ ಅಗತ್ಯವಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್, ವಿ.ಕೆ.ಲೋಕೇಶ್ ಹಾಗೂ ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಚಿಂಚಾ ಪಾನಕ ತಯಾರಿಸುವ ವಿಧಾನ*
Next Article *ಮೇ 5 ರಿಂದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆರಂಭ : ಮೇ 6 ರಂದು ನಾಗದರ್ಶನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.