Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾರತ ಕಿರಿಯರ ತಂಡದಲ್ಲಿ ಸೋಮವಾರಪೇಟೆಯ ವಚನ್, ಪೊನ್ನಂಪೇಟೆಯ ಬಿಪಿನ್
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಭಾರತ ಕಿರಿಯರ ತಂಡದಲ್ಲಿ ಸೋಮವಾರಪೇಟೆಯ ವಚನ್, ಪೊನ್ನಂಪೇಟೆಯ ಬಿಪಿನ್

ಮೇ 5, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ NEWS DESK ಮೇ 5 :   ಮೇ 20 ರಿಂದ ಹತ್ತು ದಿನಗಳು ಯುರೋಪ್ ಪ್ರವಾಸಕ್ಕೆ ತೆರಳಲಿರುವ ಭಾರತ ಕಿರಿಯರ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದ್ದು, ತಂಡದಲ್ಲಿ ಜಿಲ್ಲೆಯ ಸೋಮವಾರಪೇಟೆಯ ಹಾಕಿ ಆಟಗಾರ ವಚನ್ ಅಶೋಕ್ ಮತ್ತು ಪೊನ್ನಂಪೇಟೆಯ ಬಿಪಿನ್ ರವಿ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇಬ್ಬರೂ ಆಟಗಾರರು ಪೊನ್ನಂಪೇಟೆಯ ಕ್ರೀಡಾಶಾಲೆಗೆ ಸೇರ್ಪಡೆಗೊಂಡು ಹತ್ತನೇ ತರಗತಿ ಮುಗಿದ ನಂತರ ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ಬೆಂಗಳೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಒಟ್ಟಿಗೆ ಭಾರತ ಕಿರಿಯರ ತಂಡಕ್ಕೆ ಆಯ್ಕೆಯಾಗುವ ಮೂಲಕ ಅಪರೂಪದ ಸ್ನೇಹಿತರೆನಿಸಿಕೊಂಡಿದ್ದಾರೆ. ಒಟ್ಟಾರೆ ಕರ್ನಾಟಕ ರಾಜ್ಯದಿಂದ 20 ಮಂದಿ ತಂಡದಲ್ಲಿ ಸ್ಥಾನ ಪಡೆದಿರುವ ಈರ್ವರು ಆಟಗಾರರು ಎಲ್ಲಾ ಪಂದ್ಯಾವಳಿಯಲ್ಲೂ ಜೊತೆಯಾಗಿ ಆಡಿರುವುದು ವಿಶೇಷ. ಮೂಲತಃ ಸೋಮವಾರಪೇಟೆಯ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಅಶೋಕ್ ಮತ್ತು ಸುಜಿನಿ ದಂಪತಿಗಳ  ಪುತ್ರನಾಗಿರುವ ವಚನ್, ಬಾಲ್ಯದಿಂದಲೇ ಹಾಕಿ ಕ್ರೀಡೆಯತ್ತ ಒಲವು ಮೂಡಿಸಿಕೊಂಡು ಎಂಟನೇ ತರಗತಿಗೆ ಪೊನ್ನಂಪೇಟೆಯ ಕ್ರೀಡಾಶಾಲೆಗೆ ಆಯ್ಕೆಯಾಗುತ್ತಾರೆ. ನಂತರ ಪಿಯುಸಿಗೆ ಬೆಂಗಳೂರಿನ ಡಿವೈಎಸ್‌ಎಸ್ ಕ್ರೀಡಾ ಹಾಸ್ಟೆಲ್‌ಗೆ ಸೇರ್ಪಡೆಗೊಳ್ಳುತ್ತಾರೆ. ಪ್ರಸ್ತುತ ಬೆಂಗಳೂರಿನ ಮಹಾವೀರ್ ಜೈನ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ವಚನ್, ಭಾರತದ ತಂಡದ ಭವಿಷ್ಯದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ವಚನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸೋಮವಾರಪೇಟೆಯ ಒಎಲ್‌ವಿ ಕಾನ್ವೆಂಟ್‌ನಲ್ಲಿ ವ್ಯಾಸಂಗ ಮಾಡಿದ್ದಾರೆ. 2019ರಲ್ಲಿ ಛತ್ತೀಸ್‌ಗಡ್‌ನ ಬಿಲಾಸ್‌ಪುರದಲ್ಲಿ ಜರುಗಿದ ಸಬ್ ಜೂನಿಯರ್ ರಾಷ್ಟ್ರೀಯ ಪಂದ್ಯಾವಳಿ, 2022ರಲ್ಲಿ ಚೆನ್ನೈನ ಕೋವಿಲ್‌ಪಟ್ಟಿಯಲ್ಲಿ ನಡೆದ ಕಿರಿಯರ ರಾಷ್ಟ್ರೀಯ  ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು, ಒಡಿಶಾದ ರೂರ್ಕೆಲಾದಲ್ಲಿ ಕಿರಿಯರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ವಚನ್ ಮತ್ತು ಬಿಪಿನ್ ಇಬ್ಬರೂ ಪಾಲ್ಗೊಂಡಿರುವುದು ವಿಶೇಷ. ಅಲ್ಲದೇ 2024ರ ಯುರೋಪ್ ಪ್ರವಾಸಕ್ಕೂ ಕೂಡ ಒಟ್ಟಿಗೆ ಆಯ್ಕೆಯಾಗಿರುವುದು ವಿಶೇಷವಾಗಿದೆ. ಮೂಲತಃ ಪೊನ್ನಂಪೇಟೆಯ ಬಿಲ್ಲವರ ರವಿ ಮತ್ತು ಸುನಂದ ದಂಪತಿಗಳ ಪುತ್ರರಾಗಿರುವ ಬಿಪಿನ್ ಕಳೆದ ವರ್ಷವೂ ಕಿರಿಯರ ತಂಡದ ಕ್ಯಾಂಪ್‌ನಲ್ಲಿ ಸ್ಥಾನಪಡೆದಿದ್ದರು. ಆದರೆ ಈ ಬಾರಿ ಭಾರತ ಕಿರಿಯರ ತಂಡಕ್ಕೆ ಆಯ್ಕೆಯಾಗುವ ಮೂಲಕ ಭವಿಷ್ಯದಲ್ಲಿ ಉತ್ತಮ ಆಟಗಾರರಾಗಿ ರೂಪುಗೊಳ್ಳುವ ಭರವಸೆ ಮೂಡಿಸಿದ್ದಾರೆ. ಪೊನ್ನಂಪೇಟೆಯ ಕ್ರೀಡಾಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಬಿಪಿನ್ ಮತ್ತು ವಚನ್ ಒಂದೇ ಬ್ಯಾಚ್‌ನಲ್ಲಿ ಕ್ರೀಡಾಶಾಲೆಗೆ ಆಯ್ಕೆಯಾದವರು.  ಬಿಪಿನ್ ಎರಡು ಸಬ್‌ಜೂನಿಯರ್, ಎರಡು ಜೂನಿಯರ್ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಪ್ರತಿನಿಧಿಸಿ, ಒಂದು ವರ್ಷದ ಹಿಂದೆಯೇ ಹಾಕಿ ಕ್ಯಾಂಪ್‌ಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದರು. ತಮ್ಮ ಪುತ್ರ ವಚನ್ ಹಾಗೂ ಪೊನ್ನಂಪೇಟೆಯ ರವಿಯವರ ಪುತ್ರ ಬಿಪಿನ್ ಇಬ್ಬರೂ ಆಯ್ಕೆಯಾಗಿರುವುದು ಸಂತಸ ತಂದಿದೆ. ನಾನೂ ಕೂಡ ಹಾಕಿ ಕ್ರೀಡೆಯಲ್ಲಿ ರಾಷ್ಟ್ರೀಯ ತಂಡದಲ್ಲಿ ಆಡಬೇಕೆಂದು ಕನಸು ಕಂಡಿದ್ದೆ. ಆದರೆ ನನ್ನ ಕನಸನ್ನು ಮಗ ಈಡೇರಿಸುವ ಹಾದಿಯಲ್ಲಿ ಹೆಜ್ಜೆ ಹಾಕಿದ್ದಾನೆ. ಮುಂದಿನ ದಿನಗಳಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಉತ್ತಮ ಹಾಕಿ ಆಟಗಾರನಾಗಿ ಹೊರಹೊಮ್ಮಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಲ್ಲದೇ ಜಿಲ್ಲೆಯ ಎಲ್ಲ ಹಾಕಿ ಆಟಗಾರರ ಹಾಗೂ ಹಾಕಿ ಪ್ರೇಮಿಗಳ ಆಶೀರ್ವಾದ ಇಬ್ಬರೂ ಕ್ರೀಡಾಪಟುಗಳ ಮೇಲಿರಲಿ ಎಂದು ಡಾಲ್ಫಿನ್ ಹಾಕಿ ಕ್ಲಬ್ ಅಧ್ಕ್ಷಕ್ಷ ಹಾಗೂ ವಚನ್ ತಂದೆ ಅಶೋಕ್ ಮತ್ತು ತಾಯಿ ಸುಜಿನಿ ತಮ್ಮ ಸಂತಸ ವ್ಯಕ್ತಪಡಿಸುತ್ತಾರೆ. ಬಾಲ್ಯದಿಂದಲೇ ಹಾಕಿಯತ್ತ ವಿಶೇಷ ಆಸಕ್ತಿಹೊಂದಿದ್ದ ಬಿಪಿನ್, ಸತತ ಪರಿಶ್ರಮದಿಂದ ಭಾರತ ಕಿರಿಯರ ತಂಡಕ್ಕೆ ಆಯ್ಕೆಯಾಗಿದ್ದಾನೆ. ಕಳೆದ ವರ್ಷವೂ ಕೂಡ ಕ್ಯಾಂಪ್‌ಗೆ ಆಯ್ಕೆಯಾದರೂ, ತಂಡದಲ್ಲಿ ಸ್ಥಾನ ದೊರೆತಿರಲಿಲ್ಲ. ಆದರೆ ಈ ಬಾರಿ ಅವಕಾಶ ದೊರೆತಿದೆ. ಇವನ ಜೊತೆಗೆ ಸೋಮವಾರಪೇಟೆಯ ವಚನ್ ಕೂಡ ಆಯ್ಕೆಯಾಗಿರುವುದು ಸಂತಸ ತಂದಿದೆ. ಇವರಿಬ್ಬರ ಭವಿಷ್ಯ ಉಜ್ವಲವಾಗಲಿ. ಪ್ರಸ್ತುತ ಬೆಂಗಳೂರಿನ ಕೆಂಗೇರಿಯಲ್ಲಿರುವ ಸಾಯ್ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ಪೊನ್ನಂಪೇಟೆಯ ಬಿಪಿನ್ ತಂದೆ ರವಿ ಮತ್ತು ಸುನಂದ ದಂಪತಿಗಳು ತಮ್ಮ ಸಂತಸವನ್ನು ಹಂಚಿಕೊಂಡರು. ಡಿಫೆಂಡರ್ ರೋಹಿತ್ ನೇತೃತ್ವದಲ್ಲಿ 20 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಉಪನಾಯಕನಾಗಿ ಶೃದ್ಧಾನಂದ್ ತಿವಾರಿ ಆಯ್ಕೆಯಾಗಿದ್ದಾರೆ. ಮೇ 20ರಂದು ಪ್ರಥಮ ಪಂದ್ಯವನ್ನು ಬೆಲ್ಜಿಯಂನೊಂದಿಗೆ ಆರಂಭಿಸಲಿರುವ ಭಾರತ ತಂಡ. ನಂತರ 22 ರಂದು ನೆದರ್‌ಲ್ಯಾಂಡ್ಸ್ನ ಕ್ಲಬ್ ತಂಡದೊಂದಿಗೆ, 28 ಮತ್ತು 29ರಂದು ಜರ್ಮನಿ ತಂಡದೊಂದಿಗೆ ಆಡಲಿದೆ.

: ಅಭಿಪ್ರಾಯ :

1.ಬಾಲ್ಯದಿಂದಲೇ ಹಾಕಿ ಕ್ರೀಡೆಯತ್ತ ಒಲವು ಮೂಡಿಸಿಕೊಂಡಿದ್ದ ವಚನ್ ಒಎಲ್‌ವಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ, ಹಾಕಿ ಕ್ರೀಡೆಯಲ್ಲಿ ವಿಶೇಷ ಪ್ರೋತ್ಸಾಹ ನೀಡಿ ಅವನನ್ನು ಪ್ರಾಥಮಿಕ ಹಂತದಿಂದಲೇ ತಯಾರು ಮಾಡಲಾಗಿತ್ತು. ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ದೇಶದ ಹಿರಿಯರ ತಂಡಕ್ಕೆ ಆಯ್ಕೆಯಾಗುವ ಮೂಲಕ ಮುಂದಿನ ಹತ್ತು ವರ್ಷಗಳು ಅಧಿಕ ಕಾಲ ದೇಶಕ್ಕಾಗಿ ಆಡುವ ಮೂಲಕ ಸಾಧನೆ ಮಾಡಲಿ. ಒಎಲ್‌ವಿ ಶಾಲೆಯ ಹಳೆಯ ವಿದ್ಯಾರ್ಥಿಯಾಗಿರುವ ವಚನ್ ಶಾಲೆಗೂ ಕೀರ್ತಿ ತಂದಿದ್ದಾರೆ. (ಸಿ.ಎಲ್.ಮೋಹನ್, ದೈಹಿಕ ಶಿಕ್ಷಣ ಶಿಕ್ಷಕರು, ಒಎಲ್‌ವಿ ಕಾನ್ವೆಂಟ್ ಶಾಲೆ, ಸೋಮವಾರಪೇಟೆ) 

2. ಎಂಟನೇ ತರಗತಿಗೆ ಸೇಂಟ್ ಆನ್ಸ್ ಶಾಲೆಗೆ ಸೇರಿದಾಗ ಒಬ್ಬನೇ ಹಾಕಿ ಆಟಗಾರನಾಗಿದ್ದ ಬಿಪಿನ್, ನಂತರ ಶಾಲಾ ತಂಡವನ್ನು ಕಟ್ಟಿ ಉತ್ತಮ ಆಟದ ಪ್ರದರ್ಶನ ನೀಡಿದ್ದನು. ಹಾಕಿ ಕ್ರೀಡೆಯನ್ನು ಹೆಚ್ಚಾಗಿ ಪ್ರೀತಿಸುವ ಬಿಪಿನ್ ಮತ್ತು ವಚನ್ ಇಬ್ಬರೂ ದೇಶದ ಹಿರಿಯರ ತಂಡವನ್ನು ಪ್ರತಿನಿಧಿಸುವಂತಾಗಲಿ. ಇಬ್ಬರೂ ಸ್ನೇಹಿತರು ರಾಜ್ಯದಿಂದ ಆಯ್ಕೆಯಾಗಿರುವುದು ಅವರ ತಂದೆ ತಾಯಿಯವರ ಶ್ರಮಕ್ಕೆ ಸಂದ ಗೌರವವಾಗಿದೆ. (ಶ್ರೀಧರ್ ನೆಲ್ಲಿತಾಯ, ಹಿರಿಯ ಪತ್ರಕರ್ತರು, ಪೊನ್ನಂಪೇಟೆ)

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.