Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಗಳ ಸರ್ವೆ : ಮಗುವನ್ನು ಚಿವುಟಿ ತೊಟ್ಟಿಲು ತೂಗುತ್ತಿದ್ದಾರೆ : ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಗಳ ಸರ್ವೆ : ಮಗುವನ್ನು ಚಿವುಟಿ ತೊಟ್ಟಿಲು ತೂಗುತ್ತಿದ್ದಾರೆ : ಬಿಜೆಪಿ ಅಸಮಾಧಾನ*

ಮೇ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ NEWS DESK 6 : ಖಾಸಗಿ ಜಮೀನಿನಲ್ಲಿರುವ ಸರಕಾರಿ ಮರಗಳ ಸರ್ವೆ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸಬೇಕೆನ್ನುವ ಒತ್ತಾಯವಿದ್ದರೂ ಅರಣ್ಯ ಅಧಿಕಾರಿಗಳು ಸರ್ವೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮಗುವನ್ನು ಚಿವುಟಿ ತೊಟ್ಟಿಲು ತೂಗುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸುಬ್ಮಮಣ್ಯ ಉಪಾಧ್ಯಾಯ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಇಲಾಖೆಯ ನಡೆ ಜಿಲ್ಲೆಯ ಕೃಷಿಕ ವರ್ಗದಲ್ಲಿ ಆತಂಕವನ್ನು ಸೃಷ್ಟಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರ ಮಾತಿಗೆ ಅಧಿಕಾರಿಗಳು ಬೆಲೆ ನೀಡಿದಂತೆ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮರಗಳ ಸರ್ವೆ ಕಾರ್ಯಕ್ಕೆ ಬೆಳೆಗಾರರ ತೀವ್ರ ವಿರೋಧವಿರುವ ಕಾರಣ ಬೆಳೆಗಾರರಿಗೆ ಬೆಂಬಲವಾಗಿ ನಿಂತ ಬಿಜೆಪಿ ಹೋರಾಟದ ಎಚ್ಚರಿಕೆ ನೀಡಿದ ನಂತರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಭರವಸೆಯ ಮಾತುಗಳನ್ನಾಡಿದ್ದರು. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಬೆಳೆಗಾರರಿಗೆ ವಿರುದ್ಧವಾಗಿ ಸರಕಾರ ನಡೆದುಕೊಳ್ಳುವುದಿಲ್ಲ, ಚುನಾವಣೆಯ ನಂತರ ಎಲ್ಲವನ್ನೂ ಸರಿ ಮಾಡುವುದಾಗಿ ತಿಳಿಸಿದ್ದರು.
ಆದರೆ ಅರಣ್ಯ ಅಧಿಕಾರಿಗಳು ಬೆಳೆಗಾರರ ಆಕ್ಷೇಪಕ್ಕೆ ವಿರುದ್ಧವಾಗಿ ಮರಗಳ ಸರ್ವೆ ಕಾರ್ಯ ಮುಂದುವರೆಸಿದ್ದಾರೆ. ಸಂಪಾಜೆ, ಚೆಂಬು ಮತ್ತಿತರ ಭಾಗಗಳಲ್ಲಿ ತೋಟಗಳಿಗೆ ಭೇಟಿ ನೀಡಿರುವ ಅರಣ್ಯ ಸಿಬ್ಬಂದಿಗಳು ಮರಗಳನ್ನು ಲೆಕ್ಕ ಮಾಡಿದ್ದಾರೆ. ಈ ಬೆಳವಣಿಗೆಯನ್ನು ಗಮನಿಸಿದರೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು “ಮಗುವನ್ನು ಚಿವುಟಿ ತೊಟ್ಟಿಲು ತೂಗಿ” ಸಮಾಧಾನ ಪಡಿಸುವ ನಾಟಕವಾಡುತ್ತಿದ್ದಾರೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವವರಿಗೆ ಅರಣ್ಯ ಇಲಾಖೆ ತೆಗೆದುಕೊಂಡಿರುವ ಈ ಗೊಂದಲದ ನಿರ್ಧಾರಗಳ ಬಗ್ಗೆ ಅರಿವಿಲ್ಲವೇ, ಇದರಿಂದ ಕೊಡಗಿನ ಬೆಳೆಗಾರರಿಗೆ ಅನ್ಯಾಯವಾಗುತ್ತದೆ ಎನ್ನುವುದು ತಿಳಿದಿಲ್ಲವೇ, ಮುಖ್ಯಮಂತ್ರಿಗಳ ಆತ್ಮೀಯರಾಗಿ ಪ್ರಭಾವಿ ಎನಿಸಿಕೊಂಡವರಿಗೆ ಅರಣ್ಯ ಅಧಿಕಾರಿಗಳಿಗೆ ಮೌಖಿಕ ಆದೇಶ ಮಾಡಿ ಮರಗಳ ಸರ್ವೆಯನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲವೇ ಅಥವಾ ಇವರ ಮಾತಿಗೆ ಅಧಿಕಾರಿಗಳು ಗೌರವ ನೀಡುತ್ತಿಲ್ಲವೇ ಎಂದು ಸುಬ್ರಮಣ್ಯ ಉಪಾಧ್ಯಾಯ ಪ್ರಶ್ನಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಖಾಸಗಿ ಜಮೀನುಗಳಿಗೆ ನಿಯಮಬಾಹಿರವಾಗಿ ಪ್ರವೇಶ ಮಾಡುವುದನ್ನು ನಿಲ್ಲಿಸಬೇಕು ಮತ್ತು ಮರಗಳ ಸರ್ವೆ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸಬೇಕು. ತಪ್ಪಿದಲ್ಲಿ ಜಿಲ್ಲಾ ಬಿಜೆಪಿ ಬೆಳೆಗಾರರ ಬೆಂಬಲದೊಂದಿಗೆ ಶಾಸಕರ ವಿರುದ್ಧವೇ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.