
ಸುಂಟಿಕೊಪ್ಪ ಮೇ 6 NEWS DESK : ವ್ಯಕ್ತಿಯೊಬ್ಬರು ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಂಟಿಕೊಪ್ಪದ 7ನೇ ಹೊಸಕೋಟೆಯಲ್ಲಿ ನಡೆದಿದೆ.
ಐಗೂರು ಗ್ರಾಮದ ನಿವಾಸಿ ಮಧು (42) ಎಂಬುವವರೇ ಮೃತ ವ್ಯಕ್ತಿ. ಸುಂಟಿಕೊಪ್ಪ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.


































