Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಕರ್ನಾಟಕ»ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ರಾಯಭಾರಿಗಳಾಗಬೇಕು : ಡಾ. ಬಿ.ವೆಂಕಟ್ ರಾಜ್ ಕರೆ
ಕರ್ನಾಟಕ ಕೊಡಗು ಜಿಲ್ಲೆ

ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ರಾಯಭಾರಿಗಳಾಗಬೇಕು : ಡಾ. ಬಿ.ವೆಂಕಟ್ ರಾಜ್ ಕರೆ

ಮೇ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಮೇ 8 NEWS DESK : ಹೊಸ ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದರ ಆಶಯಗಳು ಸಾಕಾರವಾಗುತ್ತದೆ. ಅದಕ್ಕಾಗಿ ಯುವ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ರಾಯಭಾರಿಗಳಾಗಬೇಕು ಎಂದು ಮೈಸೂರಿನ ಎಸ್.ಡಿ.ಎಂ ರೀಸರ್ಚ್ ಸೆಂಟರ್ ಫಾರ್ ಮೆನೇಜ್‍ಮೆಂಟ್ ಸ್ಟಡೀಸ್ ನ ಅಧ್ಯಕ್ಷ ಡಾ. ಬಿ.ವೆಂಕಟ್ ರಾಜ್ ಹೇಳಿದರು.

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕೋತ್ಸವ ವಿಬ್‍ಜಯಾರ್-2024 (VIBGYOR-2024) ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು.

ಶಿಕ್ಷಣ ನೀಡುವ ಸಂಸ್ಥೆಗಳು ಸಾಕಷ್ಟಿವೆ ಆದರೆ ಜೀವನಾನುಭವಗಳನ್ನು, ಸಂಸ್ಕೃತಿ, ಉದ್ದೇಶ, ರಾಷ್ಟ್ರ ಚಿಂತನೆಗಳನ್ನು ತಿಳಿಸುವ ಶಿಕ್ಷಣ ವ್ಯವಸ್ಥೆ ಇಂದಿನ ಆವಶ್ಯಕತೆ ಎಂದರು. ತಮ್ಮ ಯೋಚನೆಗಳನ್ನು ಯೋಜನೆಗಳಾಗಿಸಿ ಅದಕ್ಕೊಂದು ಮೂರ್ತರೂಪ ಕೊಟ್ಟು ಅದನ್ನು ಒಂದು ಉತ್ಪನ್ನವಾಗಿಸಿ ಸಮಾಜದ ಒಳಿತಿಗಾಗಿ ಶ್ರಮಿಸುವ ಜವಾಬ್ಧಾರಿ ನಿಮ್ಮ ಮೇಲಿದೆ ಎಂದರು. ಸನಾತನ ಧರ್ಮವನ್ನು ಮುಂದುವರಿಕೊಂಡು ವಿಕಸಿತ ಭಾರತಕ್ಕಾಗಿ ಕೈಜೋಡಿಸುತ್ತಾ ಭಾರತವು ವಿಶ್ವಗುರುವಾಗುವಲ್ಲಿ ತಮ್ಮ ಕೊಡುಗೆಯನ್ನು ನೀಡಿ ಎಂದು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಪಿ.ಸತೀಶ್ ರಾವ್ ಮಾತನಾಡಿ, ಕರಾವಳಿ ಭಾಗದ ಹೆಸರಾಂತ ಕಾಲೇಜಾಗಿ ಗುರುತಿಸಿಕೊಂಡಿರುವ ಈ ಸಂಸ್ಥೆಯು ಕಲಿಕೆಯ ಜತೆಗೆ ಕ್ರೀಡೆ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಶ್ರೇಷ್ಟ ನಿರ್ವಹಣೆಯನ್ನು ನೀಡುತ್ತಿದ್ದು ಅತ್ಯುತ್ತಮ ಸವಲತ್ತುಗಳನ್ನು ಹೊಂದಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ದೇಶದ ಧರ್ಮ ಸಂಸ್ಕೃತಿ, ಆದರ್ಶಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಪೌರಾಣಿಕ ಪ್ರಸಂಗಗಳನ್ನು ನೆನಪು ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದರು.

ಯಾರಿಗೂ ಕೆಡುಕುಂಟುಮಾಡದೆ ಎಲ್ಲರನ್ನೂ ಒಪ್ಪಿಕೊಂಡು, ಅಪ್ಪಿಕೊಂಡಿರುವ ದೇಶ ಭಾರತ. ಆದರೆ ಇಲ್ಲಿನ ಸನಾತನ ಧರ್ಮವನ್ನು ನಾಶಪಡಿಸುವ, ಹಿಂದೂ ಸಂಸ್ಕೃತಿಯನ್ನು ಹೀಯಾಳಿಸುವ ದುಷ್ಪವೃತ್ತಿಗಳು ಕಂಡುಬರುತ್ತಿದ್ದು ನಮಗೆಲ್ಲರಿಗೂ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದರು.

ದುಡ್ಡು ಗಳಿಸುವುದೇ ಧ್ಯೇಯವಾಗಬಾರದು ಬದಲಿಗೆ ತಾನು ಮಾಡುವ ಕೆಲಸ ಸಮಾಜಕ್ಕೆ ಹೇಗೆ ಸಹಾಯಕ ಎನ್ನುವ ವಿಚಾರವರಿತು ಕೆಲಸ ಮಾಡಬೇಕು ಎಂದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಸಮಗ್ರ ತಂಡ ಪ್ರಶಸ್ತಿಯನ್ನು ಗಳಿಸಿದ ವಿದ್ಯಾರ್ಥಿಗಳ ತಂಡವನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಶೈಕ್ಷಣಿಕವಾಗಿ ಪ್ರತಿ ವಿಭಾಗದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ತೋರಿದ ಪ್ರತಿಭಾವಂತರಿಗೆ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಅನನ್ಯ ಸಾಧನೆಯನ್ನು ಮಾಡಿದ ಸಾಧಕರನ್ನು ಗೌರವಿಸಲಾಯಿತು.

ಕಾಲೇಜಿನ ಪ್ರಥಮ ವರ್ಷದ ಡೇಟಾ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಶರಣಮ್ಮ ನೀಲಪ್ಪ ಮಡಿವಾಳರ್ ಬರೆದಿರುವ ಅಂತರಾಳದ ಭಾವ ಎನ್ನುವ ಕವನ ಸಂಕಲನವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಡಾ.ಯಶೋಧಾ ರಾಮಚಂದ್ರ, ಸಂತೋಶ್ ಕುತ್ತಮೊಟ್ಟೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಚೇತನ್.ಪಿ.ಡಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಡಾ. ಕೆ.ಮಹೇಶ್‍ಪ್ರಸನ್ನ ವಾರ್ಷಿಕ ವರದಿಯನ್ನು ಮಂಡಿಸಿದರು. ಕು.ನಿವೇತಾ ಸ್ವಾಗತಿಸಿ, ಎಸ್.ಜೀವಿತ್ ವಂದಿಸಿದರು. ಎಂ.ಎಸ್.ರಚನಾ ಮತ್ತು ವಿದಿಶಾ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.