

ಸೋಮವಾರಪೇಟೆ ಮೇ 9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ತಾಲೂಕಿನ ಹಂಡ್ಲಿ ಹಾಗೂ ಹುಲುಸೆ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ನಮ್ಮೂರು-ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಹುಲುಸೆ ಕೆರೆಯ ಹೂಳೆತ್ತುವ ಕಾರ್ಯಕ್ರಮಕ್ಕೆ ಭೂಮಿ ಪೂಜೆ ನಡೆಯಿತು.
ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಯೋಜನೆಯ ಜಿಲ್ಲಾ ನಿರ್ದೆಶಕರಾದ ಲೀಲಾವತಿ, ಇಂದು ಹನಿ ನೀರಿಗೂ ಪರದಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಜೀವ ಜಲದ ರಕ್ಷಣೆ ಆಗಬೇಕು. ಪ್ರತಿಯೊಂದು ಜೀವಿಗೂ ನೀರಿನ ಅವಶ್ಯಕತೆ ಇದೆ. ಕೆರೆಗಳ ಪುನಶ್ಚೇತನದೊಂದಿಗೆ ನೀರನ್ನು ಉಳಿಸಬೇಕಾದದ್ದು ನಮ್ಮ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಭಗವಾನ್, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರೋಹಿತ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್, ಹಂಡ್ಲಿ ಗ್ರಾ.ಪಂ ಉಪಾಧ್ಯಕ್ಷ ಅಶೋಕ್ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು. 







