Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 18 ಮತ್ತು 19 ರಂದು ಹಳ್ಳಿಗಟ್ಟು ಬೋಡ್ ನಮ್ಮೆ : ಮೇ 11 ರಂದು ದೇವ ಕಟ್ಟ್ ಬೀಳುವುದು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 18 ಮತ್ತು 19 ರಂದು ಹಳ್ಳಿಗಟ್ಟು ಬೋಡ್ ನಮ್ಮೆ : ಮೇ 11 ರಂದು ದೇವ ಕಟ್ಟ್ ಬೀಳುವುದು*

ಮೇ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 9 NEWS DESK  : ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್ ನಮ್ಮೆ (ಬೇಡು ಹಬ್ಬ) ಮೇ 18 ಹಾಗೂ 19ರಂದು ನಡೆಯಲ್ಲಿದ್ದು, ಮೇ 11 ರಂದು ಹಬ್ಬದ ಸಾಂಪ್ರದಾಯಿಕ ಕಟ್ಟು ಬೀಳುವ ಮೂಲಕ ವಿವಿಧ ಕಟ್ಟುಪಾಡುಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ತಕ್ಕಮುಖ್ಯಸ್ಥರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ  ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಮೇ 11ರಂದು ಸಂಜೆ 5 ಗಂಟೆಗೆ ಮೂಕಳೇರ ಬಲ್ಯಮನೆ ಸಮೀಪದ ಅಂಬಲದಲ್ಲಿ ಹಬ್ಬಕ್ಕೆ ಕಟ್ಟು ಬೀಳಲಿದ್ದು, ಅಂದಿನಿಂದ ಹಬ್ಬ ಆಚರಣೆಯ ತನಕ ಹಳ್ಳಿಗಟ್ಟು ಊರಿನೊಳಗೆ ಪ್ರಾಣಿ ಹಿಂಸೆ ಹಾಗೂ ಹತ್ಯೆ ಮಾಡುವಂತಿಲ್ಲ, ಮರಗಿಡಗಳನ್ನು ಕುಡಿಯುವಂತ್ತಿಲ್ಲ, ಊರಿನೊಳಗಿರುವ ಮಂದಿ ಊರಿನ ಹೊರಗೆ ಹೋಗಿ ರಾತ್ರಿ ತಂಗುವಂತ್ತಿಲ್ಲ. ಒಂದು ಸಮಯ ಉಳಿದುಕೊಳ್ಳುವುದು ಅನಿವಾರ್ಯವಾದರೆ ಊರಿನವರಿಗೆ ತಿಳಿಸಿ ಹೋಗಬೇಕು ಹಾಗೂ ನಂತರ ತಪ್ಪು ಕಾಣಿಕೆಯನ್ನು ಹಾಕಬೇಕು. ಹೀಗೆ ಹಲವಾರು ಬಗೆಯ ಕಟ್ಟುಪಾಡುಗಳಿದ್ದು ಅದನ್ನು ಪಾಲಿಸಬೇಕಾಗುತ್ತದೆ ಪಾಲಿಸದಿದ್ದರೆ ದಂಡವನ್ನು ತೆರಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

ಕೆಸರು ಎರಚಾಟದ ಹಬ್ಬವೆಂದೇ ಖ್ಯಾತಿ ಪಡೆದಿರುವ ಹಳ್ಳಿಗಟ್ಟ್ ಬೋಡ್ ನಮ್ಮೆ ಪ್ರತಿ ವರ್ಷ ಮೇ ತಿಂಗಳ ಮೂರನೇ ಶನಿವಾರ ಹಾಗೂ ಭಾನುವಾರ ನಡೆಯಲಿದ್ದು, ಪ್ರಸ್ತುತ ವರ್ಷ ಮೇ 18 ಹಾಗೂ 19ರಂದು  ನಡೆಯಲಿದೆ.

ಮೇ 18ರಂದು  ಜೋಡುಬೀಟಿಯಲ್ಲಿರುವ ಗುಂಡಿಯತ್ ಅಯ್ಯಪ್ಪ ದೇವರ ಅವುಲ್ ಎಂಬ ವಿಶೇಷ ಆಚರಣೆ ನಡೆಯಲಿದೆ. ಇಲ್ಲಿ ಕೊಡವ ಜನಾಂಗದವರೇ ಪೂಜಾರಿಗಳಾಗಿದ್ದಾರೆ (ಚಮ್ಮಟೀರ ಹಾಗೂ ಮೂಕಳೇರ). ಮಧ್ಯಾಹ್ನದ ನಂತರ ಊರುತಕ್ಕರಾದ ಚಮ್ಮಟೀರ ಕುಟುಂಬದ ಬಲ್ಯಮನೆಯಿಂದ ಪೊಲವಪ್ಪ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಲಿದೆ.

ಚಮ್ಮಟೀರ ಕುಟುಂಬದ ಬಲ್ಯಮನೆಯಿಂದ ಹೊರಟ ಪೊಲವಪ್ಪ ತೆರೆ ಮಚ್ಚಿಯಂಡ ಬಲ್ಯಮನೆ ಸಮೀಪದ ಅಂಬಲಕ್ಕೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳು ಹಾಗೂ ಆಚರಣೆಯೊಂದಿಗೆ ಊರಿನ ವಿವಿಧ ನಿಗದಿತ ಸ್ಥಳಗಳಿಗೆ ತೆರಳಿ ಅಪರಾಹ್ನ  3ಗಂಟೆ  ಪೊಲವಪ್ಪ ದೇವಸ್ಥಾನಕ್ಕೆ (ಜೋಡುಬೀಟಿಯಿಂದ ಮೂಕಳೇರ ಬಲ್ಯಮನೆಗೆ ಹೋಗುವ ರಸ್ತೆಯಲ್ಲಿರುವ ದೇವಸ್ಥಾನ) ತೆರಳಿ ಅಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಲಿಸಲಾಗುವುದು.

ಮುಂಜಾನೆಯಿಂದಲೇ  ವಿವಿಧ ಕಟ್ಟುಪಾಡುಗಳನ್ನು ಆಚರಿಸುವ ಮೂಲಕ ಉಪವಾಸ ವೃತ್ತದಲ್ಲಿರುವ ಇಬ್ಬರು ಕೊಡವ ಪೂಜಾರಿಗಳು ಪೊಲವಪ್ಪ ದೇವಸ್ಥಾನಕ್ಕೆ ಆಗಮಿಸಿ ವಿವಿಧ ಆಚರಣೆಯನ್ನು ಮಾಡುತ್ತಾರೆ. ಮಾತ್ರವಲ್ಲ ಇಲ್ಲಿಗೆ ಮಣ್ಣಿನ ಬೋಟೆಕಾರ (ಮಣ್ಣಿನಿಂದ ಮಾಡಲಾದ ನಾಯಿ) ಅರ್ಪಿಸಲಾಗುವುದು. ನಂತರ ವಿವಿಧ ಆಚರಣೆಯ ಬಳಿಕ ಭಕ್ತರು ಹರಕೆ ಕಾಣಿಕೆ ಸಲ್ಲಿಸುತ್ತಾರೆ. ಇಲ್ಲಿಗೆ ಮಾತ್ರ ಮಹಿಳೆಯರು ಬರಬಹುದಾಗಿದ್ದು ನಂತರ ಜೋಡುಬೀಟಿಯಲ್ಲಿರುವ ಗುಂಡಿಯತ್ ಅಯ್ಯಪ್ಪ ದೇವಸ್ಥಾನದಲ್ಲಿ ನಡೆಯುವ ಆಚರಣೆಗೆ ಮಹಿಳೆಯ ಆಗಮನ ನಿಧಿಷಲಾಗಿದೆ.

ಸಂಜೆ 5ಗಂಟೆಯ ನಂತರ ಪೊನ್ನಂಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಜೋಡುಬೀಟಿಯಲ್ಲಿರುವ ಗುಂಡಿಯತ್ ಅಯ್ಯಪ್ಪ ದೇವಸ್ಥಾನದಲ್ಲಿ ವಿಶೇಷ ಅವುಲ್ ಕಾರ್ಯಕ್ರಮ ನಡೆಯಲಿದೆ.  ನಂತರ ಹರಕೆ ಒಪ್ಪಿಸಲಾಗುವುದು. ವಿವಿಧ ಆಚರಣೆಯ ಬಳಿಕ ಅಲ್ಲಿಂದ ತೆರಳಿ ಚಮ್ಮಟೀರ ಕುಟುಂಬದ ಬಲ್ಯಮನೆಯಿಂದ ರಾತ್ರಿ ಹನ್ನೆರಡು ಗಂಟೆಯೊಳಗೆ ಮನೆಕಳಿ ಹೊರಡಲಿದೆ.

ದ್ದು, 19 ರಂದು ಮುಂಜಾನೆ ಮಚ್ಚಿಯಂಡ ಕುಟುಂಬದ ಅಂಬಲದಲ್ಲಿ ಮನೆ ಕಳಿ ಮುಗಿಯಲಿದೆ. ಚಮ್ಮಟೀರ ಹಾಗೂ ಮೂಕಳೇರ ಮನೆಯಿಂದ ತಲಾ ಒಂದೊಂದು ಕುದುರೆ ಹಾಗೂ ದೇವರ ಮೊಗ ಹೊರಡಲಿದ್ದು,  3ಗಂಟೆಯ ನಂತರ ಹಳ್ಳಿಗಟ್ಟುವಿನಲ್ಲಿರುವ ಭದ್ರಕಾಳಿ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ಎರಡು ಕುದುರೆ ಹಾಗೂ ದೇವರ ಮೊಗ ಮುಖಾಮುಖಿಯಾಗಿ ಸಂಭ್ರಮಿಸಿ ವಿವಿಧ ರೀತಿಯ ಆಚರಣೆಯ ಬಳಿಕ ಹತ್ತಿರದಲ್ಲಿರುವ ದೇವರ ಕೆರೆಯಿಂದ ಕೆಸರನ್ನು ತಂದು ಊರಿನವರು ಪರಸ್ಪರ ಕೆಸರು ಎರಚಾಟದೊಂದಿಗೆ ಹಬ್ಬವನ್ನು ವಿಶಿಷ್ಟವಾಗಿ ಆಚರಿಸುತ್ತಾರೆ. ಇಲ್ಲಿ ಹೊರಗಿನ ಊರಿನವರಿಗೆ ಅತಿಥಿಗಳಿಗೆ, ನೆಂಟರಿಗೆ ಕೆಸರು ಎರಚುವಂತಿಲ್ಲ. ಕೆಸರು ಎರಚಾಟದ ನಂತರ ಹತ್ತಿರದ ದೇವಸ್ಥಾನಕ್ಕೆ ಹೋಗಿ ಪ್ರದಕ್ಷಿಣೆ ಹಾಕಿ ಹರಕೆ ಕಾಣಿಕೆಗಳನ್ನು ಸಲ್ಲಿಸಲಾಗುವುದೆಂದು ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.