Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ*

ಮೇ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 10 NEWS DESK : ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಸರಳವಾಗಿ ಆಚರಿಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ ಸಾಂಸ್ಕೃತಿಕ ನಾಯಕ ಬಸವೇಶ್ವರರು ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವ ಗುರು ಬಸವಣ್ಣ ಅವರ ಚಿಂತನೆಗಳು ಸಾರ್ವಕಾಲಿಕ ಎಂದು ಬಣ್ಣಿಸಿದರು.

12ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳುವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು ಎಂದರು.  ಬಸವೇಶ್ವರರು ವಚನಗಳ ಮೂಲಕ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವರ್ಣಿತ್ ನೇಗಿ ಹೇಳಿದರು.

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸೇರಿದಂತೆ ಬಸವಾದಿ ಶರಣರು ವಚನಕಾರರ ಬಗ್ಗೆ ಅಧ್ಯಯನ ಮಾಡಬೇಕು. ಜೊತೆಗೆ ಸದಾ ಸ್ಮರಿಸಬೇಕು ಎಂದರು.

ಬಸವಣ್ಣನವರ ಸಾಮಾಜಿಕ ಸುಧಾರಣೆಗಳು ಸಾರ್ವಕಾಲಿಕವಾಗಿದ್ದು, ಅವರ ಸಂದೇಶಗಳು, ಚಿಂತನೆಗಳು ವಿಶ್ವಕ್ಕೆ ಮಾದರಿಯಾಗಿದೆ. ಭಾರತ ಸಂಸತ್ತಿನಲ್ಲಿ ಹಾಗೂ ಲಂಡನ್‍ನಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದರು.

ಬಸವೇಶ್ವರರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಜಿ.ಪಂ.ಸಿಇಒ ವಿವರಿಸಿದರು.

ಬಸವೇಶ್ವರರು ಕನ್ನಡ ನಾಡಿನ ಸಂಸ್ಕೃತಿ ಪ್ರತಿಪಾದಿಸಿದ ಮೌಲ್ಯಗಳ ರೂಪಕ. ವಚನಕಾರರ ಅನುಭವ ಮಂಟಪ ಇಂದಿನ ಪ್ರಜಾಪ್ರಭುತ್ವದ ಅಡಿಗಲ್ಲೇ ಆಗಿದೆ. ನಾಡಿನ ಸಾಂಸ್ಕೃತಿಕ, ಸಾಹಿತ್ಯಕ, ಪರಂಪರೆ ವಿಶ್ವಕ್ಕೆ ಕೊಡುಗೆ ನೀಡಿರುವ ವಿಶ್ವ ಮಾನವ ಪರಂಪರೆಯ ಬಹುಮುಖ್ಯವಾದ ಕೊಂಡಿಯಾಗಿದ್ದಾರೆ ಎಂದು ನುಡಿದರು.

ಕಾಯಕವೇ ಕೈಲಾಸವೆಂದು ಒತ್ತಿ ಹೇಳಿದ್ದಾರೆ. ಅನುಭವ ಮಂಟಪದ ಮೂಲಕ ಎಲ್ಲರನ್ನು ಒಳಗೊಂಡ ಕಲ್ಯಾಣ ಕ್ರಾಂತಿ ಉಂಟು ಮಾಡಿದರು ಎಂದು ವರ್ಣಿಸಿದರು.

ಬಸವೇಶ್ವರರು ನಾಡಿನ ಭಾಷೆಯಾದ ಕನ್ನಡದಲ್ಲಿ ವಚನಗಳನ್ನು ರಚಿಸುವ ಮೂಲಕ ಎಲ್ಲರಿಗೂ ಅರ್ಥವಾಗುವಂತೆ ಮತ್ತು ಹತ್ತಿರವಾಗುವಂತೆ ಸಾಮಾಜಿಕ ಸಂದೇಶಗಳನ್ನು ನೀಡಿದ್ದರು ಎಂದು ಅವರು ವಿವರಿಸಿದರು.

`ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ, ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ, ಇದೇ ನಮ್ಮ ಕೂಡಲ ಸಂಗಮನೊಲಿಸುವ ಪರಿ’ ಎಂದು ಬಸವಣ್ಣ ಅವರು ತಿಳಿಸಿದ್ದಾರೆ ಎಂದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾತನಾಡಿ, ಬಸವೇಶ್ವರರು ಅನೇಕ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು, ಆ ನಿಟ್ಟಿನಲ್ಲಿ ಬಸವೇಶ್ವರರ ಆದರ್ಶಗಳು ಇಂದಿಗೂ ದಾರಿದೀಪವಾಗಿವೆ ಎಂದರು.

ಅಜ್ಞಾನದ ಕಾಲದಲ್ಲಿ ಜ್ಯೋತಿ ಆಗಿ ಕಾಣಿಸಿಕೊಂಡ ಬಸವೇಶ್ವರರು, ಸ್ತ್ರೀಯರಿಗೆ ಸ್ವಾತಂತ್ರ್ಯ, ಸಮಾನತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಒತ್ತು ನೀಡಿದರು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ತಹಶಿಲ್ದಾರರಾದ ರಮೇಶ್ ಬಾಬು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ…

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.