Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೇ 22 ರಿಂದ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾವಳಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೇ 22 ರಿಂದ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾವಳಿ

ಮೇ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಮೇ 13 NEWS DESK : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಮೇ 22 ರಿಂದ 27 ರವರೆಗೆ ಅಂತರ ಗ್ರಾಮ ನಾಲ್ನಾಡ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ನಾಲ್ನಾಡು ಹಾಕಿ ಪಂದ್ಯಾವಳಿಯ ಸಂಚಾಲಕ ಅಪ್ಪಚೆಟ್ಟೋಳಂಡ  ಮನು ಮುತ್ತಪ್ಪ ಹೇಳಿದರು.

ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ 2000 ದಿಂದ 2012 ರವರೆಗೆ ನಾಲ್ನಾಡ್ ಕಪ್ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಬಳಿಕ ಕಾರಣಾಂತರಗಳಿಂದ ಸ್ಥಗಿತಗೊಂಡಿತು. 10 ವರ್ಷಗಳ ಬಳಿಕ ಸಾರ್ವಜನಿಕರ ಒತ್ತಾಯದ ಮೇರೆಗೆ ಹೊಸ ಸಮಿತಿಯನ್ನು ರಚಿಸಿ ಪಂದ್ಯಾವಳಿಯನ್ನು ಆರಂಭಿಸಲಾಗಿದೆ ಎಂದರು.

ನಾಲ್ನಾಡು ಕಪ್ ಹಾಕಿ  ಪಂದ್ಯಾವಳಿಯ ಮೊತ್ತ ಮೊದಲು ಗ್ರಾಮೀಣ ಮಟ್ಟದಲ್ಲಿ ಯಾವುದೇ ಜಾತಿ ಭೇದಗಲಿಲ್ಲದೆ ಮನೋರಂಜನೆಯ ಜೊತೆಗೆ ಹಾಕಿ ಕ್ರೀಡೆಯ ಹೇಳಿಕೆಗಾಗಿ ಅಯೋಜಿಸಿದ ಹೆಗ್ಗಳಿಕೆ ಈ ಸಮಿತಿಯದಾಗಿದ್ದು ಬಳಿಕ ವಿವಿಧಡೆ ಹಾಕಿ ಪಂದ್ಯಾಟಗಳು ಆರಂಭಗೊಂಡವು.

ಈ ವ್ಯಾಪ್ತಿಯಲ್ಲಿ ಬಹಳಷ್ಟು ಕ್ರೀಡಾ ಪ್ರತಿಭೆಗಳಿದ್ದು ಮನೋರಂಜನೆಯ ಜೊತೆಗೆ ಹಾಕಿ ಕ್ರೀಡೆಯ ಶ್ರೇಯೋಭಿವೃದ್ಧಿಗಾಗಿ ಮುಂದಿನ ವರ್ಷಗಳಲ್ಲಿ ನಿರಂತರವಾಗಿ ಗ್ರಾಮೀಣ ಮಟ್ಟದ ಹಾಕಿ ಪಂದ್ಯಾಟ ಹಾಗೂ ಕೋಚಿಂಗ್ ಕ್ಯಾಂಪ್ ವನ್ನು ಆಯೋಜಿಸಲಾಗುವುದು ಎಂದರು.

ನಾಲ್ಕು ನಾಡು ವ್ಯಾಪ್ತಿಯ ನಾಪೋಕ್ಲು, ಬಲ್ಲಮಾವಟಿ ಹಾಗೂ ಕಕ್ಕಬ್ಬೆ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ 11 ಗ್ರಾಮಗಳ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿವೆ. ಈಗಾಗಲೇ 14 ತಂಡಗಳು ನೋಂದಾಯಿಸಿವೆ. ಈ ಪಂದ್ಯಾಟಕ್ಕಾಗಿ  ಅಪ್ಪಚೆಟ್ಟೋಳ0ಡ ಕುಟುಂಬಸ್ಥರು ಒಂದು ಲಕ್ಷ ರೂಪಾಯಿ ನಗದು ನೀಡಿದ್ದಾರೆ. ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ಮಾಳೆಯಂಡ ಬಿನ್ನು ಅವರು ಅವರ ತಾಯಿಯ ಜ್ಞಾಪಕಾರ್ಥ ಪ್ರಥಮ ಬಹುಮಾನ ಹಾಗೂ ಟ್ರೋಫಿ  ಬಹುಮಾನವನ್ನು, ರನ್ನರ್ ಪ್ರಶಸ್ತಿಯನ್ನು ಮೂವೆರೆ ಚಂಗಪ್ಪ ಅವರ ಜ್ಞಾಪಕರ್ತ ಮಂದಣ್ಣ ಬಹುಮಾನ ಹಾಗೂ ಟ್ರೋಫಿ ನೀಡಿದ್ದಾರೆ.

ಮಹಿಳೆಯರಿಗೂ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಅಂತರ ಗ್ರಾಮ ಮಟ್ಟದ ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿದೆ. ಈ ವರ್ಷ ಮೇ 15ರಿಂದ ಪಂದ್ಯಾವಳಿ ಆರಂಭಗೊಳ್ಳಬೇಕಿತ್ತು. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೇ 22 ರಿಂದ 27ರವರೆಗೆ ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದರು.

ಕಾರ್ಯದರ್ಶಿ ಚಂಗೆಟ್ಟಿರ ಸೋಮಣ್ಣ ಮಾತನಾಡಿ, ಈ ಕ್ರೀಡಾಕೂಟದಲ್ಲಿ  ಮಹಿಳೆಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಹಗ್ಗ ಜಗ್ಗಾಟ ಸ್ಪರ್ಧೆಯ ಪ್ರಥಮ ಬಹುಮಾನವನ್ನು ದಿ. ಚೀಯoಡಿ ಗಣಪತಿ ಅವರ ಜ್ಞಾಪಕರ್ತ ಅವರ ಮಗ ದಿನೇಶ್ ಹಾಗೂ ದ್ವಿತೀಯ ಬಹುಮಾನವನ್ನು ದಿ.ಮಚ್ಚುರ ಮಂದಣ್ಣ ಅವರ ಜ್ಞಾಪಕಾರ್ಥವಾಗಿ ಅವರ ಮಗ ಯದುಕುಮಾರ್ ನೀಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಾಕಿ ಸಮಿತಿ ಅಧ್ಯಕ್ಷ ಕರವ೦ಡ ಸುರೇಶ್, ಉಪಾಧ್ಯಕ್ಷ ಮಂಡೀರ ನಂದ ನಂಜಪ್ಪ, ಸಹ ಕಾರ್ಯದರ್ಶಿ ಮಚ್ಚುರ  ಯದುಕುಮಾರ್,  ಸದಸ್ಯರಾದ ಕೋಟೆರ ಬೋಪಣ್ಣ, ಐರಿರ ವೇಣು ಟಿಮ್ಸ , ಬದಂಚೆಟ್ಟಿರ ದೇವಯ್ಯ, ತೋಲಂಡ ಅರುಣ , ಗ್ರಾಮ ಪಂಚಾಯಿತಿ ಉಪ ಅಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ಮಾಲೆಯಂಡ ವಿನು , ಕರವಂಡ ಸಜನ್  , ತೋಳಂಡ ಅರುಣ, ಬೈರುಡ ಮಾಚಯ್ಯ, ಪಂಜೆರಿರ  ಹರೀಶ್, ಅಪ್ಪಚೆಟ್ಟೋಳ0ಡ ಅಯ್ಯಪ್ಪ ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Related Posts

ಸಂತ ಮೇರಿ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ನವೆಂಬರ್ 29, 2026

ಕುಶಾಲನಗರದಲ್ಲಿ ಬಸವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಆರಂಭ; ಕಳಸ ಮೆರವಣಿಗೆ, ಧಾರ್ಮಿಕ ಕೈಂಕರ್ಯಗಳಿಗೆ ಚಾಲನೆ

ನವೆಂಬರ್ 29, 2026

ಸುಂಟಿಕೊಪ್ಪದಲ್ಲಿ ನ.30ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ

ನವೆಂಬರ್ 29, 2026

ಕುಶಾಲನಗರದಲ್ಲಿ ಬಸವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಆರಂಭ; ಕಳಸ ಮೆರವಣಿಗೆ, ಧಾರ್ಮಿಕ ಕೈಂಕರ್ಯಗಳಿಗೆ ಚಾಲನೆ

ನವೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.29: ಕುಶಾಲನಗರ ಪಟ್ಟಣದ ನಂಜುಂಡೇಶ್ವರ ಬಡಾವಣೆಯಲ್ಲಿ ದಾನಿಗಳು ನೀಡಿರುವ ಜಾಗದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಬಸವೇಶ್ವರ…

ಸುಂಟಿಕೊಪ್ಪದಲ್ಲಿ ನ.30ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ

ನವೆಂಬರ್ 29, 2026

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ

ನವೆಂಬರ್ 29, 2026

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.