Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ಸೂಚನೆ*

ಮೇ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ.14 NEWS DESK  : ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್‍ರಾಜಾ ತಾಕೀತು ಮಾಡಿದ್ದಾರೆ.
ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಸಂಬಂಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ಗಡಿಭಾಗ ಸೇರಿದಂತೆ ನಗರ, ಪಟ್ಟಣ ಹಾಗೂ ಎಲ್ಲೆಡೆ ಅಳವಡಿಸಿರುವ/ ಅಳವಡಿಸುವ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
‘ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿನ ನಾಮಫಲಕದಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯ ಅನುಷ್ಠಾನದ ಬಗ್ಗೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತೊಮ್ಮೆ ಏಳು ದಿನಗಳ ಕಾಲಾವಕಾಶ ನೀಡಿ, ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು.’
ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.
ನಾಮಫಲಕಗಳಲ್ಲಿ ಕನ್ನಡ ಭಾಷೆ ಅನುಷ್ಠಾನ ಸಂಬಂಧ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಕಾಯ್ದೆಯಂತೆ ಕ್ರಮವಹಿಸಬೇಕು ಎಂದರು.
‘ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕು/ ಬರೆಸಿರಬೇಕು ಎಂದು ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.’
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಸಂಬಂಧಿಸಿದಂತೆ ತಾ.ಪಂ.ಮತ್ತು ಗ್ರಾ.ಪಂ.ಮೂಲಕ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದರು.
‘ಪೌರಾಯುಕ್ತರಾದ ವಿಜಯ್ ಅವರು ಮಾತನಾಡಿ ಈಗಾಗಲೇ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದ್ದು, ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಸಂಬಂಧಿಸಿದಂತೆ ನಗರದ 150 ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ. ಅನುಷ್ಠಾನ ಸಂಬಂಧ ತಂಡ ರಚಿಸಲಾಗಿದೆ. ಈ ಬಗ್ಗೆ ವರದಿ ನೀಡಲಾಗುವುದು ಎಂದರು.’
ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ದಿನೇಶ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್, ತಾ.ಪಂ.ಇಒ ಎಂ.ನಾಗಮಣಿ, ಪುರಸಭೆ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್ (ಕುಶಾಲನಗರ), ಚಂದ್ರಕುಮಾರ್ (ವಿರಾಜಪೇಟೆ), ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯ ನಾಯಕ್, ತಹಶೀಲ್ದಾರರು ಇತರರು ನಾಮಫಲಕಗಳಲ್ಲಿ ಕನ್ನಡ ಅನುಷ್ಠಾನ ಸಂಬಂಧ ಹಲವು ಮಾಹಿತಿ ನೀಡಿದರು.

   

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.