Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಗಳ ಗಣತಿ ಆದೇಶ ಹಿಂಪಡೆಯುವವರೆಗೆ ಹೋರಾಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಗಳ ಗಣತಿ ಆದೇಶ ಹಿಂಪಡೆಯುವವರೆಗೆ ಹೋರಾಟ*

ಮೇ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲೆಯಲ್ಲಿ ಮರಗಳ ಗಣತಿ ಕಾರ್ಯವನ್ನು ಅರಣ್ಯ ಇಲಾಖೆ ಮುಂದುವರೆಸಿದ್ದು, ಕೃಷಿಕ ವರ್ಗಕ್ಕೆ ಮಾರಕವಾಗಿರುವ ಆದೇಶವನ್ನು ಸರಕಾರ ಹಿಂಪಡೆಯುವವರೆಗೆ ವಿವಿಧ ಹಂತಗಳಲ್ಲಿ ಹೋರಾಟವನ್ನು ರೂಪಿಸುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಎಚ್ಚರಿಕೆ ನೀಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು, ತೋಟಗಳಲ್ಲಿರುವ ಮರಗಳ ಗಣತಿ ಕಾರ್ಯ ಜಿಲ್ಲೆಗೆ ಮಾರಕವಾಗಿದೆ. ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಬೆಳೆಗಾರರ ಪರವಾಗಿ ಬಿಜೆಪಿ ಈ ಹಿಂದೆಯೇ ಆಗ್ರಹಿಸಿದ್ದರೂ ಸರಕಾರ ಯಾವುದೇ ಸ್ಪಂದನೆ ನೀಡಿಲ್ಲ. ಆದ್ದರಿಂದ ಮೇ 17 ರಂದು ಮಡಿಕೇರಿಯ ಅರಣ್ಯ ಭವನದ ಎದುರು ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಬೆಳೆಗಾರರು, ಸಾರ್ವಜನಿಕರು ಹಾಗೂ ದೇವಾಲಯ ಸಮಿತಿಗಳ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲೆಯ ಶಾಸಕರು ಮರಗಳ ಗಣತಿ ಕಾರ್ಯ ಮುಂದುವರೆಯುವುದಿಲ್ಲ ಎಂದು ಭರವಸೆ ನೀಡಿದ ಮಾರನೇಯ ದಿನವೇ ಸಂಪಾಜೆ ಮತ್ತು ಚೆಂಬು ಭಾಗದಲ್ಲಿ ಅರಣ್ಯ ಸಿಬ್ಬಂದಿಗಳು ಮರಗಳ ಸರ್ವೆ ನಡೆಸಿದ್ದಾರೆ. ಅಧಿಕಾರಿಗಳು ಶಾಸಕರ ಮಾತಿಗೆ ಗೌರವ ನೀಡುತ್ತಿಲ್ಲವೇ ಅಥವಾ ಸರಕಾರದ ಮಟ್ಟದಲ್ಲಿ ಸಮಸ್ಯೆ ಕುರಿತು ಗಮನ ಸೆಳೆಯುವಲ್ಲಿ ಶಾಸಕರು ವಿಫಲರಾಗಿದ್ದಾರೆಯೇ ಎನ್ನುವುದು ತಿಳಿಯುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಶುಕ್ರವಾರದ ಪ್ರತಿಭಟನೆಯನ್ನು ಕೂಡ ಸರಕಾರ ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ವಿವಿಧ ಹಂತಗಳಲ್ಲಿ ಹೋರಾಟವನ್ನು ರೂಪಿಸಿ ಕೊಡಗು ಬಂದ್ ಗೂ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು.
ಅರಣ್ಯ ಪ್ರದೇಶದಲ್ಲಿರುವ ಮರಗಳನ್ನೇ ರಕ್ಷಿಸಿಕೊಳ್ಳಲಾಗದ ಅರಣ್ಯ ಇಲಾಖೆ ವಿನಾಕಾರಣ ಬೆಳೆಗಾರರಿಗೆ ತೊಂದರೆ ನೀಡುತ್ತಿದೆ. ಕೇರಳದ ಗಡಿಭಾಗದ ಅರಣ್ಯ ಪ್ರದೇಶದಿಂದ ಲೆಕ್ಕವಿಲ್ಲದಷ್ಟು ಮರಗಳ ಹನನವಾಗಿದೆ. ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮ ವ್ಯಾಪ್ತಿಯ ನೂರಾರು ಏಕರೆ ಪ್ರದೇಶದಲ್ಲಿ ಮರಗಳ ಹನನವಾಗಿದೆ. ಇದನ್ನೆಲ್ಲ ತಡೆಯಲು ಸಾಧ್ಯವಾಗದ ಅರಣ್ಯ ಅಧಿಕಾರಿಗಳು ತೋಟಗಳಲ್ಲಿರುವ ಮರಗಳ ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ರವಿ ಕಾಳಪ್ಪ ಆರೋಪಿಸಿದರು.
ನೂರಾರು ವರ್ಷಗಳಿಂದ ದೇವಾಲಯಗಳಲ್ಲಿ ಸಾಂಪ್ರದಾಯಿಕವಾಗಿ ಕಾಡು ಪ್ರಾಣಿಗಳ ವಸ್ತುಗಳನ್ನು ಧಾರ್ಮಿಕ ವಿಧಿ ವಿದಾನಗಳಲ್ಲಿ ಬಳಸಿಕೊಂಡು ಬರಲಾಗುತ್ತಿದೆ. ಇದನ್ನು ಸ್ವಾಧೀನ ಪಡಿಸಿಕೊಳ್ಳುವ ಸರಕಾರದ ಪ್ರಸ್ತಾಪಕ್ಕೂ ಪ್ರತಿಭಟನೆಯ ಸಂದರ್ಭ ವಿರೋಧ ವ್ಯಕ್ತಪಡಿಸುವುದಾಗಿ ತಿಳಿಸಿದರು.
ಕಂದಾಯ ಇಲಾಖೆ ಈ ಹಿಂದೆ ಸಿ ಮತ್ತು ಡಿ ಭೂಮಿಯನ್ನು ಮರಗಳನ್ನು ಬೆಳೆಸಲು ಅರಣ್ಯ ಇಲಾಖೆಗೆ ಬಿಟ್ಟುಕೊಟ್ಟಿತ್ತೇ ಹೊರತು ಸಂಪೂರ್ಣ ಹಕ್ಕುದಾರಿಕೆಯನ್ನು ನೀಡಿರಲಿಲ್ಲ. ಕಳೆದ ಅವಧಿಯಲ್ಲಿದ್ದ ಬಿಜೆಪಿ ಸರಕಾರ ಸಿ ಮತ್ತು ಡಿ ಭೂಮಿಯನ್ನು ಕಂದಾಯ ಇಲಾಖೆ ಮರಳಿ ಪಡೆದು ಈ ಭೂಮಿಯಲ್ಲಿ ಜೀವನ ಸಾಗಿಸುತ್ತಿರುವವರಿಗೆ ಹಕ್ಕುಪತ್ರ ನೀಡುವ ಕುರಿತು ನಿಯಮ ರೂಪಿಸಿತ್ತು. ಆದರೆ ಈಗಿನ ಕಾಂಗ್ರೆಸ್ ನೇತೃತ್ವದ ಸರಕಾರ ಸಿ ಮತ್ತು ಡಿ ಭೂಮಿಯನ್ನು ಮರಳಿ ಪಡೆಯುವ ಹಾಗೂ ಅರ್ಹರಿಗೆ ಹಕ್ಕುಪತ್ರ ನೀಡುವ ಯಾವುದೇ ಪ್ರಕ್ರಿಯೆಯನ್ನು ಆರಂಭಿಸಿಲ್ಲವೆಂದು ರವಿ ಕಾಳಪ್ಪ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಪ್ರಧಾನ ಕಾಯದರ್ಶಿ ಮಹೇಶ್ ಜೈನಿ, ಕಾರ್ಯದರ್ಶಿ ನಾಳನ ಕನ್ನಿಕೆ, ವಕ್ತಾರರಾದ ಬಿ.ಕೆ.ಅರುಣ್ ಕುಮಾರ್ ಹಾಗೂ ತಳೂರು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.