
- ಬೆಂಗಳೂರು ಮೇ 15 NEWS DESK : ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 16 ಬೇಡಿಕೆಗಳ ಬಹಿರಂಗ ಪತ್ರ ಬರೆದಿದ್ದಾರೆ.
- ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು.
- ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
- ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು.
- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು.
- ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು.
- ಕಾರು ಚಾಲಕ ಕಾರ್ತಿಕ್ನನ್ನು ಕೂಡಲೇ ಬಂಧಿಸಬೇಕು.
- ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
- ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ದಾಖಲಿಸಬೇಕು.
- ವಿಡಿಯೋ ಕುರಿತು ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿಲ್ಲದ ಕಾರಣ ಅವರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು.
- ವಿಡಿಯೋ ಹಳೆಯದು ಎಂದು ಎಚ್ಡಿ ರೇವಣ್ಣ ಹೇಳಿದ್ದಾರೆ. ಅಷ್ಟು ವರ್ಷ ನಡೆಯುತ್ತಿರುವ ಲೈಂಗಿಕ ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ಧಮೆ ಹೂಡಬೇಕು.
- ಆರೋಪಿ ದೇಶ ಬಿಟ್ಟು ಹೋಗಲು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.
- ಪ್ರಜ್ವಲ್ ರೇವಣ್ಣ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು.
- ಹೆಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು.
- ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ ಡಿ ರೇವಣ್ಣ ಅವರ ವಿಧಾನಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು.
- ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಸರ್ಕಾರಿ ಬಂಗ್ಲೆಯನ್ನು ಅಪರಾಧ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು.
- ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳುಳ್ಳ ಪತ್ರವನ್ನು ಸಾಹಿತಿಗಳು ಬರೆದಿದ್ದಾರೆ.



Breaking News
- *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
- *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
- *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
- *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
- *ಕಾಂತಪ್ಪಗೆ ಪಿಎಚ್‍ಡಿ ಪದವಿ*
- *ಎಫ್.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
- *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
- *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
- *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
- *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*






