Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ಕುಂಡ್ಯೋಳಂಡ ಕುಟುಂಬದ ಸಾಧನೆ ಶ್ಲಾಘನೀಯ : ಲೆ.ಕ. ಸುಬ್ರಮಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು : ಕುಂಡ್ಯೋಳಂಡ ಕುಟುಂಬದ ಸಾಧನೆ ಶ್ಲಾಘನೀಯ : ಲೆ.ಕ. ಸುಬ್ರಮಣಿ*

ಮೇ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 NEWS DESK : 24ನೇ ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸುವುದರ ಮೂಲಕ ಕುಂಡ್ಯೋಳಂಡ ಕುಟುಂಬಸ್ಥರು ಗಮನಾರ್ಹ ಸಾಧನೆ ಮಾಡಿದ್ದಾರೆ. ದೇಶದ ಯಾವುದೇ ಮೂಲೆಗೆ ತೆರಳಿದರೂ ಹಾಕಿ ಉತ್ಸವದ ಮಾತು ಕೇಳಿ ಬರುತ್ತಿದೆ. ಹಾಕಿ ಉತ್ಸವದ ಮೂಲಕ ಗಿನ್ನಿಸ್ ದಾಖಲೆಗೆ ಸೇರ್ಪಡೆ ಮಾಡಲು ಕಾರಣಕರ್ತರಾದ ಕುಂಡ್ಯೋಳಂಡ ಕುಟುಂಬಸ್ಥರ ಕಾರ್ಯ ಶ್ಲಾಘನೀಯ ಎಂದು ಒಲಂಪಿಯನ್, ಲೆಫ್ಟಿನಲ್ ಕರ್ನಲ್ ಬಾಳೆಯಡ ಸುಬ್ರಮಣಿ ಹೇಳಿದರು.
ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಕುಟುಂಬಸ್ಥರ ಐನ್ ಮನೆಯಲ್ಲಿ ಆಯೋಜಿಸಲಾಗಿದ್ದ ಕುಂಡ್ಯೋಳಂಡ ಹಾಕಿ ಕಾರ್ನಿವಲ್ ಗೆ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕುಂಡ್ಯೋಳಂಡ ಕುಟುಂಬ ಸಣ್ಣ ಕುಟುಂಬವಾದರೂ ಅವರ ಸಾಧನೆ ದೊಡ್ಡದು. ದೇಶ ವಿದೇಶಗಳಲ್ಲಿ ಕೌಟುಂಬಿಕ ಹಾಕಿಯ ಖ್ಯಾತಿ ಹಬ್ಬಿರುವುದು ಶ್ಲಾಘನೀಯ ಎಂದರು.
ರಾಷ್ಟ್ರೀಯ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ ಮಾತನಾಡಿ ಪುಟ್ಟ ಜಿಲ್ಲೆ ಕೊಡಗಿನಲ್ಲಿ ಎಲ್ಲಾ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಹಾಕಿ ಕೂರ್ಗ್, ಹಾಕಿ ಕರ್ನಾಟಕ, ಹಾಕಿ ಇಂಡಿಯಾ ಸೇರಿದಂತೆ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವಂತಹ ಕಾರ್ಯ ಮಾಡಿದ ಕುಂಡ್ಯೋಳಂಡ ಕುಟುಂಬಸ್ಥರ ಕಾರ್ಯ ಶ್ಲಾಘನೀಯ. ಇದು ಮುಂದೆ ಹಾಕಿ ಉತ್ಸವ ಆಯೋಜಿಸಲಿರುವ ಕುಟುಂಬಗಳಿಗೂ ಮಾರ್ಗದರ್ಶಿ ಎಂದರು.
ಕೊಡಗಿನ ಹಾಕಿಗೆ ಕುಟುಂಬದ ಕೊಡುಗೆ ಬಹಳಷ್ಟು ಸಂತಸ ತಂದಿದೆ. ಹಲವು ರಾತ್ರಿಗಳು ನಿದ್ರೆಗೆಟ್ಟು ಶ್ರಮಿಸಿದ ಈ ಕುಟುಂಬಕ್ಕೆ ಹಾಕಿ ಪಟುಗಳು ಐನ್ ಮನೆಗೆ ಬಂದು ಗೌರವವನ್ನು ಸಲ್ಲಿಸಿದ್ದಾರೆ. ಕುಂಡ್ಯೋಳಂಡ ಕುಟುಂಬವು ಕೊಡಗಿನ ಹಾಕಿಗೆ ದಾರಿದೀಪವಾಗಿದ್ದು, ಇತರ ಕುಟುಂಬಗಳು ಇದೇ ರೀತಿ ಕೈಹಿಡಿದು ಕೊಡಗಿನ ಹಾಕಿಯನ್ನು ಮುನ್ನಡೆಸಲಿ ಎಂದರು.
ಹಾಕಿ ಉತ್ಸವ ಸಮಿತಿ ಅಧ್ಯಕ್ಷ ರಮೇಶ್ ಮುದ್ದಯ ಮಾತನಾಡಿ, ಹಾಕಿ ಉತ್ಸವ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾದದ್ದು ಇಡೀ ಕೊಡವ ಜನಾಂಗಕ್ಕೆ ಸಿಕ್ಕ ಗೌರವ. ಇದು ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ ಎಂದರು.
ಹಾಕಿ ಉತ್ಸವದ ಸಂಚಾಲಕ ದಿನೇಶ್ ಮಾತನಾಡಿ, ಉತ್ಸವದ ಯಶಸ್ವಿಗೆ ಸಹಕರಿಸಿದ ಎಲ್ಲರನ್ನು ನೆನಪಿಸಿಕೊಂಡ ಅವರು ಅಭಿನಂದಿಸಿದರು.
ಕೊಡವ ಕೌಟುಂಬಿಕ ಹಾಕಿ ಉತ್ಸವವನ್ನು ಆಯೋಜಿಸಿ ಇತ್ತೀಚೆಗೆ ಗಿನ್ನಿಸ್ ದಾಖಲೆ ನಿರ್ಮಿಸಿದ ಕುಂಡ್ಯೋಳಂಡ ಕುಟುಂಬದವರಿಗೆ ಉತ್ಸವದಲ್ಲಿ ಸನ್ಮಾನ ಸ್ವೀಕರಿಸಿದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಹಾಕಿ ಆಟಗಾರರು ಶುಭ ಹಾರೈಸಿ, ಕುಂಡ್ಯೋಳಂಡ ಕುಟುಂಬದ ಐನ್ ಮನೆಯಲ್ಲಿ ಕುಟುಂಬದವರಿಗೆ ಗೌರವವನ್ನು ಸಲ್ಲಿಸಿದರು. ಕುಟುಂಬದ ಪಟ್ಟೇದಾರ ಸುಬ್ಬಯ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ವಿಶ್ವಕಪ್ ಆಟಗಾರ ಕೂತಂಡ ಪೂಣಚ್ಚ, ಅಂತರಾಷ್ಟ್ರೀಯ ಹಾಕಿ ಆಟಗಾರ ಚಂದಪಂಡ ಪ್ರಿನ್ಸ್ ಕರುಂಬಯ್ಯ, ಅಂತರಾಷ್ಟ್ರೀಯ ಹಾಕಿ ಆಟಗಾರರಾದ ಕರಿನೆರವಂಡ ಸೋಮಣ್ಣ, ಕುಲ್ಲೆಟೀರ ಉತ್ತಯ್ಯ, ರಾಷ್ಟ್ರೀಯಹಾಕಿ ಆಟಗಾರರಾದ ಅರೆಯಡ ರವಿ ಅಯ್ಯಪ್ಪ, ಕರ್ತಮಾಡ ರಿಕ್ಕಿ ಗಣಪತಿ, ಕನ್ನಂಬೀರ ಪ್ರವೀಣ್, ಅಂಜಪರವಂಡ ಕಾರ್ಯಪ್ಪ, ಅಂತರಾಷ್ಟ್ರೀಯ ತರಬೇತಿದಾರ ಬೊಳ್ಳೇಪಂಡ ಜೆ.ಕಾರ್ಯಪ್ಪ ಪಾಲ್ಗೊಂಡು ತಮ್ಮ ಅನಿಸಿಕೆ ವ್ಯಕ್ತಪಡಿಸಿ ಶುಭ ಕೋರಿದರು.
ಹಾಕಿ ಉತ್ಸವ ನಡೆಸಿ ಗಿನ್ನಿಸ್ ದಾಖಲೆ ನಿರ್ಮಿಸಿದ ಕುಟುಂಬದ ಪರವಾಗಿ ಪಟ್ಟೆದಾರ ಸುಬ್ಬಯ್ಯ ಅವರಿಗೆ ಹಾಕಿಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ವಿಶೇಷ ಶೋ ಹಾಕಿ ಸ್ಟಿಕ್ ನೀಡಿ ಶಾಲು ಹೊದೆಸಿ ಫಲ ತಾಂಬೂಲ ನೀಡಿ ಗೌರವ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಹೇಮಾ ಪೂವಣ್ಣ ಪ್ರಾರ್ಥಿಸಿದರು, ರಮೇಶ್ ಮುದ್ದಯ್ಯ ಸ್ವಾಗತಿಸಿದರು. ವಿಶು ಪೂವಯ್ಯ ಅತಿಥಿಗಳನ್ನು ಪರಿಚಯಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ಮುತ್ತಪ್ಪ ವಂದಿಸಿದರು.

ವರದಿ : ದುಗ್ಗಳ ಸದಾನಂದ  

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.