Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶೀಘ್ರ ಮುಂಗಾರು ಆರಂಭ : ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶೀಘ್ರ ಮುಂಗಾರು ಆರಂಭ : ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಮೇ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 16 NEWS DESK : ಇದೇ ಜೂನ್ ಮೊದಲ ವಾರದಲ್ಲಿ `ಮುಂಗಾರು’ ಆರಂಭವಾಗುವ ಸಾಧ್ಯತೆ ಇದ್ದು, ಕೊಡಗು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆ ಮಳೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಹೆಚ್ಚಿನ ಮಳೆಯಾದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ `ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹವಾಮಾನ ಇಲಾಖೆಯಿಂದ ಕಾಲ ಕಾಲಕ್ಕೆ ಮಳೆ ಮುನ್ಸೂಚನೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಾಗುತ್ತದೆ. ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು.
ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಹಶೀಲ್ದಾರರು, ತಾ.ಪಂ.ಇಒಗಳು ಇತರರು ಜಂಟಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಶಾಲಾ-ಕಾಲೇಜುಗಳು, ಅಂಗನವಾಡಿ ಕಟ್ಟಡಗಳು ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಪರಿಹಾರ/ ಕಾಳಜಿ ಕೇಂದ್ರವನ್ನು ತೆರೆಯುವುದು ಮತ್ತಿತರ ಕೆಲಸವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಕೃಷಿ ಸಂಬಂಧಿಸಿದಂತೆ ಜಿಲ್ಲೆಗೆ ಬೇಕಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ವೆಂಕಟ್ ರಾಜಾ ಸೂಚಿಸಿದರು.
ಅಗ್ನಿಶಾಮಕ ದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ಧವಾಗಿರಬೇಕು. ಗೃಹರಕ್ಷಕ ದಳ ಸಿಬ್ಬಂದಿಗಳು ಸಹ ತುರ್ತು ಸೇವೆಗೆ ಲಭ್ಯವಿರುವಂತೆ ಕ್ರಮಕೈಗೊಳ್ಳಬೇಕು ಎಂದರು.
ವಿದ್ಯುತ್ ವ್ಯತ್ಯಯ ಉಂಟಾದಲ್ಲಿ ಸರಿಪಡಿಸಬೇಕು. ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡುಬಂದಲ್ಲಿ ಕೂಡಲೇ ಸರಿಪಡಿಸಿ, ವಿದ್ಯುತ್ ತಂತಿಯಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರವಹಿಸಬೇಕು ಎಂದು ಸೆಸ್ಕ್ ಇಇ ಅವರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಸೆಸ್ಕ್ ಎಇಇ ವಿನಯ್‍ಕುಮಾರ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ 75 ಮಂದಿ ಗ್ಯಾಂಗ್‍ಮನ್‍ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ ಅಗತ್ಯ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕಂದಾಯ, ಸೆಸ್ಕ್, ಅರಣ್ಯ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳ ನಡುವೆ ಸಮನ್ವಯ ಮುಖ್ಯವಾಗಿದ್ದು, ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯವುದು. ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಜನರನ್ನು ಬೇರೇಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಪಡೆ ಸಮಿತಿ ಸಭೆ ನಡೆಸುವುದು, ತಮ್ಮ ಇಲಾಖಾ ಹಂತದಲ್ಲಿಯೂ ಸಹ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ ಗ್ರಾ.ಪಂ ಮಟ್ಟದಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳು ಸಾರ್ವಜನಿಕರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡುವಂತಾಗಬೇಕು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ ಮಾತನಾಡಿ, ಜಿಲ್ಲೆಗೆ ಬೇಕಿರುವ ಭಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಈಗಾಗಲೇ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ ಅವರು ಅವರು ಮುಂಗಾರು ಸಂದರ್ಭದಲ್ಲಿ ರಸ್ತೆ ನಿರ್ವಹಣೆಗೆ ಹೆಚ್ಚಿನ ಗಮನಹರಿಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಹಲವು ಮಾಹಿತಿ ನೀಡಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಪಂಚಾಯತ್ ರಾಜ್ ಎಂಜಿನಿಯರ್ ಸುರೇಶ್ ಕುಮಾರ್, ಮುತ್ತುರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ತಾ.ಪಂ.ಇಒ ಎಂ.ನಾಗಮಣಿ, ತಹಶೀಲ್ದಾರರಾದ ರಮೇಶ್ ಬಾಬು, ರಾಮಚಂದ್ರ, ಕಿರಣ್ ಗೌರಯ್ಯ, ನವೀನ್ ಕುಮಾರ್, ಮೋಹನ್, ಪೌರಾಯುಕ್ತ ವಿಜಯ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್ ಇತರರು ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.