Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಧಿಕ ಮತಗಳ  ಗೆಲುವು : ಕ್ಯಾಪ್ಟನ್ ಗಣೇಶ್ ಕಾರ್ಣಿಕ್  ವಿಶ್ವಾಸ* 
ಇತ್ತೀಚಿನ ಸುದ್ದಿಗಳು ಕರ್ನಾಟಕ

ಅಧಿಕ ಮತಗಳ  ಗೆಲುವು : ಕ್ಯಾಪ್ಟನ್ ಗಣೇಶ್ ಕಾರ್ಣಿಕ್  ವಿಶ್ವಾಸ* 

ಮೇ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು ಮೇ 19 NEWS DESK : ಶಿಕ್ಷಕರು ಸಮಾಜವನ್ನು ತಿದ್ದವವರು ಹಾಗೂ ಪದವೀದರರು ಪ್ರಜ್ಞಾವಂತರು. ಜನಸಾಮಾನ್ಯರು ಮಾಡುವ ತಪ್ಪುಗಳನ್ನು ಶಿಕ್ಷಕರು, ಪದವೀಧರರು ಮಾಡುವುದಿಲ್ಲ, ಮೈತ್ರಿಯ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸುತ್ತಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮಂಗಳೂರು ನಗರ ಉತ್ತರ ಬಿಜೆಪಿ ಕಾರ್ಯಾಲಯದಲ್ಲಿ ನೈರುತ್ಯ ಪದವೀಧರ  ಮ್ತತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪರಿಷತ್ ಚುನಾವಣೆಯನ್ನು ನಾವೆಲ್ಲರೂ ಇದು ನಮ್ಮ ಚುನಾವಣೆ ಎಂದು ಸ್ವೀರಿಸಬೇಕು, ಗ್ರಾಮ, ವಾರ್ಡ್, ಬೂತ್ ಮಟ್ಟದಲ್ಲಿ ಚುರುಕಾಗಿ ಕಲಸ ಮಾಡಬೇಕು, ಪ್ರತಿ ಶಿಕ್ಷಕರು ಹಾಗೂ ಪದವೀಧರರನ್ನು ತಲುಪಿ ಅಭ್ಯರ್ಥಿಗಳ ಬಗ್ಗೆ ಮನವರಿಕೆ ಮಾಡಿ ಮತ ನೀಡುವಂತೆ ಮನವೊಲಿಸಬೇಕು ಎಂದು ಹೇಳಿದರು. ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡುವ ಶಕ್ತಿ ಮಂಗಳೂರು ಜಿಲ್ಲೆಗಿದೆ, ಇವತ್ತಿನಿಂದ ಚುನಾವಣೆ ತನಕ ಮತದಾರರ ಸಂಪರ್ಕ ಮತ್ತು ಸಂಬಂಧವನ್ನು ಬೆಳೆಸಿ ಮತಗಳಾಗಿ ಪರಿವರ್ತಿಸಬೇಕು, ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಕಾರ್ಯಕರ್ತರು ಗೆಲುವಿಗೆ ಶ್ರಮಿಸುತ್ತಾರೆಂಬ ವಿಶ್ವಾಸವಿದೆ ಎಂದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ, ಇದೊಂದು ಪವಿತ್ರವಾದ ಚುನಾವಣೆ, ಸಂಘಟನೆಯನ್ನು ಮತ್ತಷ್ಟು ಬಲಗೊಳಿಸಿದ ಚುನಾವಣೆ, ಕಾಂಗ್ರೆಸ್ ನ ಜನ ವಿರೋಧಿ ನೀತಿಯನ್ನ ಖಂಡಿಸಲಿಕ್ಕೆ ಪರಿಷತ್ತು ಒಂದೊಳ್ಳೆಯ ವೇದಿಕೆ, ನಮ್ಮ ಪ್ರಾಬಲ್ಯವನ್ನು ಉಳಿಸಿಕೊಳ್ಳಬೇಕೆಂದರೆ ಗೆಲ್ಲಲೇಬೇಕಿದ್ದು, ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡು ಕಾರ್ಯಾನ್ಮುಖರಾಗಬೇಕಿದೆ ಎಂದರು. ಮಂಗಳೂರು ನಗರ ಉತ್ತರ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಮಾತನಾಡಿ, ಮಂಗಳೂರು ನಗರ ಉತ್ತರದಲ್ಲಿ ಒಟ್ಟು ಏಳು ಮಹಾಶಕ್ತಿ ಕೇಂದ್ರ, 69 ಶಕ್ತಿ ಕೇಂದ್ರಗಳಿವೆ, ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಕ್ಕೆ ಸಂಚಾಲಕರು, ಸಹ ಸಂಚಾಲಕರನ್ನು ನೇಮಕ ಮಾಡಿದ್ದು, ತಂಡವಾಗಿ ಮತದಾರರನ್ನು ತಲುಪಲು ಶ್ರಮಿಸುವಂತೆ ಕರೆ ನೀಡಿದರು. ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಚುನಾವಣೆಗೆ ಇನ್ನು ಕೇವಲ 12 ದಿನಗಳು ಮಾತ್ರ ಬಾಕಿ ಇವೆ, ಇದು ಕಾರ್ಯಕರ್ತರ ಚುನಾವಣೆ, ಹಾಗಾಗಿ ಯುದ್ಧೋಪಾದಿಯಲ್ಲಿ ಮುನ್ನುಗ್ಗಿದರೆ ಗೆಲುವು ಸುಲಭವಾಗಲಿದೆ, ತಾವೇ ಅಭ್ಯರ್ಥಿ ಎಂದು ತಿಳಿದು ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಶಿಕ್ಷಕರ ನೈರುತ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೇಗೌಡ ಮಾತನಾಡಿ, ಬಿಜೆಪಿ ಶಿಸ್ತು ಮತ್ತು ಸಂಘಟನೆಯಲ್ಲಿ ಇಡೀ ದೇಶದಲ್ಲೇ ಅತ್ಯಂತ ಬಲಿಷ್ಠವಾದುದು, ಪ್ರಧಾನಿ ನರೇಂದ್ರ ಮೋದಿ ಜೀ ಅವರು ಮತ್ತೊಮ್ಮೆ ಪ್ರಧಾನಿ ಆಗುವ ಕಾಲಸನ್ನಿಹಿತವಾಗಿದೆ, ಪಕ್ಷದ ಚಿಹ್ನೆ ಇಲ್ಲದೇ ನಡೆಯುವ ಈ ಚುನಾವಣೆಯಲ್ಲಿ ಮತದಾರರನ್ನು ಮತ ಹಾಕುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು. ಮಂಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್ ಪುತ್ತೂರ್, ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪ್ರಶಾಂತ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ , ಮುಖಂಡರಾದ ಆರ್‌.ಸಿ. ನಾರಾಯಣ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.