Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿ : ಮಿಡಿಯಾ ಸೂಪರ್ ಕಿಂಗ್ಸ್ ತಂಡ ಪ್ರಥಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿ : ಮಿಡಿಯಾ ಸೂಪರ್ ಕಿಂಗ್ಸ್ ತಂಡ ಪ್ರಥಮ*

ಮೇ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 20  NEWS DESK : ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬದ ಅಂಗವಾಗಿ ಪತ್ರಕರ್ತರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿ ಕುಶಾಲನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಪಂದ್ಯಾವಳಿಗೆ ಚಾಲನೆ ನೀಡಿದರು.

ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ 6 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕೆರೆ‌ ಮಾಲೀಕತ್ವದ ಮುಸ್ತಾಪ ನಾಯಕತ್ವದ ಮಿಡಿಯಾ ಸೂಪರ್ ಕಿಂಗ್ಸ್ ತಂಡ ಪ್ರಥಮ ಸ್ಥಾನ ಗಳಿಸಿತು.
ಜಯಪ್ರಕಾಶ್ ಮಾಲೀಕತ್ವದ ಶಿವರಾಜ್ ನಾಯಕತ್ವದ ಸೆನ್ಸಾ ತಂಡ ದ್ವಿತೀಯ ಸ್ಥಾನ, ಮಂಜು ಸುವರ್ಣ ಮಾಲಿಕತ್ವದ, ಆದರ್ಶ್ ನಾಯಕತ್ವದ ಟೀಂ ನಾಟೌಟ್ ತೃತೀಯ, ವಿಶ್ವ ಕುಂಬೂರು ಮಾಲಿಕತ್ವದ ಕೆ.ಎಂ.ವಿನೋದ್ ನಾಯಕತ್ವದ ವಿ.ತ್ರಿ.ತಂಡ ನಾಲ್ಕನೇ ಸ್ಥಾನ ಗಳಿಸಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ವಿಜೇತ ತಂಡಗಳಿಗೆ‌ ಬಹುಮಾನ‌ ವಿತರಿಸಿದರು.
ನಂತರ ಮಾತನಾಡಿದ ಅವರು, ಯಾವುದೇ ಸಂಘಟನೆಗಳು ಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ಒತ್ತಡದ ಕೆಲಸ ನಡುವೆ ಬಿಡುವು‌ ಮಾಡಿಕೊಂಡು ಸಂಭ್ರಮಿಸಲು ಕ್ರೀಡೆಗಳಿಂದ ಸಹಕಾರಿಯಾಗಲಿದೆ. ಕ್ರೀಡಾಕೂಟ ಎಲ್ಲರಲ್ಲಿ ಸಾಮರಸ್ಯ‌ ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಸಾಮಾಜಿಕ ಹೊಣೆಗಾರಿಕೆ ಪ್ರದರ್ಶಿಸುವ ಮಾಧ್ಯಮಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಮಾಜಮುಖಿಯಾಗಿ‌ ಸತ್ಯಕ್ಕೆ ಹತ್ತಿರವಾದ ಸುದ್ದಿಗಳನ್ನು ಬರೆಯುವ ಮೂಲಕ ಸಮಾಜದ ಪರಿವರ್ತನೆಗೆ ಕಾರಣವಾಗಬೇಕಾಗಿದೆ ಎಂದರು.
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದರು.
ರಾಜ್ಯ ಸಮಿತಿ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಪತ್ರಕರ್ತರ ಸಂಘಟನೆ ಉತ್ತಮ ಉದ್ದೇಶದಿಂದ ಆರಂಭಿಸಿದ ಕ್ರಿಕೆಟ್ ಪಂದ್ಯಾವಳಿ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಮುನ್ನಡೆದುಕೊಂಡು‌ ಬರುತ್ತಿರುವುದು ಶ್ಲಾಘನೀಯ ವಿಚಾರ ಎಂದರು. ವಿಷಯಾಧಾರಿತ ವರದಿಗಳು ಹೆಚ್ಚು ಪರಿಣಾಮಕಾರಿಯಾಗಿ ಮೂಡಿಬರಲಿ ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ಬೆಳ್ಳಿಹಬ್ಬದ ಅಂಗವಾಗಿ ಕುಶಾಲನಗರ ತಾಲೂಕು ಸಂಘದಿಂದ ಹಮ್ಮಿಕೊಂಡಿರುವ ವಿವಿಧ ಚಟುವಟಿಕೆಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಮೋಹನ್, ಬೆಳ್ಳಿ ಹಬ್ಬದ ಅಂಗವಾಗಿ ಒಟ್ಟು 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಚಿಂತನೆ ಹೊಂದಿರುವ ಬಗ್ಗೆ ಮಾಹಿತಿ ಒದಗಿಸಿದರು. ಸಂಘದ ಕ್ರೀಡಾ ಸಮಿತಿ ಮೂಲಕ ಜಿಲ್ಲಾ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಯಶಸ್ವಿಯಾಗಿ ನಡೆದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್ ಮಾತನಾಡಿ, 25 ಸಂವತ್ಸರ ಕಂಡ ಸಂಘದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ವೇದಿಕೆಯಲ್ಲಿ ಪುರಸಭೆ ಸದಸ್ಯರಾದ ಪ್ರಮೋದ್ ಮುತ್ತಪ್ಪ, ಪ ಪಂ ಮಾಜಿ ಸದಸ್ಯ ಜೋಸೆಫ್ ವಿಕ್ಟರ್ ಸೋನ್ಸ್, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಮಂಜುನಾಥ್, ಜಿಲ್ಲಾ ಕ್ರೀಡಾ ಸಮಿತಿ ಸಂಚಾಲಕ ಮಂಜು ಸುವರ್ಣ, ತಾಲೂಕು ಸಂಚಾಲಕ ಶಿವರಾಜ್ ‌ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.