Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಾಸ್ತವಿಕ ನೆಲೆಗಟ್ಟಿನ ಕವಿತೆಗಳು ಗಟ್ಟಿಯಾಗಿ ನೆಲೆಯೂರುತ್ತವೆ : ಮಾರುತಿ ದಾಸಣ್ಣನವರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಾಸ್ತವಿಕ ನೆಲೆಗಟ್ಟಿನ ಕವಿತೆಗಳು ಗಟ್ಟಿಯಾಗಿ ನೆಲೆಯೂರುತ್ತವೆ : ಮಾರುತಿ ದಾಸಣ್ಣನವರ್*

ಮೇ 21, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 21 NEWS DESK : ಕವಿತೆ ರಚನೆಗೆ ಯಾವುದೇ ಛಂದ, ಬಂಧ, ಪ್ರಾಸ, ಧೋರಣೆ, ವಸ್ತು, ಆಶಯಗಳಂತಹ ಸಿದ್ದ ರಚನೆ ಇರಬೇಕಿಲ್ಲ. ವಾಸ್ತವಿಕ ನೆಲೆಗಟ್ಟಿನಲ್ಲಿ ಭಾವನಾತ್ಮಕ ಸನ್ನಿವೇಶದಲ್ಲಿ ಸ್ವಾಭಾವಿಕವಾಗಿ ಹುಟ್ಟಿಕೊಳ್ಳುವ ಕವಿತೆಗಳು ಗಟ್ಟಿಯಾಗಿ ನೆಲೆಯೂರುತ್ತವೆ ಎಂದು ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ ಹಾಗೂ ಸಾಹಿತಿ ಮಾರುತಿ ದಾಸಣ್ಣನವರ್ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.) ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮ: 50 ರ ಸಂದರ್ಭದಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿನಡೆದ 2023-24ನೇ ಸಾಲಿನ ಕಥೆಗಾರ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಮೂರ್ನಾಡಿನ ಕವಿಯಿತ್ರಿ, ಶಿಕ್ಷಕಿ ಕೆ.ಜಿ.ರಮ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಕವಿತೆ – ಕಾವ್ಯ ರಚನೆ ಕುರಿತು ಮಾತನಾಡಿದರು.
ಪೂರ್ವಾಗ್ರಹದ ಕನ್ನಡಕ ಹಾಕಿಕೊಂಡೇ ಒಂದು ಕವಿತೆಯನ್ನು ಪರೀಕ್ಷೆಗೊಳಪಡಿಸುವುದು ಅಷ್ಟೊಂದು ಸೂಕ್ತವಲ್ಲ. ಕವಿತೆ ಅದು ಕವಿತೆ. ಅದನ್ನು ಸುಮ್ಮನೇ ತೆರೆದ ಮನಸ್ಸಿನಲ್ಲಿ ಓದಬೇಕು ಮತ್ತು ಅನುಭವಿಸಬೇಕು ಎಂದರು.
ಕವಿಯಿತ್ರಿ ಕೆ.ಜಿ.ರಮ್ಯ ಅವರ “ದಾಹಗಳ ಮೈ ಸವರುತ್ತಾ” ಕವನ ಸಂಕಲನದ ಕವನಗಳಲ್ಲಿ ಕವನಗಳು ಶೋಷಿತ ಮಹಿಳೆಯರ ನೋವು- ನಲಿವುಗಳ ಬಗ್ಗೆ ಬೆಳಕು ಚೆಲ್ಲತ್ತವೆ. ಹೆಣ್ಣೊಬ್ಬಳೊಳಗಿನ ನೋವು ಮತ್ತು ಆಕ್ರೋಶವನ್ನು ನಿರ್ಭೀತವಾಗಿ ನಿರ್ಭಿಡೆಯಿಂದ ಕಾವ್ಯದಲ್ಲಿ ಅಭಿವ್ಯಕ್ತಿಗೊಳಿಸಲಾಗಿದೆ.
ನೋವುಂಡ ಎದೆ ದನಿಗಳನ್ನೂ, ಬದುಕು ಬದಲಾಗುವ ಸಾಧ್ಯತೆಗಳನ್ನೂ ಪ್ರಕೃತಿಯ ಅನಂತತೆಯನ್ನೂ ಉಸಿರ ಕವಿತೆಗಳು ಕಲಿಸಿ ಕೊಟ್ಟಿವೆ ಎಂದು ದಾಸಣ್ಣನವರ್ ಕವನಗಳ ಕುರಿತು ವಿಶ್ಲೇಷಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರಮ್ಮ ದತ್ತಿ ಪ್ರಶಸ್ತಿ ಆರಂಭದ ಹಂತದಲ್ಲಿ ಜಿಲ್ಲೆಯಲ್ಲಿದ್ದ ಮಹಿಳಾ ಬರಹಗಾರರ ಕೊರತೆ ಇದೀಗ ನೀಗಿದ್ದು, ಇಂದು ಜಿಲ್ಲೆಯಲ್ಲಿ ಹೆಚ್ಚಿನ ಮಹಿಳಾ ಸಾಹಿತಿಗಳು ಬೆಳೆದಿರುವುದು ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದರು.
ಜಿಲ್ಲೆಯಲ್ಲಿ ಈ ತನಕ ಕೊಡಗಿನ ಗೌರಮ್ಮ ದತ್ತಿ ಪುರಸ್ಕೃತರು ರಚಿಸಿರುವ ಎಲ್ಲಾ ಕೃತಿಗಳನ್ನು ಸಂಗ್ರಹಿಸಿ 25ನೇ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಗೌರಮ್ಮ ಸಮಗ್ರ ಗ್ರಂಥವನ್ನು ಹೊರ ತರುವ ಉದ್ದೇಶ ಹೊಂದಲಾಗಿದೆ. ಈ ಸಮಗ್ರ ಗ್ರಂಥವನ್ನು ಜಿಲ್ಲೆಯ ಶಾಲಾ-ಕಾಲೇಜಿನ ಗ್ರಂಥಾಲಯಕ್ಕೆ ನೀಡುವ ಮೂಲಕ ವಿದ್ಯಾರ್ಥಿಗಳ ಕಥಾ ಸಾಹಿತ್ಯ ರಚನೆಗೆ ಪ್ರೇರೇಪಣೆ ನೀಡಲಾಗುವುದು ಎಂದು ಹೇಳಿದರು.
ಮುಖ್ಯ ಭಾಷಣ ಮಾಡಿದ ಸಾಹಿತಿ, ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕೃತರಾದ ಸುನಿತಾ ಲೋಕೇಶ್, ಮಹಿಳಾ ಸಾಹಿತ್ಯದ ಬೆಳವಣಿಗೆ ಹಾಗೂ ಕೊಡಗಿನ ಕಥೆಗಾರ್ತಿ ಗೌರಮ್ಮ ಅವರ ಕಥೆಗಳ ಕುರಿತು ವಿವರಣೆ ನೀಡುತ್ತಾ, ಕೊಡಗಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಬರಹಗಾರರ ಸಂಖ್ಯೆ ವೃದ್ಧಿಸುತ್ತಿರುವುದು ಶ್ಲಾಘನೀಯವಾದುದು ಎಂದರು.
12ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಅಕ್ಕ ಮಹಾದೇವಿ ಮಹಿಳೆಯರ ಪ್ರೀತಿ, ವಾತ್ಸಲ್ಯ, ಸಂಕಷ್ಟ, ದುಗುಡ, ನೋವು- ನಲಿವುಗಳನ್ನು ಅಭಿವ್ಯಕ್ತಿಗೊಳಿಸಿದ್ದಾರೆ ಎಂದು ತಿಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕ.ಸಾ.ಪ.ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹ್ಮದ್, ಮಹಿಳಾ ಬರಹಗಾರರ ಬರವಣಿಗೆಗೆ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲಾ ಕ.ಸಾ.ಪ.ವತಿಯಿಂದ ನೀಡುವ ಕೊಡಗಿನ ಪ್ರತಿಷ್ಠಿತ ಪ್ರಶಸ್ತಿಯಾದ ಗೌರಮ್ಮ ದತ್ತಿ ಪ್ರಶಸ್ತಿಯನ್ನು ಈ ಬಾರಿ ಕವಿಯಿತ್ರಿ ಕೆ.ಜಿ.ರಮ್ಯ ಅವರ “ದಾಹಗಳ ಮೈ ಸವರುತ್ತಾ” ಎಂಬ ಕವನ ಸಂಕಲನಕ್ಕೆ ಲಭಿಸಿದೆ.
ಸ್ವಾತಂತ್ರ್ಯ ಸಂಗ್ರಾಮದ ವೇಳೆಯಲ್ಲಿ ಮಹಾತ್ಮ ಗಾಂಧೀಜಿಯವರ ತತ್ವ, ಆದರ್ಶ ಮೈಗೂಡಿಸಿಕೊಂಡ ಕಥೆಗಾರ್ಥಿ ಗೌರಮ್ಮ, ಪ್ರಗತಿಪರ ಚಿಂತನೆ ಮತ್ತು ಆಲೋಚನೆಗಳಿಂದ ತಮ್ಮ ಕಥೆಗಳಲ್ಲಿ ಮಹಿಳೆಯರ ಧ್ವನಿಯನ್ನು ಪ್ರತಿಬಿಂಬಿಸಿದ್ದಾರೆ ಎಂದರು.
ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಕೆ.ಜಿ.ರಮ್ಯ, ತಾವು ಕವನ ರಚಿಸಲು ತಮ್ಮ ಪರಿಸರದಲ್ಲಿ ಸಿಕ್ಕಿದ ಪ್ರೇರಣೆ ಹಾಗೂ ಸ್ನೇಹಿತರು ಮತ್ತು ಕುಟುಂಬದ ಸಹಕಾರವನ್ನು ಸ್ಮರಿಸಿದರು.
ಕಥಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ ಎಸ್.ಸುನಿಲ್ ಕುಮಾರ್, ಇಂತಹ ಸಾಹಿತ್ಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಲು ಸಹಕಾರಿಯಾಗಿವೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕ.ಸಾ.ಪ.ಗೌರವ ಕಾರ್ಯದರ್ಶಿ ರೇವತಿ ರಮೇಶ್, ಪ್ರಶಸ್ತಿ ಪುರಸ್ಕೃತರಾದ ಕೆ.ಜಿ.ರಮ್ಯ ಪರಿಚಯ ಮಾಡಿದರು.
ಜಿಲ್ಲಾ ಕ.ಸಾ.ಪ.ಸಮಿತಿ ನಿರ್ದೇಶಕ ಮೆ.ನಾ.ವೆಂಕಟನಾಯಕ್, ಮಡಿಕೇರಿ ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕಡ್ಲೇರ ತುಳಸಿ, ಕುಶಾಲನಗರ ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್, ಕೋಶಾಧಿಕಾರಿ ಕೆ.ವಿ.ಉಮೇಶ್, ಹೆಬ್ಬಾಲೆ ಹೋಬಳಿ ಕ.ಸಾ.ಪ. ಅಧ್ಯಕ್ಷ ಎಂ.ಎನ್.ಮೂರ್ತಿ, ಕವಿಯಿತ್ರಿ ಅವರ ತಾಯಿ ಬೇಬಿ ಮತ್ತು ಅವರ ಪತಿ ಪ್ರವೀಣ್ ಸೂಡ ಸೇರಿದಂತೆ ಮಹಿಳಾ ಸಾಹಿತಿಗಳು, ಬರಹಗಾರರು, ಕ.ಸಾ.ಪ.ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
ಉಪನ್ಯಾಸಕ ಎಸ್.ಆರ್.ಚರಣರಾಜ್ ಸ್ವಾಗತಿಸಿದರು. ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್ ವಂದಿಸಿದರು. ಡಾ ಎಸ್.ಸುನಿಲ್ ಕುಮಾರ್ ನಿರ್ವಹಿಸಿದರು. ಕವಿಯಿತ್ರಿ ರಮ್ಯ ಅವರ ಕವನಗಳನ್ನು ಸೌಮ್ಯಶೆಟ್ಟಿ ಮತ್ತು ಮಂಜುಳಾ ಚಿತ್ತಾಪುರ್ ವಾಚಿಸಿದರು.
ಶ್ರದ್ಧಾಂಜಲಿ :: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ದೇಶದ ಅಧ್ಯಕ್ಷ ಸಯ್ಯದ್ ಇಬ್ರಾಹಿಂ ರೈಸಿ ಮತ್ತು ಇತರರಿಗೆ ಕಾರ್ಯಕ್ರಮದ ಆರಂಭಕ್ಕೂ ಮುನ್ನ ಕಾಲೇಜು ಸಭಾಂಗಣದಲ್ಲಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.