Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಗಳ ಚುನಾವಣೆ : ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11, ನೈರುತ್ಯ 8, ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಗಳ ಚುನಾವಣೆ : ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11, ನೈರುತ್ಯ 8, ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿ*

ಮೇ 21, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 21 NEWS DESK : ಕರ್ನಾಟಕ ವಿಧಾನ ಪರಿಷತ್ತು ದ್ವೈವಾರ್ಷಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಚುನಾವಣೆಯು ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳಲ್ಲಿ ಮೇ, 20 ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನವಾಗಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 02, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ -01 ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ -01 ಅಭ್ಯರ್ಥಿ ನಾಮಪತ್ರಗಳನ್ನು ಹಿಂಪಡೆದಿದ್ದು, ಅಂತಿಮವಾಗಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ವಿವರ ಇಂತಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 08 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಭಾರತ ಚುನಾವಣಾ ಆಯೋಗ ಸೂಚಿಸಿರುವಂತೆ ಮತದಾರನ ಬೆರಳಿಗೆ ಅಳಿಸಲಾಗದ ಶಾಯಿಯನ್ನು ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಲಗೈ ತೋರುಬೆರಳು, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಲಗೈ ಮಧ್ಯದ ಬೆರಳು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಲಗೈ ತೋರುಬೆರಳಿಗೆ ಹಾಕಲಾಗುವುದು. ಈ ಚುನಾವಣೆಯಲ್ಲಿ ನೋಟಾ ಇರುವುದಿಲ್ಲ.
ಕರ್ನಾಟಕ ವಿಧಾನ ಪರಿಷತ್ತು ದ್ವೈವಾರ್ಷಿಕ ಚುನಾವಣೆ-2024 ಕ್ಕೆ ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾವಾರು ಮತಗಟ್ಟೆಗಳ ವಿವರ(ಹೆಚ್ಚುವರಿ ಮತಗಟ್ಟೆಗಳು ಸೇರಿ) ಮತ್ತು ಮತದಾರರ ವಿವರ ಇಂತಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 21,549 ಮತದಾರರು ಇದ್ದಾರೆ. ಅದರಲ್ಲಿ 11998 ಪುರುಷ ಮತದಾರರು, 9550 ಮಹಿಳಾ ಮತದಾರರು ಮತ್ತು 01 ಇತರೆ ಮತದಾರರು ಇದ್ದಾರೆ. ಒಟ್ಟು 44 ಮತಗಟ್ಟೆಗಳಿವೆ.
ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ ಸಂಖ್ಯೆ 05, ಒಟ್ಟು ಮತದಾರರು 2181 ಅದರಲ್ಲಿ 1448 ಪುರುಷ ಮತದಾರರು, 733 ಮಹಿಳಾ ಮತದಾರರು ಇದ್ದಾರೆ.
ಹಾಸನ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆ 10, ಒಟ್ಟು ಮತದಾರರು 3526 ಅದರಲ್ಲಿ 2085 ಪುರುಷರು ಮತ್ತು 1441 ಮಹಿಳಾ ಮತದಾರರು ಇದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಒಟ್ಟು 09 ಮತಗಟ್ಟೆಗಳಿದ್ದು, ಒಟ್ಟು 5403 ಮತದಾರರು ಇದ್ದಾರೆ. ಅದರಲ್ಲಿ 3127 ಪುರುಷ ಮತದಾರರು, 2276 ಮಹಿಳಾ ಮತದಾರರು ಇದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 20 ಮತಗಟ್ಟೆಗಳಿದ್ದು, ಒಟ್ಟು 10439 ಮತದಾರರು ಇದ್ದಾರೆ. ಅದರಲ್ಲಿ 5338 ಪುರುಷರು ಮತ್ತು 5100 ಮಹಿಳಾ ಮತದಾರರು, 1 ಇತರೆ ಮತದಾರರು ಇದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ (ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಉಡುಪಿ) ಒಟ್ಟು 79 ಮತಗಟ್ಟೆಗಳಿದ್ದು, 23402 ಮತದಾರರು ಇದ್ದಾರೆ. ಅದರಲ್ಲಿ 10487 ಪುರುಷರು ಮತ್ತು 12915 ಮಹಿಳಾ ಮತದಾರರು ಇದ್ದಾರೆ.
ಕೊಡಗು ಜಿಲ್ಲೆಯಲ್ಲಿ 05 ಮತಗಟ್ಟೆಗಳಿದ್ದು, 1578 ಮತದಾರರು ಇದ್ದಾರೆ. ಅದರಲ್ಲಿ 543 ಪುರುಷರು ಮತ್ತು 1035 ಮಹಿಳಾ ಮತದಾರು ಇದ್ದಾರೆ.
ನೈರುತ್ಯ ಪದವೀಧರರ ಕ್ಷೇತ್ರದಲ್ಲಿ (ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು ಉಡುಪಿ) ಒಟ್ಟು 108 ಮತಗಟ್ಟೆಗಳಿದ್ದು, ಒಟ್ಟು 85089 ಮತದಾರರು ಇದ್ದಾರೆ. ಅದರಲ್ಲಿ 43720 ಪುರುಷ ಮತದಾರರು, 41368 ಮಹಿಳಾ ಮತದಾರರು ಹಾಗೂ 1 ಇತರೆ ಮತದಾರರು ಇದ್ದಾರೆ.
ಕೊಡಗು ಜಿಲ್ಲೆಯಲ್ಲಿ 06 ಮತಗಟ್ಟೆಗಳಿದ್ದು, 3909 ಮತದಾರರು ಇದ್ದಾರೆ. ಅದರಲ್ಲಿ 1699 ಪುರುಷರು ಮತ್ತು 2210 ಮಹಿಳಾ ಮತದಾರರು ಇದ್ದಾರೆ.
ಮತದಾರರಿಗೆ ಯಾವುದೇ ವಿಧವಾದ ಆಮಿಷಗಳನ್ನು ಒಡ್ಡುವುದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದ್ದು, ಆಮಿಷ ಒಡ್ಡುತ್ತಿರುವ ಬಗ್ಗೆ ದೂರನ್ನು ಸಂಬಂಧಿಸಿದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮತ್ತು ಚುನಾವಣಾ ವೀಕ್ಷಕರಿಗೆ ಸಲ್ಲಿಸಬಹುದು. ಮೂರು ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರು(ಅಬ್ಸರ್‍ವರ್ಸ್) ನೇಮಕಗೊಂಡಿರುತ್ತಾರೆ.
ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರಾಗಿ ಅನಿಲ್ ಕುಮಾರ್ ಟಿ.ಕೆ ದೂ.ಸಂ. 7204064565, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಹರ್ಷ್ ಗುಪ್ತ ದೂ.ಸಂ. 7204294565 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಡಾ.ರವಿಶಂಕರ್ ದೂ. ಸಂ. 7204214565 ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ವೆಬ್‍ಸೈಟ್ https://rcmysore.karnataka.gov.in ನಲ್ಲಿ ಪ್ರಚಾರ ಪಡಿಸಲಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ…

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.