Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
  • *ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ವಿಡಿಯೋ ಸಂವಾದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ವಿಡಿಯೋ ಸಂವಾದ*

ಮೇ 23, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 NEWS DESK : ರಾಜ್ಯಾದ್ಯಂತ ‘ಪೂರ್ವ ಮುಂಗಾರು’ ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಆ ನಿಟ್ಟಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆ.
ಬರ ನಿರ್ವಹಣೆ ಮತ್ತು ‘ಮುಂಗಾರು’ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಗುರುವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಈಗಾಗಲೇ ಪೂರ್ವ ಮುಂಗಾರು ಉತ್ತಮವಾಗಿ ಆಗುತ್ತಿರುವ ಹಿನ್ನೆಲೆ ಹಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದೆ. ಆದ್ದರಿಂದ ಸಮರ್ಪಕವಾಗಿ ಬಿತ್ತನೆ ಬೀಜ ವಿತರಿಸುವುದು ಹಾಗೂ ರಸಗೊಬ್ಬರ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದರೂ ಸಹ, ಕೆಲವು ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಇದ್ದು, ಕುಡಿಯುವ ನೀರು ಸರಿಯಾಗಿ ಸರಬರಾಜು ಮಾಡಬೇಕು. ಜೊತೆಗೆ ಕುಡಿಯುವ ನೀರನ್ನು ಪ್ರತೀನಿತ್ಯ ಪರೀಕ್ಷಿಸಬೇಕು ಎಂದು ಮುಖ್ಯಮಂತ್ರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಇದೆ ಕೇಳಿ ಬರಬಾರದು. ಬೇಡಿಕೆಗೆ ಅನುಗುಣವಾಗಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಹೇಳಿದರು.
‘ಲೋಕಸಭಾ ಚುನಾವಣೆ ಹಿನ್ನೆಲೆ ಸುಮಾರು ಮೂರು ತಿಂಗಳ ಕಾಲ ಸುದೀರ್ಘ ಮಾದರಿ ನೀತಿ ಸಂಹಿತೆಯಿಂದಾಗಿ ಅಭಿವೃದ್ಧಿ ಕಾರ್ಯಗಳು ಒಂದು ರೀತಿ ಮಂದಗತಿಯಲ್ಲಿ ಸಾಗಿದೆ. ಆದ್ದರಿಂದ ಚುನಾವಣಾ ಆಯೋಗವು ಕೆಲವು ವಿನಾಯಿತಿಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯದತ್ತ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.’
ತುರ್ತು ಕೆಲಸಗಳಿಗೆ ಹೆಚ್ಚಿನ ಗಮನ ನೀಡಬೇಕು. ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದಂತೆ 12 ತಿಂಗಳಲ್ಲಿ ಮಾಡಬೇಕಿರುವ ಕಾರ್ಯಗಳನ್ನು ಹತ್ತು ತಿಂಗಳಲ್ಲಿ ನಿರ್ವಹಿಸಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಯೋಚಿಸಿ ಅಭಿವೃದ್ಧಿಯತ್ತ ಹೆಜ್ಜೆಯಿಡಬೇಕು ಎಂದರು.
ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಟೆಂಡರ್ ಆಹ್ವಾನಿಸಲು ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಚುನಾವಣಾ ಮಾದರಿ ನೀತಿ ಸಂಹಿತೆ ನೆಪ ಹೇಳಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ವಿಳಂಬ ಧೋರಣೆ ಅನುಸರಿಸಿದರೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
‘ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಕಾಲರಾ ರೋಗದಿಂದ ಒಬ್ಬ ಯುವಕ ಮೃತಪಟ್ಟಿದ್ದಾನೆ. ಎಲ್ಲಾ ಹಂತದ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿದರೆ ಇಂತಹ ಪ್ರಕರಣಗಳು ಕಂಡು ಬರುವುದಿಲ್ಲ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ತಪ್ಪುಗಳು ನಡೆದಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.’
ಆಯಾಯ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು, ಎಂಜಿನಿಯರ್‍ಗಳು ಗ್ರಾಮಗಳಿಗೆ ತೆರಳಿ ಸಾರ್ವಜನಿಕರ ಕುಂದುಕೊರತೆ ಆಲಿಸಬೇಕು, ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು, ಅದನ್ನು ಬಿಟ್ಟು ಕಾಲಾಹರಣ ಮಾಡುವುದು ಸರಿಯೇ ಎಂದು ಮುಖ್ಯಮಂತ್ರಿ ಅವರು ಪ್ರಶ್ನಿಸಿದರು.
ರೈತರಿಗೆ ಸಕಾಲದಲ್ಲಿ ಬ್ಯಾಂಕ್‍ಗಳ ಮೂಲಕ ಸಾಲ ದೊರೆಯಬೇಕು. ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಕೊರತೆಯಾಗದಂತೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಅವರು ತಾಕೀತು ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡದಿದ್ದರೆ ಆಡಳಿತ ವ್ಯವಸ್ಥೆಗೆ ಏನೆನ್ನಬೇಕು ಎಂದು ಖಾರವಾಗಿ ನುಡಿದರು.
ಶುದ್ಧ ಕುಡಿಯುವ ನೀರು ಪೂರೈಕೆ, ಕೃಷಿಕರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಬೇಕು. ಹೀಗೆ ಕೃಷಿ ಚಟುವಟಿಕೆ ಸಂಬಂಧಿಸಿದಂತೆ ಹೆಚ್ಚಿನ ಗಮನಹರಿಸಬೇಕು ಎಂದು ಉಪ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದರು.
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ ಬಾಕಿ ಇರುವ ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ಜೀವನೋಪಾಯ ಭತ್ಯೆ ನೀಡಬೇಕು. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಅಭಿವೃದ್ಧಿ ಕೆಲಸದಲ್ಲಿ ವೇಗ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಸಚಿವರಾದ ಎನ್.ಚೆಲುವರಾಯ ಸ್ವಾಮಿ ಅವರು ಮಾತನಾಡಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ರೈತರಿಗೆ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡಬಾರದು ಎಂದು ಸೂಚಿಸಿದರು.
ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ, ಪೌರಾಡಳಿತ ಸಚಿವರಾದ ರಹೀಂ ಖಾನ್, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿ ಅವರ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತಿಕ್ ಇತರರು ಇದ್ದರು.
ಬರ ನಿರ್ವಹಣೆ ಹಾಗೂ ಮುಂಗಾರು ಸಂಬಂಧ ಪೂರ್ವ ಸಿದ್ಧತೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ.ಸಿಇಒ ಅವರಿಂದ ವಿಡಿಯೋ ಸಂವಾದ ಮೂಲಕ ಮಾಹಿತಿ ಪಡೆದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ…

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.