Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡದಲ್ಲಿ ನಾಮಫಲಕ : ಡಿ.31 ರವರೆಗೆ ಕಾಲಾವಕಾಶ ಕೋರಿದ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡದಲ್ಲಿ ನಾಮಫಲಕ : ಡಿ.31 ರವರೆಗೆ ಕಾಲಾವಕಾಶ ಕೋರಿದ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ*

ಮೇ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 25 NEWS DESK : ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಮೇ 30 ರೊಳಗೆ ಪ್ರದರ್ಶಿಸಬೇಕೆಂದು ನೀಡಿರುವ ಗಡುವನ್ನು ಡಿ.31 ರವರೆಗೆ ವಿಸ್ತರಿಸಬೇಕೆಂದು ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಜಿಲ್ಲಾಡಳಿತದ ಬಳಿ ಮನವಿ ಮಾಡಿದೆ.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ನಾಮಫಲಕವನ್ನು ಬದಲಾಯಿಸಲು ಅಡಚಣೆಯಾಗಿದೆ. ಅಲ್ಲದೆ ಆರ್ಥಿಕ ಪರಿಸ್ಥಿತಿಯೂ ಹಿನ್ನಡೆಯನ್ನುಂಟು ಮಾಡುತ್ತಿದೆ ಎಂದರು.
ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿರುವಂತೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕದಲ್ಲಿ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ, ವ್ಯವಹಾರ ಉದ್ಯಮಗಳು, ಟ್ರಸ್ಟ್‍ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‍ಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕೆಂದು ಸರಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಹಾಸಭೆಗೆ ಆಗಮಿಸಿದ್ದ ನಗರಸಭೆಯ ಅಧಿಕಾರಿಗಳು ಮಾಹಿತಿ ಮತ್ತು ಅಧಿಸೂಚನೆಯ ಪ್ರತಿಯನ್ನು ನೀಡಿ ಮೇ 30 ರೊಳಗೆ ಶೇ.60 ರಷ್ಟು ಕನ್ನಡ ಭಾಷೆ ಇರುವ ನಾಮಫಲಕ ಅಳವಡಿಸುವಂತೆ ಸೂಚಿಸಿದ್ದಾರೆ. ಆದರೆ ಕೊಡಗಿನ ವಾತಾವರಣ ಮತ್ತು ವ್ಯಾಪಾರಿಗಳ ಆರ್ಥಿಕ ಪರಿಸ್ಥಿತಿ ಇದಕ್ಕೆ ಪೂರಕವಾಗಿಲ್ಲ. ಕೆಲವು ವಾಣಿಜ್ಯೋದ್ಯಮಿಗಳು ಇತ್ತೀಚೆಗಷ್ಟೇ ಸಾವಿರಾರು ರೂಪಾಯಿ ಖರ್ಚು ಮಾಡಿ ನಾಮಫಲಕಗಳನ್ನು ಅಳವಡಿಸಿದ್ದಾರೆ. ಸಧ್ಯದ ಪರಿಸ್ಥಿತಿಯಲ್ಲಿ ಮತ್ತೆ ನಾಮಫಲಕದ ಬದಲಾವಣೆ ಕಷ್ಟವಾಗಲಿದೆ.
ಆದ್ದರಿಂದ ವರ್ತಕರ ಹಾಗೂ ವಾಣಿಜ್ಯೋದ್ಯಮಿಗಳ ಹಿತದೃಷ್ಟಿಯಿಂದ ಡಿ.31 ರವರೆಗೆ ಗಡುವು ವಿಸ್ತರಿಸಿ ಸಹಕರಿಸಬೇಕೆಂದು ಬಿ.ಆರ್.ನಾಗೇಂದ್ರ ಪ್ರಸಾದ್ ಮನವಿ ಮಾಡಿದರು. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಬಳಸುವುದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ಸ್ಪಷ್ಟಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.