Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 29 ರಿಂದ ಶಾಲೆಗಳ ಪುನರ್ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 29 ರಿಂದ ಶಾಲೆಗಳ ಪುನರ್ ಆರಂಭ*

ಮೇ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 28 NEWS DESK : ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ, 29 ರಿಂದ ಪುನರ್ ಆರಂಭವಾಗಲಿದ್ದು, ಮೇ, 31 ರಂದು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಪ್ರಾರಂಭೋತ್ಸವ ಜರುಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಎಂ.ಮಹದೇವಸ್ವಾಮಿ ತಿಳಿಸಿದ್ದಾರೆ.
ಪ್ರಸಕ್ತ (2024-25) ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಪುನರ್ ಆರಂಭಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆಯು ಮೇ 29 ರಂದು ನಡೆಯಲಿದೆ. ಶಾಲಾ ಆವರಣ, ಶಾಲಾ ಕೊಠಡಿ ಹಾಗೂ ಶೌಚಾಲಯ ಸ್ವಚ್ಚತೆ, ಕುಡಿಯುವ ನೀರು, ಸಂಪು, ಟ್ಯಾಂಕ್ ಸ್ವಚ್ಚತೆ, ಅಡುಗೆ ಮನೆ ಪಾತ್ರೆಗಳು, ಆಹಾರ ಧಾನ್ಯಗಳ ವ್ಯವಸ್ಥೆ, ಶಾಲಾ ವೇಳಾಪಟ್ಟಿ, ತರಗತಿ ವೇಳಾಪಟ್ಟಿ, ಶಿಕ್ಷಕರಿಗೆ ವಿಷಯ ಮತ್ತು ತರಗತಿ ಹಂಚಿಕೆ ಮತ್ತಿತರ ಕಾರ್ಯಗಳು ನಡೆಯಲಿವೆ ಎಂದು ವಿವರಿಸಿದರು.
ಮೇ 30 ರಂದು ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಪೋಷಕರ ಜೊತೆ ಪೂರ್ವಭಾವಿ ಸಭೆಯು ಆಯಾಯ ಶಾಲೆಗಳಲ್ಲಿ ನಡೆಯಲಿದೆ. ಮೇ 31 ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದೆ ಎಂದು ಎಂ.ಮಹದೇವಸ್ವಾಮಿ  ತಿಳಿಸಿದರು.
ಮೇ, 31 ರಂದು ಶಾಲೆಗಳಿಗೆ ತಳಿರು ತೋರಣ ಕಟ್ಟಿ, ಗುಲಾಬಿ ಹೂವು ನೀಡಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಬರಮಾಡಿಕೊಳ್ಳಲಾಗುತ್ತದೆ. ಹಾಗೆಯೇ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಗುತ್ತದೆ. ಪಾಠ ಪ್ರವಚನ ಪ್ರಾರಂಭಿಸಿ ಬಿಸಿಯೂಟದೊಂದಿಗೆ ಕಾರ್ಯಕ್ರಮ ಶುರುವಾಗಲಿದೆ ಎಂದು ವಿವರಿಸಿದರು.
ಶಾಲೆಯ ಮಕ್ಕಳು ಶಾಲೆಗೆ ದಾಖಲಾಗುವ ಸಂಬಂಧ ಎಸ್‍ಎಟಿಎಸ್ ತಂತ್ರಾಂಶದಲ್ಲಿ ಪೂರ್ಣ ಪ್ರಮಾಣದಲ್ಲಿ ಮಕ್ಕಳಿಗೆ ಪ್ರಗತಿ ಪತ್ರವನ್ನು ಹಾಗೂ ಬೇರೆ ಶಾಲೆಗೆ ವರ್ಗಾವಣೆ ಪತ್ರಗಳನ್ನು ಕೋರಿಕೆ ಮೇರೆಗೆ ವರ್ಗಾಯಿಸುವುದು, ಪ್ರಸಕ್ತ ಸಾಲಿಗೆ 1 ನೇ ತರಗತಿಗೆ ದಾಖಲಾಗುವ ಮಕ್ಕಳ ಮಾಹಿತಿಯನ್ನು ಎಸ್‍ಎಟಿಎಸ್ ತಂತ್ರಾಂಶದಲ್ಲಿ ಇಂದೀಕರಿಸಲಾಗುತ್ತದೆ (ಮಕ್ಕಳ ದಾಖಲಾತಿ) ಎಂದು ಮಾಹಿತಿ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿಗಧಿಪಡಿಸಿರುವ ವೇಳಾಪಟ್ಟಿಯಂತೆ ತರಗತಿಗಳು ನಡೆಯಲಿವೆ. ಮೇ 31 ರಿಂದ ಮೂರನೇ ತರಗತಿ ಮಕ್ಕಳಿಗೆ 40 ದಿನಗಳ ವಿದ್ಯಾ ಪ್ರವೇಶ ಕಾರ್ಯಕ್ರಮದ ಮಾರ್ಗಸೂಚಿ ಮತ್ತು ವೇಳಾಪಟ್ಟಿಯಂತೆ ತರಗತಿ ನಡೆಸಲಾಗುತ್ತದೆ. ಸೇತುಬಂಧ ಚಟುವಟಿಕೆ ಮತ್ತು ಮೂಲ ಕಲಿಕಾಂಶ ಆಧಾರಿತ ಕಲಿಕೆಯನ್ನು ಅನುಷ್ಠಾನಗೊಳಿಸಿ ಮಕ್ಕಳಲ್ಲಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನವನ್ನು ಅಭಿವೃದ್ಧಿಪಡಿಸಿ ಕಲಿಕಾ ಅಂತರವನ್ನು ನೀಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಎಲ್ಲಾ ಸಿಆರ್‍ಪಿ, ಡಿಆರ್‍ಪಿ, ಬಿಐಇಆರ್‍ಟಿ ಹಾಗೂ ಇಸಿಒ ಗಳು ತಮ್ಮ ವ್ಯಾಪ್ತಿಗೆ ಬರುವ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಗಮನಹರಿಸುವುದು, ಶಾಲೆಯಲ್ಲಿ ಮಾಡಿಕೊಂಡಿರುವ ಪೂರ್ವ ಸಿದ್ಧತೆಗಳನ್ನು ಖಾತರಿಪಡಿಸಿಕೊಳ್ಳಲು ತಿಳಿಸಲಾಗಿದೆ ಎಂದು ಹೇಳಿದರು.
ಮೇ 29 ರಿಂದ ದಾಖಲಾತಿ ಆಂದೋಲನ ನಡೆಸಿ ಮನೆ ಮನೆಗೆ ಭೇಟಿ ನೀಡಿ ನಿಗಧಿತ ವಯೋಮಾನದ ಮಕ್ಕಳನ್ನು ಶಾಲೆಗೆ ಬರ ಮಾಡಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುತ್ತದೆ ಎಂದರು.
ಮಳೆಗಾಲ ಆರಂಭ ಆಗಿರುವುದರಿಂದ ಶಾಲಾ ಕೊಠಡಿ ಸುರಕ್ಷತೆ ಬಗ್ಗೆ ಆದ್ಯ ಗಮನಹರಿಸುವುದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿ, ಸುತ್ತೋಲೆ, ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಹಿತಿ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಕಳೆದ ವರ್ಷ(2023-24 ನೇ ಸಾಲಿನಲ್ಲಿ ಸರ್ಕಾರಿ ಅನುದಾನಿತ, ಅನುದಾನ ರಹಿತ) 1 ರಿಂದ 10ನೇ ತರಗತಿವರೆಗೆ 72,160 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು.
ಪೂರಕ ಪರೀಕ್ಷೆ-2: ಜೂನ್, 14 ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ-2 ನಡೆಯಲಿದೆ ಎಂದು ಎಂ.ಮಹದೇವಸ್ವಾಮಿ ಅವರು ಹೇಳಿದ್ದಾರೆ.
ಸಿ ಮತ್ತು ಸಿ+ ಪಡೆದಿರುವ 60 ವಿದ್ಯಾರ್ಥಿಗಳು, ಪುನರಾವರ್ತಿತ 629 ಮತ್ತು ಖಾಸಗಿಯಾಗಿ 15 ಒಟ್ಟು 704 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ-2 ಬರೆಯಲಿದ್ದಾರೆ ಎಂದು ಎಂ.ಮಹದೇವಸ್ವಾಮಿ ಮಾಹಿತಿ ನೀಡಿದರು.
ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆಯ ಜೂನಿಯರ್ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ‘ವಿಶೇಷ ಪರಿಹಾರ ಬೋಧನೆ’ ತರಗತಿಗಳು ಮೇ 29 ರಿಂದ ಜೂನ್, 13 ರವರೆಗೆ ಆಯಾಯ ಶಾಲೆಗಳಲ್ಲಿ ನಡೆಯಲಿದೆ ಎಂದರು.
ಕೊಡಗು ಜಿಲ್ಲೆ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ 4 ನೇ ಸ್ಥಾನ ಪಡೆದಿದ್ದು, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿರುವುದು ವಿಶೇಷವಾಗಿದೆ ಎಂದು ಎಂ.ಮಹದೇವಸ್ವಾಮಿ ಅವರು ವಿವರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.