Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಸ್ಲಿಂ ಕಪ್ ಫುಟ್ಬಾಲ್ : ಅಲ್-ಅಮೀನ್ ಪಾಲಿಬೆಟ್ಟ ಚಾಂಪಿಯನ್ಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಸ್ಲಿಂ ಕಪ್ ಫುಟ್ಬಾಲ್ : ಅಲ್-ಅಮೀನ್ ಪಾಲಿಬೆಟ್ಟ ಚಾಂಪಿಯನ್ಸ್*

ಮೇ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 28 NEWS DESK : ತಾಜ್ ಯೂತ್ ಕ್ಲಬ್ ಕುಶಾಲನಗರ ಹಾಗೂ ಕೊಡಗು ಜಿಲ್ಲಾ‌ ಮುಸ್ಲಿಂ ಕಪ್ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಕುಶಾಲನಗರದ ಜಿ.ಎಂ.ಪಿ‌ ಶಾಲಾ ಮೈದಾನದಲ್ಲಿ ನಡೆದ 5ನೇ ವರ್ಷದ ಕೊಡಗು ಜಿಲ್ಲಾ ಮಟ್ಟದ ಮುಸ್ಲಿಂ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಲ್-ಅಮೀನ್ ಪಾಲಿಬೆಟ್ಟ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ರೋಜಾರಿಯನ್ಸ್ ಗೋಣಿಕೊಪ್ಪ ತಂಡ ಪಡೆದುಕೊಂಡಿತು.
ಎರಡು ಬಲಿಷ್ಠ ತಂಡಗಳಾದ ಅಲ್-ಅಮೀನ್ ಪಾಲಿಬೆಟ್ಟ ಹಾಗೂ ರೋಜಾರಿಯನ್ಸ್ ಗೋಣಿಕೊಪ್ಪ ತಂಡಗಳ ನಡುವಿನ ಫೈನಲ್ ಪಂದ್ಯವು 20-20 ನಿಮಿಷಗಳಲ್ಲಿ ಮೊದಲಾರ್ಧದಲ್ಲಿ ಎರಡು ತಂಡವು ಸಮಬಲದ ಹೋರಾಟ ನಡೆಯಿತು. ದ್ವಿತೀಯಾರ್ಧದಲ್ಲಿ ರೋಜಾರಿಯನ್ಸ್ ತಂಡವು ಆಕ್ರಮಣಕಾರಿ ಆಟಕ್ಕೆ ‌ಮುಂದಾಗಿ ತಂಡದ ಮುನ್ನಡೆ ಆಟಗಾರ ಸುಹೈಲ್ ಅವರ ಗೋಲುಬಾರಿಸುವುದರ ಮೂಲಕ 1-0 ಗೋಲುಗಳ ಅಂತರದಿಂದ ಮುನ್ನಡೆ ಪಡೆಯಿತು.
ದ್ವಿತೀಯಾರ್ಧದ ಕೊನೆಯ ಮೂರು ನಿಮಿಷ ಬಾಕಿ ಉಳಿದಿರುವಾಗ ಅಲ್-ಅಮೀನ್ ತಂಡಕ್ಕೆ ಅದೃಷ್ಟ ಲಕ್ಷ್ಮಿಯಿಂತೆ ಫೀಲ್ಡ್ ನಲ್ಲಿ ಪೆನಾಲ್ಟಿ ಏರಿಯಾದಲ್ಲಿ ಎದುರಾಳಿ ತಂಡದ ಆಟಗಾರನ ಕೈ ಚೆಂಡು ತಾಗಿ ತೀರ್ಪುಗಾರರ ಪೆನಾಲ್ಟಿ ನೀಡಿತು.
ಅಲ್-ಅಮೀನ್ ತಂಡದ ಸ್ಟಾರ್ ಆಟಗಾರ ನಾಸಿಫ್ ತಮಗೆ ಸಿಕ್ಕ ಸುರ್ವಣವಕಾಶವನ್ನು ಸದ್ಬಳಕೆ ಮಾಡಿ,ಪೆನಾಲ್ಟಿ ಕಿಕ್ ಅನ್ನು ಗೋಲು ಬಾರಿಸುವುದರ ಮೂಲಕ ಕೊನೆಯ ಕ್ಷಣದಲ್ಲಿ ಸಮಬಲ ಸಾಧಿಸಿದರು.
ಎರಡು ತಂಡಗಳು 1-1 ಗೋಲುಗಳಿಸಿ ಸಮಬಲ ಸಾಧಿಸಿದ ಫೈನಲ್ ಪಂದ್ಯದ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆಹೋಗಲಾಯಿತು.
ಪೆನಾಲ್ಟಿ ಶೂಟೌಟ್ ನಲ್ಲಿ ಅಲ್ ಅಮೀನ್ ತಂಡವು 4-3 ಗೋಲುಗಳ ಅಂತರದಿಂದ ರೋಜಾರಿಯನ್ಸ್ ತಂಡವನ್ನು ಮಣಿಸಿ ಎರಡನೇ ಬಾರಿಗೆ ಕೊಡಗು ಜಿಲ್ಲಾ ಮುಸ್ಲಿಂ ಕಪ್ ಫುಟ್ಬಾಲ್ ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿತು.

ಇದಕ್ಕೂ ಮೊದಲು ನಡೆದ ಮೊದಲನೆಯ ಸೆಮಿಫೈನಲ್ ಪಂದ್ಯವು ಅಲ್-ಅಮೀನ್ ಪಾಲಿಬೆಟ್ಟ ಹಾಗೂ ಅಮಿಟಿ ಯುನೈಟೆಡ್ ಗದ್ದೆಹಳ್ಳ ತಂಡಗಳ ನಡುವೆ ನಡೆಯಿತು.
ಅಲ್-ಅಮೀನ್ ಪಾಲಿಬೆಟ್ಟ ತಂಡವು ಅಮಿಟಿ ಯುನೈಟೆಡ್ ಗದ್ದೆಹಳ್ಳ ತಂಡವನ್ನು ಪೆನಾಲ್ಟಿ ಶೂಟೌಟ್ ನಲ್ಲಿ ಮಣಿಸಿ ಫೈನಲ್ ಪ್ರವೇಶಿಸಿತು.
ಎರಡನೇ ಸೆಮಿಫೈನಲ್ ಪಂದ್ಯವು ಕಳೆದ ವರ್ಷದ ಚಾಂಪಿಯನ್ ತಂಡ ಸಹರಾ ಹೊಳಮಾಳ ಹಾಗೂ ರೋಜಾರಿಯನ್ಸ್ ಗೋಣಿಕೊಪ್ಪ ತಂಡಗಳ ನಡುವೆ ನಡೆಯಿತು. ರೋಜಾರಿಯನ್ಸ್ ಗೋಣಿಕೊಪ್ಪ ತಂಡವು 2-0 ಗೋಲುಗಳ ಅಂತರದಿಂದ ಗೆದ್ದು ಫೈನಲ್ ಪ್ರವೇಶಿಸತು.

ಸೆಮಿಫೈನಲ್ ಪಂದ್ಯದಲ್ಲಿ ಸೋಲು ಕಂಡ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಅಮಿಟಿ ಯುನೈಟೆಡ್ ತಂಡವು ಪೆನಾಲ್ಟಿ ಶೂಟೌಟ್ ನಲ್ಲಿ ಸಹಾರ ತಂಡವನ್ನು ಮಣಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿತು.
ಕಳೆದ ಬಾರಿಯ ಚಾಂಪಿಯನ್ ತಂಡ ಸಹರಾ ಹೊಳಮಾಳ ತಂಡವು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಪಂದ್ಯಾವಳಿಯ ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಯು ಅಫೀಜ್,ಅತ್ಯುತ್ತಮ ಡಿಫೆಂಡರ್ ರೋಜಾರಿಯನ್ಸ್ ತಂಡದ ತನ್ವೀರ್ ಚಿನ್ನು,ಅತೀ ಹೆಚ್ಚು ಗೋಲುಬಾರಿಸಿದ ಆಟಗಾರ ಸಹರಾ ಹೊಳಮಾಳ ತಂಡದ ಜುನೈದ್,ಪಂದ್ಯಾವಳಿಯ ಅತ್ಯುತ್ತಮ ಆಟಗಾರ ಅಲ್-ಅಮೀನ್ ಪಾಲಿಬೆಟ್ಟ ತಂಡದ ನಾಸಿಫ್ ,ಅತ್ಯುತ್ತಮ ಮುನ್ನಡೆ ಆಟಗಾರ ಅಲ್ -ಅಮೀನ್ ಪಾಲಿಬೆಟ್ಟ ತಂಡದ ಅನ್ಸಾರ್,ಬೆಸ್ಟ್ ಗೋಲ್ ಕೀಪರ್ ಹಫೀಜ್ ಅಮಿಟಿ ಯುನೈಟೆಡ್ ಗದ್ದೆಹಳ್ಳ, ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಹುಂಡಿ ತಂಡದ ಫಜೀಲ್ ಪಡೆದುಕೊಂಡರು.
ಪಂದ್ಯಾವಳಿಯ ತೀರ್ಪುಗಾರರಾಗಿ ದರ್ಶನ್ ಸುಕುಮಾರ್ ಮರಗೋಡು, ಅಭಿಷೇಕ್, ರಂಗ ಹಾಗೂ ಕಾರ್ತಿಕ್ ಕುಶಾಲನಗರ ಕಾರ್ಯನಿರ್ವಹಿಸಿದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಕೊಡಗು ಮುಸ್ಲಿಂ ಕಪ್ ಫುಟ್ಬಾಲ್ ಸಂಸ್ಥಾಪಕ ಆಸಿಫ್(ಆಪು)ಕೊಂಡಂಗೇರಿ, ತಯ್ಯೂಬ್ ಕೊಂಡಂಗೇರಿ, ಕುಶಾಲನಗರ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಪುರಸಭೆ ಸದಸ್ಯ ಶೇಖ್ ಖಲೀಮುಲ್ಲ, ಪಂದ್ಯಾವಳಿ ಸಂಚಾಲಕ ಅಝರ್, ತಾಜ್ ಯುತ್ ಫ್ರೆಂಡ್ಸ್ ಅಧ್ಯಕ್ಷ ಮುಜೀಬ್, ಕಾಂಗ್ರೆಸ್ ಯುವ ನಾಯಕ ರಂಜನ್( ಹೆಬ್ಬಾಲೆ ರಂಜು), ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಂ, ಭಾಷಾ ರಾಯಲ್ ಬಿರಿಯಾನಿ, ಫುಟ್ಬಾಲ್ ಮಾಜಿ ಆಟಗಾರ ರಫೀಕ್, ಪತ್ರಕರ್ತ ಇಸ್ಮಾಯಿಲ್ ಕಂಡಕರೆ, ಅಪೋಲೋ ಟೈಯರ್ ಮಾಲೀಕರಾದ ಅಮ್ಜದ್ ಪಾಷಾ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.